ರಿಯಲ್ ಎಸ್ಟೇಟ್ ವ್ಯಾಜ್ಯಗಳ ಕುರಿತು ಜೂ.25ಕ್ಕೆ ಲೋಕ ಅದಾಲತ್
ಬೆಂಗಳೂರು, ಜೂ.13: ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿನ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಮತ್ತು ಕರ್ನಾಟಕ ರಿಯಲ್ ಎಸ್ಟೇಟ್ ಮೇಲ್ಮನವಿ ಪ್ರಾಧಿಕಾರದಿಂದ ಜೂ.25ರಂದು ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿನ ಪರಿಹಾರ, ಮರುಪಾವತಿ ಪ್ರಕರಣಗಳು, ಕಾನೂನಿನಡಿಯಲ್ಲಿ ಇತ್ಯರ್ಥಪಡಿಸಬಹುದಾದ ವ್ಯಾಜ್ಯಗಳನ್ನು ಉಭಯ ಪಕ್ಷಗಾರರ ಸಮ್ಮುಖದಲ್ಲಿ ರಾಜೀ ಸಂಧಾನ ಮಾಡಿ ಇತ್ಯರ್ಥಪಡಿಸಲಾಗುವುದು. ಲೋಕ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಕರ್ತವ್ಯದ ದಿನಗಳಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 5.30ರ ಒಳಗಾಗಿ ಹಾಜರಾಗಬಹುದಾಗಿದೆ.
ಈ ಪ್ರಕರಣಗಳ ವಿಚಾರಣೆ ನಡೆಸಿದ ಬಳಿಕ ಜೂ.25ರಂದು ಆದೇಶ ಹೊರಡಿಸಲಾಗುವುದು ಎಂದು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣಾ ಪ್ರಾಧಿಕಾರದ ಸಮನ್ವಯಾಧಿಕಾರಿ ತಿಳಿಸಿದ್ದಾರೆ.
Next Story





