ಹಲ್ಲೆ ನಡೆಸಿದ ಆರೋಪಿಗೆ ಶಿಕ್ಷೆ
ಉಡುಪಿ, ಜೂ.೧೩: ಹಲ್ಲೆ ನಡೆಸಿದ ಆರೋಪಿಗೆ ನಗರದ ೧ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ ಆದೇಶ ನೀಡಿದೆ.
೨೦೧೫ರ ನವೆಂಬರ್ ೨೯ರಂದು ಸಂಜೆ ೭ ಗಂಟೆ ಸುಮಾರಿಗೆ ಕಿದಿಯೂರು ಗ್ರಾಮದ ನಿವಾಸಿ ಶಿವಕುಮಾರ್ ಅಲಿಯಾಸ್ ಸಂತು ಎಂಬಾತನು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಜಂಕ್ಷನ್ ಬಳಿ ಇರುವ ಟೆಂಪೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಉಡುಪಿ ನಗರಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ೧ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಶಿವಕುಮಾರ್‌ಗೆ ೩ ವರ್ಷ ಕಾರಾಗೃಹ ವಾಸದ ಶಿಕ್ಷೆ ಹಾಗೂ ೧೦,೦೦೦ ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದರು.
Next Story





