ಪ್ರವಾದಿ ಮುಹಮ್ಮದ್ ರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಯುವಕನ ಬಂಧನ

ಬಲ್ಲಿಯಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಲ್ಲಿ ಇಲ್ಲಿನ ರಾಸ್ರಾ ಪ್ರದೇಶದಿಂದ ಯುವಕನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ರವಿವಾರ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಕೃಷ್ಣ ಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಅಧಿಕಾರಿ ಶಿವ ನರೈನ್ ವೈಶ್ ತಿಳಿಸಿದ್ದಾರೆ.
ಆರೋಪಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿ ಜಮಾಅತ್ ಉಲೆಮಾ ಸದಸ್ಯ ಶೇಖ್ ಹುಸೈಫಾ ರವಿವಾರ ಟ್ವೀಟ್ ಮಾಡಿದ್ದರು. ಇದನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿ ಕೃಷ್ಣ ಕುಮಾರ್‌ನನ್ನು ಬಂಧಿಸಿದ್ದಾ ಎಂದು ಸರ್ಕಲ್ ಅಧಿಕಾರಿ ತಿಳಿಸಿದ್ದಾರೆ.
Next Story