ಕಾರ್ಯಕರ್ತರ ಪ್ರಾಮಾಣಿಕ ಪರಿಶ್ರಮ ಪಕ್ಷ ಸಂಘಟನೆಗೆ ಪೂರಕ: ಹರೀಶ್ ಕುಮಾರ್

ಮಂಗಳೂರು, ಜೂ.12: ಕಾಂಗ್ರೆಸ್ ಕಾರ್ಯಕರ್ತರು ಆಶಾಭಾವನೆಯೊಂದಿಗೆ ಪಕ್ಷ ಸಂಘಟನೆಯಲ್ಲಿ ಶ್ರಮಪಟ್ಟರೆ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಸಾಧಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಅವರು ನುಡಿದರು.
ಅವರು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಎಸ್.ಕೋಡಿ ಸಭಾಭವನದಲ್ಲಿ ರವಿವಾರ ನಡೆದ ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಕುರಿತು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯ ವಾಗಿ ತೊಡಗಿಕೊಂಡಿರುವ ಐವರು ಕಾರ್ಯಕರ್ತರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ, ಜಿಲ್ಲಾ ಮಹಿಳಾ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ನಾಯಕರುಗಳಾದ ಬಾಲಾದಿತ್ಯ ಆಳ್ವ,ಅಶೋಕ್ ಪೂಜಾರ, ಸಾಹುಲ್ ಹಮೀದ್ ಕದಿಕೆ, ಗುರುರಾಜ ಪುಜಾರಿ, ಕೆಮ್ರಾಲ್ ಅಧ್ಯಕ್ಷೆ ಲೀಲಾ ಕೃಷ್ಣಪ್ಪ, ಅಶ್ವಿನ್ ಅಲ್ವಾ, ಉಮೇಶ್ ಪೂಜಾರಿ, ಮೈಯ ದೀ ಪಕ್ಷಿಕೆರೆ , ಮೊದಲಾದವರಿದ್ದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಸ್ವಾಗತಿಸಿ ಕೆಪಿಸಿಸಿ ಕೋಆರ್ಡಿನೇಟರ್ ಹೆಚ್ ವಸಂತ ಬರ್ನಾಡ್ ವಂದಿಸಿದರು.