Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ನಿರುದ್ಯೋಗ ದರ ಕುರಿತು...

ಉತ್ತರ ಪ್ರದೇಶದ ನಿರುದ್ಯೋಗ ದರ ಕುರಿತು ಆದಿತ್ಯನಾಥ್ ಹೇಳಿಕೆಯಲ್ಲಿ ಹುರುಳಿಲ್ಲ: ಫ್ಯಾಕ್ಟ್ ಚೆಕ್

ವಾರ್ತಾಭಾರತಿವಾರ್ತಾಭಾರತಿ13 Jun 2022 11:40 PM IST
share
ಉತ್ತರ ಪ್ರದೇಶದ ನಿರುದ್ಯೋಗ ದರ ಕುರಿತು ಆದಿತ್ಯನಾಥ್ ಹೇಳಿಕೆಯಲ್ಲಿ ಹುರುಳಿಲ್ಲ: ಫ್ಯಾಕ್ಟ್ ಚೆಕ್

ಹೊಸದಿಲ್ಲಿ,ಜೂ.13: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂ.3ರಂದು ಉ.ಪ್ರ.ಹೂಡಿಕೆದಾರರ ಶೃಂಗಸಭೆಯನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ರಾಜ್ಯದಲ್ಲಿ 2017ರಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಲಕ್ಷಾಂತರ ಯುವಜನರಿಗೆ ಉದ್ಯೋಗಗಳನ್ನು ಒದಗಿಸಿದ್ದು,ನಿರುದ್ಯೋಗ ದರವು ಶೇ.18ರಿಂದ ಶೇ.2.9ಕ್ಕೆ ಇಳಿದಿದೆ ಎಂದು ಹೇಳಿಕೊಂಡಿದ್ದರು. ಇದೀಗ,2017ರಲ್ಲಿ ನಿರುದ್ಯೋಗ ದರವು ಎಂದೂ ಎರಡಂಕಿಗಳನ್ನು ದಾಟಿರಲಿಲ್ಲ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಇಕಾನಮಿ (ಸಿಎಂಐಇ) ಬಿಡುಗಡೆಗೊಳಿಸಿರುವ ದತ್ತಾಂಶಗಳು ಬೆಟ್ಟು ಮಾಡಿವೆ. ಇದರೊಂದಿಗೆ ಆದಿತ್ಯನಾಥ್ರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎನ್ನುವುದು ಬಯಲಾಗಿದೆ ಎಂದು FactChecker.in  ವರದಿ ಮಾಡಿದೆ

ರಾಜ್ಯದಲ್ಲಿ ನಿರುದ್ಯೋಗ ದರವು ಎರಡಂಕಿಗಳನ್ನು ತಲುಪಿತ್ತಾದರೂ ಅದು ಜೂನ್ 2016ರಲ್ಲಿ ಅಖಿಲೇಶ ಯಾದವ ಅವರ ಸರಕಾರವಿದ್ದಾಗ,ಅಂದರೆ ಆದಿತ್ಯನಾಥ್ ಸರಕಾರವು ಅಧಿಕಾರಕ್ಕೆ ಬರುವ ಒಂಭತ್ತು ತಿಂಗಳಿಗೂ ಮೊದಲು. ನಿರುದ್ಯೋಗ ದರವು ತ್ವರಿತವಾಗಿ ಚೇತರಿಸಿಕೊಂಡಿದ್ದು,2017 ಮಾರ್ಚ್‌ನಲ್ಲಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದಾಗ ಶೇ.2.4ಕ್ಕೆ ಇಳಿದಿತ್ತು.

ವಾಸ್ತವದಲ್ಲಿ ಸಾಂಕ್ರಾಮಿಕದ ಸಂದರ್ಭದಲ್ಲಿ ಮತ್ತು ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದಾಗ ಎಪ್ರಿಲ್ 2020ರಲ್ಲಿ ರಾಜ್ಯದ ನಿರುದ್ಯೋಗ ದರವು ಇತ್ತೀಚಿನ ಗರಿಷ್ಠ ಮಟ್ಟವಾದ ಶೇ.21.5ಕ್ಕೆ ಏರಿತ್ತು.

ಈಗಿನ ನಿರುದ್ಯೋಗ ದರ ಕುರಿತಂತೆ ಆದಿತ್ಯನಾಥ್ ಅವರು 2022 ಎಪ್ರಿಲ್‌ಗಾಗಿ ಸಿಎಂಐಇ ದತ್ತಾಂಶಗಳನ್ನು ಪ್ರಸ್ತಾಪಿಸುತ್ತಿದ್ದಂತಿದೆ. ಎಪ್ರಿಲ್‌ನಲ್ಲಿ ಶೇ.2.9ರ ನಿರುದ್ಯೋಗ ದರವನ್ನು ಸಿಎಂಐಇ ಅಂದಾಜಿಸಿದ್ದು,ಇದು ಮೇ ತಿಂಗಳಿಗೆ ಶೇ.3.1ಕ್ಕೆ ಹೆಚ್ಚಿದೆ.

ಹೀಗಾಗಿ ಆದಿತ್ಯನಾಥ ಮುಖ್ಯಮಂತ್ರಿಯಾದಾಗ ನಿರುದ್ಯೋಗ ದರವು ಶೇ.2.4ರಷ್ಟಿತ್ತು ಮತ್ತು ಈಗ ಮೇ 2022ರಲ್ಲಿ ಶೇ.3.1ರಷ್ಟಿದೆ. ಅಂದರೆ ವಾಸ್ತವದಲ್ಲಿ ಇಳಿಕೆಯಾಗುವ ಬದಲು ಶೇ.29ರಷ್ಟು ಏರಿಕೆಯಾಗಿದೆ. ಆದಿತ್ಯನಾಥರ ಹೇಳಿಕೆ ಸುಳ್ಳು ಎನ್ನುವುದನ್ನು ಇದು ಸಾಬೀತುಗೊಳಿಸುತ್ತದೆ ಎಂದು FactChecker.in  ವರದಿ ಮಾಡಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X