ಯುವಕ ಆತ್ಮಹತ್ಯೆ
ಮಂಗಳೂರು, ಜೂ.12: ನಗರದ ಕುಳೂರು ಸಮೀಪ ಮೊಬೈಲ್ ಅಂಗಡಿ ಹೊಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಸುರತ್ಕಲ್, ಚೊಕ್ಕಬೆಟ್ಟು ನಿವಾಸಿ ಶಹೀದ್ (34) ಮೃತರು ಎಂದು ಗುರುತಿಸಲಾಗಿದೆ.
ಮೊಬೈಲ್ ಅಂಗಡಿಯ ಹಿಂಬದಿಯ ರೂಮಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಾರಣ ತಿಳಿದು ಬಂದಿಲ್ಲ.
ಕಾವೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story





