Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಅವರ ಕ್ಯಾಮೆರಾ ಆಫ್ ಮಾಡಿ': ಕಾನೂನು...

'ಅವರ ಕ್ಯಾಮೆರಾ ಆಫ್ ಮಾಡಿ': ಕಾನೂನು ಉಲ್ಲಂಘನೆ ಕುರಿತ ಪತ್ರಕರ್ತನ ಪ್ರಶ್ನೆಗೆ ಸಿಡಿಮಿಡಿಗೊಂಡ ಸದ್ಗುರು

ವಾರ್ತಾಭಾರತಿವಾರ್ತಾಭಾರತಿ10 Jun 2022 8:11 PM IST
share
ಅವರ ಕ್ಯಾಮೆರಾ ಆಫ್ ಮಾಡಿ: ಕಾನೂನು ಉಲ್ಲಂಘನೆ ಕುರಿತ ಪತ್ರಕರ್ತನ ಪ್ರಶ್ನೆಗೆ ಸಿಡಿಮಿಡಿಗೊಂಡ ಸದ್ಗುರು

ಚೆನ್ನೈ: ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಲಿಯಾಸ್‌ 'ಸದ್ಗುರುʼ ಅವರು ಸಂದರ್ಶನವೊಂದರಲ್ಲಿ ನಿರೂಪಕ ಕೇಳಿದ ಪ್ರಶ್ನೆಗೆ ಕೋಪಗೊಂಡಿದ್ದು, ಕ್ಯಾಮೆರಾ ಬಂದ್‌ ಮಾಡುವಂತೆ ಸೂಚಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. ಕಾನೂನು ಉಲ್ಲಂಘನೆಯ ಕುರಿತಂತೆ ನಿರೂಪಕ ಸದ್ಗುರುವನ್ನು ಪ್ರಶ್ನಿಸಿದ್ದು, ಈ ಪ್ರಶ್ನೆಯಿಂದ ವಿಚಲಿತರಾದ ಜಗ್ಗಿ ವಾಸುದೇವ್ ಸಿಡಿಮಿಡಿಗೊಂಡು ಕ್ಯಾಮೆರಾ ಬಂದ್‌ ಮಾಡಿ ಎಂದು ಹೇಳುವುದು ವಿಡಿಯೋದಲ್ಲಿ ಕಂಡು ಬಂದಿದೆ.   

ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ ಸಂಸ್ಥೆಯ ಯೋಜನೆಗಳಿಗೆ ಪರಿಸರ ಅನುಮತಿಯನ್ನು ಏಕೆ ಪಡೆದಿಲ್ಲ ಎಂದು ಪ್ರಶ್ನೆ ಕೇಳಿದ 'ಬಿಬಿಸಿ ತಮಿಳು' ವಾಹಿನಿಯ‌ ನಿರೂಪಕನ ಮೇಲೆ ಸದ್ಗುರು ಸಿಟ್ಟಾಗಿದ್ದಾರೆ ಎಂದು newslaundry.com ವರದಿ ಮಾಡಿದೆ.

"ಯಾವುದೇ ಅಕ್ರಮ ನಡೆದಿಲ್ಲ, ಎಲ್ಲವೂ ಪರಿಪೂರ್ಣವಾಗಿದೆ ಎಂದು ಸರಕಾರ ಹೇಳಿದೆ....ಈ ನೆಲದಲ್ಲಿ ಕಾನೂನು ಇಲ್ಲವೇ? ಸರಕಾರ ಇಲ್ಲವೇ? ಅವರ ಕೆಲಸ ಅವರೇ ಮಾಡಲಿ. ನೀವು ಏನಕ್ಕೆ ಕೇಳುತ್ತಿದ್ದೀರಿ?" ಎಂದು ಸದ್ಗುರು ಪ್ರತಿಕ್ರಿಯಿಸಿದ್ದಾರೆ. 

