ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಭಯೋತ್ಪಾದಕನ ಹತ್ಯೆ
![ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಭಯೋತ್ಪಾದಕನ ಹತ್ಯೆ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಹಿಜ್ಬುಲ್ ಭಯೋತ್ಪಾದಕನ ಹತ್ಯೆ](https://www.varthabharati.in/sites/default/files/images/articles/2022/06/11/338502-1654969125.jpeg)
ಶ್ರೀನಗರ,ಜೂ.11: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಭಯೋತ್ಪಾದಕನೋರ್ವ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಂಡಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಪ್ರವೇಶ ನಿರ್ಬಂಧಿಸಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದರು.ಈ ವೇಳೆ ಬಚ್ಚಿಟ್ಟುಕೊಂಡಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡುಗಳನ್ನು ಹಾರಿಸಿದ್ದರು. ಪೊಲೀಸರು ಪ್ರತಿದಾಳಿ ನಡೆಸಿದಾಗ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ ಎಂದು ಹಿರಿಯ ಅಧಿಕಾರಿಯೋರ್ವರು ತಿಳಿಸಿದರು.
Next Story