Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ...

ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ13 Jun 2022 9:06 PM IST
share
ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಮತ್ತೆ ಕೋವಿಡ್-೧೯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ, ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನಿರ್ದೇಶನಗಳನ್ನು ನೀಡಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲೆಯ ಕೋವಿಡ್-೧೯, ಡೆಂಗಿ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶದಲ್ಲಿ ಹೆಚ್ಚಿನ ಪರೀಕ್ಷೆಗಳನ್ನು ಮತ್ತು  ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ತಕ್ಷಣದಲ್ಲಿ ಕೈಗೊಂಡು, ಅದು ಇತರರಿಗೆ ಹರಡದಂತೆ ಎಚ್ಚರ ವಹಿಸಬೇಕು. ಎಲ್ಲಾ ತಾಲೂಕುಗಳಲ್ಲಿರುವ ಕೋವಿಡ್ ಕಾರ್ಯಪಡೆಗಳನ್ನು ಮತ್ತೆ ಸಕ್ರಿಯ ಗೊಳಿಸಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್ ಕಾನ್ಸನ್‌ ಟ್ರೇಟರ್‌ಗಳು, ಆಮ್ಲಜನಕ ತಯಾರಿಕಾ ಮತ್ತು ಶೇಖರಣಾ ಘಟಕಗಳು ಸೇರಿದಂತೆ ಎಲ್ಲಾ ವೈದ್ಯಕೀಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಅವರು ಸೂಚಿಸಿದರು.

ಪ್ರಸ್ತುತ ಕಾಲೇಜುಗಳು ಪ್ರಾರಂಭಗೊಳ್ಳುತ್ತಿದ್ದು, ಜಿಲ್ಲೆಗೆ ಹೊರರಾಜ್ಯ ಮತ್ತು ಹೊರರಾಷ್ಟ್ರಗಳಿಂದಲೂ ವಿದ್ಯಾರ್ಥಿ ಗಳು ಆಗಮಿಸುತಿದ್ದಾರೆ. ಅವರ ಮೂಲಕ ಕೋವಿಡ್ ಪ್ರಕರಣಗಳು ಹರಡದಂತೆ ಅಗತ್ಯ ಮುಂಜಾಗ್ರತೆ ವಹಿಸು ವಂತೆ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೋವಿಡ್ ಮುನ್ನೆಚ್ಚರಿಕಾ ಲಸಿಕೆ ಪಡೆಯುವ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಸೂಚನೆ ನೀಡುವಂತೆಯೂ ತಿಳಿಸಿದರು.

ಇದರೊಂದಿಗೆ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವ ೬೦ ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಅವರಿಗೆ ಲಸಿಕೆ ನೀಡುವಂತೆ ಹಾಗೂ ಕೋವಿಡ್ ಲಸಿಕಾ ಮೇಳಗಳನ್ನು ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ನಿರ್ದೇಶನಗಳನ್ನು ಜಿಲ್ಲಾಧಿಕಾರಿ ನೀಡಿದರು.

ಡೆಂಗಿ-ಮಲೇರಿಯಾ: ಮಳೆಗಾಲದಲ್ಲಿ ಕಂಡು ಬರುವ ಡೆಂಗಿ ಮತ್ತು ಮಲೇರಿಯಾ ನಿಯಂತ್ರಣಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಅರಿವುಕಾರ್ಯಕ್ರಮಗಳನ್ನು ಆಯೋಜಿಸಿ. ಇದರೊಂದಿಗೆ ಸಾರ್ವಜನಿಕರ ಮೊಬೈಲ್‌ಗಳಿಗೆ ಜಾಗೃತಿ ಕುರಿತ ಆಡಿಯೋ ಸಂದೇಶಗಳನ್ನು ಕಳುಹಿಸಲು ಕ್ರಮ ಕೈಗೊಳ್ಳಿ ಮತ್ತು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿ ಗಳಿಂದ ಸಾರ್ವಜನಿಕ ಜಾಥಾ ಕಾರ್ಯಕ್ರಮ ಏರ್ಪಡಿಸುವಂತೆ ಸೂಚಿಸಿದರು. 

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಡೆಂಗಿ ಮತ್ತು ಮಲೇರಿಯಾ ನಿಯಂತ್ರಣ ಕುರಿತಂತೆ ಈಗಾಗಲೇ ಜಾಗೃತಿ ಮೂಡಿಸಲು ಪಿಡಿಓಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಶಾಲಾ ವಿದ್ಯಾರ್ಥಿಗಳ ಮೂಲಕ ಮನೆ ಮನೆ ಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು.

ಸಭೆಯಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾನಾಧಿ ಕಾರಿಗಳು ಉಪಸ್ಥಿತರಿದ್ದರು. 

ಜಿಲ್ಲೆಯಲ್ಲಿ ಕಳೆದ ೧೦ ದಿನದಲ್ಲಿ ೨೧೨೭ ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, ೧೭ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ. ಪಾಸಿಟಿಟಿ ದರವು ಸದ್ಯ ಶೇ. ೦.೮೦ರಷ್ಟಿದೆ. ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ೧೧ ಸಕ್ರಿಯ ಪ್ರಕರಣಗಳಿವೆ.
-ಡಾ.ನಾಗಭೂಷಣ ಉಡುಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉಡುಪಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X