ವಿಟ್ಲ | ಇಸ್ಲಾಮ್ ಧರ್ಮದ ಅವಹೇಳನ ಆರೋಪ: ರಾಧಾಕೃಷ್ಣ ಅಡ್ಯಂತಾಯ ಸಹಿತ ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು

ರಾಧಾಕೃಷ್ಣ ಅಡ್ಯಂತಾಯ
ಬಂಟ್ವಾಳ, ಜೂ.10: ವಿಎಚ್ಪಿ ಹಾಗೂ ಬಜರಂಗದಳವು ಇತ್ತೀಚೆಗೆ ಆಯೋಜಿದ್ದ ಕಾರ್ಯಕ್ರಮದಲ್ಲಿ ಇಸ್ಲಾಮ್ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ ಆರೋಪಿ ಸಂಘ ಪರಿವಾರದ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜೂ.6ರಂದು ವಿಟ್ಲದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಬಳಿ ವಿಎಚ್ಪಿ ಹಾಗೂ ಬಜರಂಗದಳ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣ ಅಡ್ಯಂತಾಯ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಅದರನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 90/2022 ಕಲಂ: 505(2) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
Next Story