ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಬಂಧಿಸಲು ಬಿಜೆಪಿ ಷಡ್ಯಂತ್ರ: ಡಿಕೆಶಿ ಆರೋಪ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ಬುಧವಾರ ಇ.ಡಿ ಸಮನ್ಸ್ ಜಾರಿ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಹದ್ದುಮೀರಿ ವರ್ತಿಸುತ್ತಿದೆ. ರಾಜಕೀಯ ಎದುರಾಳಿಗಳನ್ನು ಸುಳ್ಳುಪ್ರಕರಣಗಳ ಮೂಲಕ ಬಂಧಿಸುವ ಕುತಂತ್ರಕ್ಕಿಳಿದ ಬಿಜೆಪಿಗೆ ನಾಚಿಕೆಯಾಗಬೇಕು. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬಂಧಿಸಲು ED ಷಡ್ಯಂತ್ರ ನಡೆಸಿದೆ. ಬಿಜೆಪಿಯ ತಾಳಕ್ಕೆ ತಕ್ಕಂತೆ ED ಕುಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹದ್ದುಮೀರಿ ವರ್ತಿಸುತ್ತಿದೆ. ರಾಜಕೀಯ ಎದುರಾಳಿಗಳನ್ನು ಸುಳ್ಳುಪ್ರಕರಣಗಳ ಮೂಲಕ ಬಂಧಿಸುವ ಕುತಂತ್ರಕ್ಕಿಳಿದ ಬಿಜೆಪಿಗೆ ನಾಚಿಕೆಯಾಗಬೇಕು. ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಶ್ರೀ ರಾಹುಲ್ ಗಾಂಧಿಯವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬಂಧಿಸಲು ED ಷಡ್ಯಂತ್ರ ನಡೆಸಿದೆ. ಬಿಜೆಪಿಯ ತಾಳಕ್ಕೆ ತಕ್ಕಂತೆ ED ಕುಣಿಯುತ್ತಿದೆ. pic.twitter.com/wF5DTlWiCQ
— DK Shivakumar (@DKShivakumar) June 9, 2022







