ಪರಿಷತ್ ಚುನಾವಣೆ; ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ನೋಟಿಸ್

ಬೆಳಗಾವಿ: ವಿಧಾನ ಪರಿಷತ್ ನ ಚುನಾವಣೆಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಪುಸ್ತಕವೊಂದರ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ ಮತ್ತು ಪರಿಷತ್ ಸಭಾಪತಿ ಪೀಠ ಚಿತ್ರ ಪ್ರಕಟಿಸಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ನೋಟಿಸ್ ನೀಡಲಾಗಿದೆ.
ಬಸವರಾಜ ಹೊರಟ್ಟಿ ಅವರ ಕುರಿತು ಬರೆಯಲಾದ ʻಬಸವರಾಜ ಪಥʼಎಂಬ ಪುಸ್ತಕದ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ವ್ಯಕ್ತಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ವ್ಯಕ್ತಿಯ ದೂರಿನ ಮೇರೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು, ವಿವರಣೆ ಕೇಳಿ ಬಸವರಾಜ ಹೊರಟ್ಟಿ ಅವರಿಗೆ ಶನಿವಾರ ನೋಟಿಸ್ ನೀಡಿದ್ದಾರೆ.
Next Story





