ಬುಡಕಟ್ಟು ಸಮುದಾಯದ ಸರ್ವಾಂಗೀಣ ಅಭಿವೃದ್ಧಿ : ಸಚಿವ ಸುನೀಲ್ ಕುಮಾರ್

ಕಾರ್ಕಳ : ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅತ್ಯುತ್ತಮ ಆಡಳಿತ ನಡೆಸುವ ಮೂಲಕ ಜನಮನ್ನಣೆಗೆ ಪಾತ್ರವಾಗಿದೆ. ಬುಡಕಟ್ಟು ಜನಾಂಗದ ಏಳಿಗೆಗಾಗಿ 3110 ಜನ್ ಧನ್ ವಿಕಾಸ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. ದೇಶದಾದ್ಯಂತ 384 ಏಕಲವ್ಯ ಮಾದರಿ ವಸತಿ ವಿದ್ಯಾಲಯ ನಿರ್ಮಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರು ಜನ್ಮದಿನವನನ್ನು ಜನ್ ಜಾತೀಯ ಗೌರವ ದಿವಸ್ ಎಂದು ಘೋಷಿಸಿದೆ. ಬುಡಕಟ್ಟು ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಸರಕಾರ ಕಟಿಬದ್ಧವಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃಇ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ಅವರು ರವಿವಾರ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಸಹಭಾಗಿತ್ವದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮದಂಗವಾಗಿ ಕಬ್ಬಿನಾಲೆ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಕಾರ್ಕಳ ಕ್ಷೇತ್ರ ಎಸ್ಟಿ ಮೋರ್ಚಾದ ಅಧ್ಯಕ್ಷ ಕೆ.ಪಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಎಸ್ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ ಚೇರ್ಕಾಡಿ, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯ್ಕ, ಮುದ್ರಾಡಿ ಗ್ರಾ.ಪಂ. ಅಧ್ಯಕ್ಷೆ ವಸಂತಿ, ಕಾರ್ಕಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಬಿಜೆಪಿ ಹೆಬ್ರಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್ ಕುಮಾರ್, ಜಿ. ಪಂ. ನಿಕಟ ಪೂರ್ವ ಸದಸ್ಯೆ ಜ್ಯೋತಿ ಹರೀಶ್, ಕಾರ್ಕಳ ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ಬಿಜೆಪಿ ಮುದ್ರಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಶೆಟ್ಟಿ, ವೈದ್ಯಾಧಿಕಾರಿ ಡಾ. ಸುಶಾನ್ ಶೆಟ್ಟಿ, ಡಾ. ಸಿದ್ಧಾರ್ಥ್ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಕಳ ಕ್ಷೇತ್ರ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಸ್ವಾಗತಿಸಿ, ಸೀತಾರಾಮ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಗೌಡ ವಂದಿಸಿದರು.







