ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಜೂ.೯: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡೀಮಿ ಯಾಲಜಿ ವಿಭಾಗ ನಿಮ್ಹಾನ್ಸ್, ಬೆಂಗಳೂರು ಇವರ ವತಿಯಿಂದ ಅನುಷ್ಠಾನಗೊಳಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ ೧೮ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಅಥವಾ ಯುವ ಸಮಾಲೋಚಕಿ ಶ್ಯಾಮಲಾ ಕಿರಣ್ ಮೊ.ನಂ: ೯೯೦೨೧೫೮೦೭೩, ಕ್ಷೇತ್ರ ಸಂಪರ್ಕಾಧಿಕಾರಿ ಸುನೀಲ ಕುಮಾರ್ ಮೊ.ನಂ: ೯೧೧೦೮೦೯೮೮೬ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story