ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ಗೆ 2022ರ ಸೇಡಿಯಾಪು ಪ್ರಶಸ್ತಿ
ಪ್ರೊ.ಮಲ್ಲೇಪುರಂ
ಉಡುಪಿ : ಕನ್ನಡದ ಖ್ಯಾತ ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ೨೦೨೨ನೇ ಸಾಲಿನ ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿಗೆ ಆಯ್ಕೆಯಾ ಗಿದ್ದಾರೆ. ಪ್ರಶಸ್ತಿಯು ೧೦,೦೦೦ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳ ಗೊಂಡಿರುತ್ತದೆ.
ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೧೯೫೨ರಲ್ಲಿ ಜನಿಸಿದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಮೈಸೂರು ವಿವಿ ಯಿಂದ ಕನ್ನಡ ಹಾಗೂ ಸಂಸ್ಕೃತ ಎಂ.ಎ ಪದವಿ ಪಡೆದು ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದರು. ೧೯೯೨ರಲ್ಲಿ ಹಂಪಿ ಕನ್ನಡ ವಿವಿ ಸೇರಿ ಅಲ್ಲಿ ಪ್ರವಾಚಕರಾಗಿ, ಅಧ್ಯಯನಾಂಗದ ನಿರ್ದೇಶಕರಾಗಿ, ಕುಲಸಚಿವರಾಗಿ, ಡೀನ್ ಆಗಿ, ಪ್ರಸಾರಾಂಗದ ನಿರ್ದೇಶಕ ರಾಗಿ ಕಾರ್ಯ ನಿರ್ವಹಿಸಿದ್ದರು.
೨೦೧೦ರಲ್ಲಿ ಕರ್ನಾಟಕ ಸಂಸ್ಕೃತ ವಿಶ್ವದ್ಯಾಲಯದ ಪ್ರಥಮ ಕುಲಪತಿ ಗಳಾದರು. ಹಲವಾರು ಶೈಕ್ಷಣಿಕ ಸಂಸ್ಥೆಗಳ ಸದಸ್ಯತ್ವವನ್ನು ಪಡೆದ ಇವರು ೯೦ಕ್ಕೂ ಅಧಿಕ ಸಾಹಿತ್ಯ, ಸಂಸ್ಕೃತಿ ಭಾಷೆಗೆ ಸಂಬಂಧಿಸಿದ ಪುಸ್ತಕ ಗಳನ್ನು ಪ್ರಕಟಿಸಿದ್ದಾರೆ. ಕಲಬುರಗಿಯ ಪಾಲಿ ಇನ್ಸ್ಟಿಟ್ಯೂಟ್ ಸಂಸ್ಥೆಯ ಗೌರವ ನಿರ್ದೇಶಕರಾಗಿದ್ದಾರೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಂ.ಫಿಲ್ ಹಾಗೂ ಪಿಎಚ್ಡಿ ಅಧ್ಯಯನಕ್ಕೆ ಮಾರ್ಗದರ್ಶಕ ರಾಗಿದ್ದಾರೆ.
ಇವರ ಸಾಹಿತ್ಯ ಸೇವೆ ಹಾಗೂ ಸಂಶೋಧನೆಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಕೊಡಮಾಡುವ ವಿ.ಎಂ. ಇನಾಂದಾರ್ ಪ್ರಶಸ್ತಿ, ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ, ಸಂಸ್ಕೃತಿ ಸಮ್ಮಾನ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಸಾಹಿತ್ಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.