Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿ ರಿಪೋರ್ಟ್ ಸಲ್ಲಿಸಿದ ಬಳಿಕವೂ ತನಿಖೆ...

ಸಿ ರಿಪೋರ್ಟ್ ಸಲ್ಲಿಸಿದ ಬಳಿಕವೂ ತನಿಖೆ ಮುಂದುವರಿಸಬಹುದು: ಹೈಕೋರ್ಟ್ ಗೆ ವಕೀಲರ ಹೇಳಿಕೆ

ಅಮೃತರಾಜ್ ವಿರುದ್ಧದ ಕೊಲೆ ಯತ್ನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ9 Jun 2022 7:44 PM IST
share
ಸಿ ರಿಪೋರ್ಟ್ ಸಲ್ಲಿಸಿದ ಬಳಿಕವೂ ತನಿಖೆ ಮುಂದುವರಿಸಬಹುದು: ಹೈಕೋರ್ಟ್  ಗೆ ವಕೀಲರ ಹೇಳಿಕೆ

ಬೆಂಗಳೂರು, ಜೂ.9: ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷ ಎ. ಅಮೃತರಾಜ್ ವಿರುದ್ಧ ಹೂಡಲಾಗಿರುವ ಜೀವ ಬೆದರಿಕೆ ಪ್ರಕರಣದಲ್ಲಿ ಸಮನ್ಸ್ ಜಾರಿಗೊಳಿಸಿರುವುದನ್ನು ರದ್ದುಗೊಳಿಸಬೇಕು ಎಂದು ಕೋರಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನ ಪೂರ್ವ ನಿದರ್ಶನಗಳನ್ನು ನ್ಯಾಯಾಲಯಕ್ಕೆ ಪ್ರಸ್ತುತಪಡಿಸಿ ಎಂದು ದೂರುದಾರರ ಪರವಕೀಲರಿಗೆ ಹೈಕೋರ್ಟ್ ಸೂಚಿಸಿದೆ. ದೂರುದಾರರ ಪರ ವಕೀಲರೂ ಸಿ ರಿಪೋರ್ಟ್ ಸಲ್ಲಿಸಿದ ಬಳಿಕವೂ ತನಿಖೆ ಮುಂದುವರೆಸಬಹುದು ಎಂದು ಹೈಕೋರ್ಟ್‍ಗೆ ತಿಳಿಸಿದ್ದಾರೆ. 

ನನ್ನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆಯತ್ನ, ಜೀವ ಬೆದರಿಕೆ ಆರೋಪದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ಅಮೃತರಾಜ್ ಅವರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ, ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ಅಮೃತರಾಜ್ ಪರ ವಕೀಲರು ವಾದ ಮಂಡಿಸಿ, ಈ ಪ್ರಕರಣದಲ್ಲಿ ಈಗಾಗಲೇ ಯಶವಂತಪುರ ಮತ್ತು ಆರ್‍ಎಂಸಿ ಯಾರ್ಡ್ ಪೊಲೀಸರು ಎರಡು ಬಾರಿ ‘ಸಿ’ ರಿಪೋರ್ಟ್ ಸಲ್ಲಿಸಿದ್ದಾರೆ. ನ್ಯಾಯಾಲಯದ ಆದೇಶ ವಿಲ್ಲದೆ ಪ್ರಕರಣದ ಮುಂದುವರಿದ ತನಿಖೆಯನ್ನು ಕೈಗೊಂಡು ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಕಾನೂನುಬಾಹಿರ. ಹೀಗಾಗಿ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಪೀಠಕ್ಕೆ ತಿಳಿಸಿದರು. 

ದೂರುದಾರರೂ ಆದ ಪ್ರತಿವಾದಿ ಬಿ.ಆರ್.ಮುರಳೀಧರ ಪರ ವಾದ ಮಂಡಿಸಿದ ವಕೀಲ ಸಿ.ಎಚ್.ಹನುಮಂತರಾಯ ಅವರು, ಸಿ ರಿಪೆÇೀರ್ಟ್ ಸಲ್ಲಿಸಿದ ಮಾತ್ರಕ್ಕೆ ಪ್ರಕರಣ ಮುಕ್ತಾಯವಾಗಿದೆ ಎಂದರ್ಥವಲ್ಲ. ಕರ್ನಾಟಕ ಪೊಲೀಸ್ ಮ್ಯಾನುಯಲ್ ಅನುಸಾರ ಅಂತಿಮ ‘ಸಿ’ ವರದಿ ಸಲ್ಲಿಸಿದ ಪ್ರಕರಣದಲ್ಲಿ ತನಿಖಾಧಿಕಾರಿಗೆ ಯಾವುದಾದರೂ ಸಾಕ್ಷ್ಯ ಲಭಿಸಿದಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೆ ಸ್ವಯಂ ಅಥವಾ ಮೇಲಧಿಕಾರಿಯ ಆದೇಶದ ಮೇರೆಗೆ ತನಿಖೆ ಮುಂದುವರೆಸಬಹುದು ಎಂದು ಪೀಠಕ್ಕೆ ತಿಳಿಸಿದರು. 

ಬಿ ರಿಪೋರ್ಟ್ ಸಲ್ಲಿಸಿದಾಗ ಮಾತ್ರ ಪ್ರಕರಣ ಮುಕ್ತಾಯವಾಗಿದೆ ಎಂದರ್ಥ. ಮುಂದುವರೆದ ತನಿಖೆಗೆ ನ್ಯಾಯಾಲಯದ ಅನುಮತಿಯ ಅಗತ್ಯವಿರುತ್ತದೆ. ಆದರೆ, ಸಿ ಅಂತಿಮ ವರದಿ ಸಲ್ಲಿಸಿದಾಗ ಅದರ ಅಗತ್ಯವಿಲ್ಲ ಎಂಬುದನ್ನು ಕರ್ನಾಟಕ ಪೊಲೀಸ್ ಮ್ಯಾನುಯಲ್ ಸೂಚಿಸುತ್ತದೆ ಎಂದು ವಿವರಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನ ಪೂರ್ವನಿದರ್ಶನಗಳು ಏನು ಹೇಳುತ್ತವೆ ಎಂಬ ವರದಿಗಳನ್ನು ಪ್ರಸ್ತುತಪಡಿಸಿ ಎಂದು ವಕೀಲ ಸಿ.ಎಚ್.ಹನುಮಂತರಾಯ ಅವರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣವೇನು: ಮತ್ತೀಕೆರೆಯ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆಯಲ್ಲಿ ಉಸ್ತುವಾರಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಬಿ.ಆರ್.ಮುರಳೀಧರ ಅವರು, ಅಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ಪರಿವೀಕ್ಷಕ ಹಾಗೂ ಉಪವಿಭಾಗಾಧಿಕಾರಿ ಕಚೇರಿಯ ಜಾಹೀರಾತು ವಿಭಾಗದ ನೌಕರರಾಗಿದ್ದ ಅಮೃತರಾಜ್ ತಮ್ಮ ಮೇಲೆ ಕ್ರಿಕೆಟ್ ಬ್ಯಾಟ್‍ನಿಂದ ಹಲ್ಲೆ ಮಾಡಿ ಮೂರು ಹಲ್ಲುಗಳನ್ನು ಮುರಿದು, ಕೊಲೆಯತ್ನ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಈ ಘಟನೆ ನಡೆದ ಸಂದರ್ಭದಲ್ಲಿ ಅಮೃತರಾಜ್ ಅವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ನಿರ್ದೇಶಕರಾಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X