ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರು, ಜೂ.13: ರಾಜ್ಯದಲ್ಲಿ ಮುಂದಿನ 3 ದಿನ ಉತ್ತಮ ಮಳೆಯಾಗಲಿದ್ದು (RAIN), ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ.15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ.16ರಿಂದ ಮಳೆ ಮಳೆ ಬಿರುಸುಗೊಳ್ಳಲಿದೆ. ಅಲ್ಲದೆ, ಮುಂದಿನ 2 ದಿನ ಈ ಭಾಗಗಳಲ್ಲಿ ಚದುರಿದಂತೆ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ರವಿವಾರ ಕೂಡ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರವಿವಾರ ಮಳೆ ಮತ್ತಷ್ಟು ಚುರುಕುಗೊಂಡಿದೆ.
Next Story