ವಿದ್ಯಾರ್ಥಿಗಳ ಸಾಧನೆಗೆ ಸಮಾಜದ ಪ್ರೋತ್ಸಾಹ ಅಗತ್ಯ - ಪ್ರಸನ್ನ ಎಂ.ಎಸ್.

ಕಾರ್ಕಳ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸಾಣೂರು ಯುವಕ ಮಂಡಲದ ವತಿಯಿಂದ ರವಿವಾರ ಜ್ಯೋತಿ ಕಲಾ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಕಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಧನೆ ಮಾಡುವಂತಾಗಲು ಸಮಾಜ, ಸಂಘ-ಸಂಸ್ಥೆಗಳ ಪ್ರೋತ್ಸಾಹ ಅಗತ್ಯ. ಸಾಣೂರು ಯುವಕ ಮಂಡಲ ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಿ ಗುರುತಿಸಿಕೊಂಡಿದೆ ಎಂದರು.
ಸಾಣೂರು ಪಂಚಾಯತ್ ವ್ಯಾಪ್ತಿಯ 25 ವಿದ್ಯಾರ್ಥಿಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದ ಶ್ರೇಯಾ ಆರ್. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಉದ್ಯಮಿ ರವೀಂದ್ರ ಶೆಟ್ಟಿ ಬಜಗೋಳಿ ಅಧ್ಯಕ್ಷತೆ ವಹಿಸಿದ್ದರು. ದಯಾನಂದ್ ಶೆಟ್ಟಿ, ಜಯ ಶೆಟ್ಟಿ, ಶಿಕ್ಷಕಿ ವೃಂದಾ ಪಿ. ಎಸ್, ಶ್ರೀಮತಿ ಎಸ್. ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಸ್ವಾಗತಿಸಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಚಂದ್ರಹಾಸ್ ಪೂಜಾರಿ ವಂದಿಸಿದರು







