ಮೈಸೂರು: ಮಗನಿಂದ ತಂದೆಯ ಹತ್ಯೆ
ಸಾಂದರ್ಭಿಕ ಚಿತ್ರ
ಮೈಸೂರು: ಮಗನೊಬ್ಬ ತನ್ನ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹದಿನಾರು ಮೋಳೆ ಗ್ರಾಮದಲ್ಲಿ ವರದಿಯಾಗಿದೆ.
ಗ್ರಾಮದ ಸಣ್ಣಮಾದಶೆಟ್ಟಿ (59) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ.
ಕೊಲೆ ಮಾಡಿದ ಮಗ ಶ್ರೀನಿವಾಸ ಮತ್ತು ಆತನ ತಾಯಿ ಪರಾರಿಯಾಗಿದ್ದು, ಕೂಲಿ ಮಾಡಿದ ಹಣವನ್ನು ಮನೆಗೆ ಕೊಡುವ ಕಾರಣಕ್ಕೆ ತಂದೆ ಮತ್ತು ಮಗನ ನಡುವೆ ನಡೆದಿತ್ತು ಎನ್ನಲಾಗಿದೆ.
ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Next Story