ವಾಸುದೇವ್ ಸಿಟ್ಟಾದರೂ ತನ್ನ ಪ್ರಶ್ನೆಯಿಂದ ಹಿಂದೆ ಸರಿಯದ ಸಂದರ್ಶಕ "ನಿಮಗೆ ಪರಿಸರದ ಬಗ್ಗೆ ತುಂಬಾ ಕಾಳಜಿ ಇದ್ದರೆ, ನೀವು ಈ ಕಟ್ಟಡಗಳನ್ನು ಪ್ರಾರಂಭಿಸುವ ಮೊದಲು ಏಕೆ ಸರಿಯಾದ ರೀತಿ ಅನುಮತಿ ತೆಗೆದುಕೊಳ್ಳಬಾರದು?" ಎಂದು ಮತ್ತೊಮ್ಮೆ ಪ್ರಶ್ನಿಸಿದ್ದಾರೆ.

ವಾಸುದೇವ್ ಸಂದರ್ಶಕನನ್ನು ಸುಮ್ಮನಿರುವಂತೆ ಸೂಚಿಸಿದ್ದು, ಸರ್ಕಾರದ ಕೆಲಸ ಅವರೇ ಮಾಡಲಿ, ನೀವು ಏನು ಮಾಡುತ್ತಿದ್ದೀರ ಎಂದು ಮರು ಪ್ರಶ್ನೆ ಹಾಕಿ ಸಂದರ್ಶಕನ ಪ್ರಶ್ನೆಯಿಂದ ನುಣುಚಿಕೊಳ್ಳಲು ಪ್ರಯತ್ನ ಪಟ್ಟಿರುವುದು ವಿಡಿಯೋದಲ್ಲಿ ಕಾಣುತ್ತದೆ.

ಸಂದರ್ಶಕ ತನ್ನ ಪ್ರಶ್ನೆಗೆ ಬದ್ಧವಾಗಿ ನಿಂತಾಗ, "ಮತ್ತೊಮ್ಮೆ, ನಿಮ್ಮ ನಾನ್ಸೆನ್ಸ್ ನೀವು ಹೇಳುತ್ತಿರುವಿರಿ ... ಅವರ ಕ್ಯಾಮೆರಾವನ್ನು ಆಫ್ ಮಾಡಿ. ಸಾಕು ... ಕೇಳು, ಮನುಷ್ಯ, ನನ್ನ ಮಾತುಗಳನ್ನು ಕೇಳು. ದೇಶದಲ್ಲಿ ಇರುವ ಪ್ರತಿಯೊಂದು ಕಾನೂನನ್ನು ಅನುಸರಿಸಲಾಗಿದೆ. ಸಣ್ಣ ಪುಟ್ಟ ತಕರಾರಿದ್ದದ್ದನ್ನು ಬಹಳ ಹಿಂದೆಯೇ, 20 ವರ್ಷಗಳ ಹಿಂದೆ, ಸರಿ ಮಾಡಿದ್ದೇವೆ..." ಎಂದು ಸದ್ಗುರು ಹೇಳುತ್ತಾರೆ. ಆಗಲೇ ಮಧ್ಯಪ್ರವೇಶಿಸಿದ ಸಂದರ್ಶಕ, ನಾನು 2012 ರ ವಿಷಯವನ್ನು ಪ್ರಸ್ತಾಪಿಸುತ್ತಿದ್ದೇನೆ ಎನ್ನುತ್ತಾರೆ. ಈ ಹಂತದಲ್ಲಿ ಸಂದರ್ಶನವನ್ನು ಕಡಿತಗೊಳಿಸಲಾಗಿದೆ.

ಈ ವೇಳೆ "ಜಗ್ಗಿ ವಾಸುದೇವ್ ಅವರ ಜೊತೆಗಿದ್ದ ಜನರು BBC ಯ ಮೂರು ಕ್ಯಾಮೆರಾಗಳನ್ನು ಬಲವಂತವಾಗಿ ಬಂದ್‌ ಮಾಡಿಸಿದರು" ಎಂದು BBC ನ್ಯೂಸ್ ಹೇಳಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಜಗ್ಗಿ ವಾಸುದೇವ್‌ ಪತ್ರಕರ್ತನ ಒಂದು ಪ್ರಶ್ನೆಗೆ ಉತ್ತರಿಸದೆ ಕ್ಯಾಮೆರಾ ಆಫ್‌ ಮಾಡಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

I was really expecting him to add, 'Dosti bani rahe', but it seems his people forcefully stopped BBC's 3 cameras (before those 3 golden words could be uttered). pic.twitter.com/Ks5eXj8QoP

— Karthik (@beastoftraal) June 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X