Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿನ್ಯಾಸ ಸಂಬಂಧಿ ಕಲಿಕೆ; ಲಿವರ್ ಪೂಲ್...

ವಿನ್ಯಾಸ ಸಂಬಂಧಿ ಕಲಿಕೆ; ಲಿವರ್ ಪೂಲ್ ವಿವಿ ಜತೆ ಐಎಸ್‍ಡಿಸಿ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2022 6:45 PM IST
share
ವಿನ್ಯಾಸ ಸಂಬಂಧಿ ಕಲಿಕೆ; ಲಿವರ್ ಪೂಲ್ ವಿವಿ ಜತೆ ಐಎಸ್‍ಡಿಸಿ ಒಡಂಬಡಿಕೆ

ಬೆಂಗಳೂರು, ಜೂ.9: ಅಂತರ್‍ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಐಎಸ್‍ಡಿಸಿ) ಮತ್ತು ಯುನೈಟೆಡ್ ಕಿಂಗ್ಡಮ್‍ನ ಪ್ರತಿಷ್ಠಿತ ಲಿವರ್‍ಪೂಲ್ ಜಾನ್ ಮೂರ್ಸ್ ವಿಶ್ವವಿದ್ಯಾಲಯ(ಎಲ್ ಜೆಎಂಯು)ಗಳು ವಿನ್ಯಾಸ ಸಂಬಂಧಿ ಕೋರ್ಸುಗಳ ಗುಣಮಟ್ಟದ ಕಲಿಕೆಯನ್ನು ಸಾಧ್ಯವಾಗಿಸುವ ಸಹಭಾಗಿತ್ವ ಒಡಂಬಡಿಕೆ ವಿನಿಮಯ ಮಾಡಿಕೊಂಡಿವೆ.

ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಗುರುವಾರ ಇಲ್ಲಿನ ಖಾಸಗಿ ಹೊಟೇಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಈ ಸಂಸ್ಥೆಗಳು ಒಪ್ಪಂದ ವಿನಿಮಯ ಮಾಡಿಕೊಂಡವು.

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, `ಐಎಸ್‍ಡಿಸಿ ಮತ್ತು ಎಲ್‍ಜೆಎಂಯು ನಡುವಿನ ಒಪ್ಪಂದದಿಂದಾಗಿ ವಿನ್ಯಾಸ ಮತ್ತು ಕಲೆಗಳಿಗೆ ಸಂಬಂಧಿಸಿದ ಅತ್ಯಾಧುನಿಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳ ಕಲಿಕೆ ಸಾಧ್ಯವಾಗಲಿದೆ’ ಎಂದರು.

ಈ ಸಹಭಾಗಿತ್ವದ ಅನ್ವಯ ಎಲ್‍ಜೆಎಂಯು ವಿದ್ಯಾರ್ಥಿಗಳು ಕೂಡ ಭಾರತಕ್ಕೆ ಬಂದು ಇಲ್ಲಿನ ಪ್ರತಿಷ್ಠಿತ ವಿ.ವಿ.ಗಳಲ್ಲಿ ಕಲಿಯಲಿದ್ದಾರೆ. ಅಲ್ಲಿನ ಇನ್ನೂ ಹಲವು ವಿ.ವಿ.ಗಳು ಭಾರತದೊಂದಿಗೆ ಕೈಜೋಡಿಸಲು ಉತ್ಸುಕವಾಗಿವೆ. ಇತ್ತೀಚೆಗೆ ಲಂಡನ್ನಿಗೆ ತೆರಳಿದ್ದಾಗ ಈ ನಿಟ್ಟಿನಲ್ಲಿ ಅಲ್ಲಿನ ಹಲವು ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಐಎಸ್‍ಡಿಸಿ ಕೇರಳದ ಕೊಚ್ಚಿನ್‍ನಲ್ಲಿರುವ ಕ್ಯಾಂಪಸ್ಸಿನಲ್ಲಿ ಈ ಕೋರ್ಸುಗಳನ್ನು ವ್ಯವಸ್ಥೆ ಮಾಡಲಿದೆ ಎಂದು ಅವರು ತಿಳಿಸಿದರು.

ಎನ್‍ಇಪಿ ನೀತಿಯಲ್ಲಿ ಅಂತರ್ಶಿಸ್ತೀಯ ಸಂಶೋಧನೆ, ಉದ್ಯಮಗಳೊಂದಿಗೆ ಸಕ್ರಿಯ ಸಂಪರ್ಕ ಮತ್ತು ಶಿಕ್ಷಣದ ಅಂತರ್‍ರಾಷ್ಟ್ರೀಕರಣಕ್ಕೆ ಒತ್ತು ಕೊಡಲಾಗಿದೆ. ಇಂತಹ ಒಡಂಬಡಿಕೆಗಳಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ನೆರವು ಸಿಗಲಿದೆ ಎಂದು ಅವರು ಆಶಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಐಎಸ್‍ಡಿಸಿ ಮುಖ್ಯಸ್ಥ ಡಾ.ಟಾಮ್ ಜೋಸೆಫ್, ಯುನೈಟೆಡ್ ಕಿಂಗ್ಡಮ್‍ನ 20 ವಿದ್ಯಾರ್ಥಿಗಳು ಮುಂದಿನ ತಿಂಗಳು ರಾಜ್ಯಕ್ಕೆ ಬರಲಿದ್ದಾರೆ. ಇಲ್ಲಿ ಅವರು ವಿವಿಧ ವಿ.ವಿ.ಗಳಲ್ಲಿ ಒಂದು ತಿಂಗಳು ಇರಲಿದ್ದು, ಉದ್ಯಮಿಗಳು ಮತ್ತು ಶಿಕ್ಷಣ ತಜ್ಞರ ಜತೆ ವಿಚಾರ ವಿನಿಮಯ ಕೈಗೊಳ್ಳಲಿದ್ದಾರೆ. ಜತೆಯಲ್ಲಿ ಸಾಂಸ್ಕೃತಿಕ ವಿನಿಮಯವೂ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಲಿವರ್‍ಪೂಲ್ ವಿ.ವಿ.ಯ ಸಮಕುಲಾಧಿಪತಿ ಪ್ರೊ.ಜೋಯೇಟ್ಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X