ಭಾರತ vs ದಕ್ಷಿಣ ಆಫ್ರಿಕಾ: ಸರಣಿಯ ಎರಡನೇ ಪಂದ್ಯದಲ್ಲೂ ಸೋತ ಭಾರತ

ಕಟಕ್: ನೀರಸ ಬ್ಯಾಟಿಂಗ್‌ನಿಂದಾಗಿ ಭಾರತ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿಯೂ ಸೋಲನ್ನು ಎದುರಿಸಿದೆ. ಬಾರಾಬತಿ ಕ್ರೀಡಾಂಗಣದಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಫೀಲ್ಡಿಂಗ್ ಅನ್ನು ಆಯ್ಕೆ ಮಾಡಿಕೊಂಡಿದ್ದು, ಪಂದ್ಯದ ಮೊದಲ ಓವರ್ ನಲ್ಲಿಯೇ ಋತುರಾಜ್ ಗಾಯಕವಾಡ್ ಔಟಾಗಿದ್ದಾರೆ. ಭಾರತ ತಂಡವು 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 148 ರನ್‌ಗಳ ಮೊತ್ತ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್ ಗಳಿಸಿ ಪಂದ್ಯವನ್ನು ಗೆದ್ದಿದೆ.
ಭಾರತ ತಂಡ ಸರಣಿ ಗೆಲ್ಲಬೇಕಾದರೆ ಮುಂದಿನ ಮೂರು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ದಿಲ್ಲಿಯಲ್ಲಿ ನಡೆದಿದ್ದ ಸರಣಿಯ ಮೊದಲ ಪಂದ್ಯದಲ್ಲಿ ಬೌಲಿಂಗ್ ಮತ್ತು ಫೀಲ್ಡಿಂಗ್ ಲೋಪಗಳಿಂದಾಗಿ ಸೋತಿದ್ದ ಭಾರತ ತಂಡವು ಈ ಬಾರಿ ಬ್ಯಾಟಿಂಗ್ ವೈಫಲ್ಯದಿಂದಾಗಿ ಸೋಲು ಕಂಡಿದೆ.
Next Story