Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷ 8,000ಕ್ಕೂ ಅಧಿಕ ಕೋಟ್ಯಧೀಶರು...

ಈ ವರ್ಷ 8,000ಕ್ಕೂ ಅಧಿಕ ಕೋಟ್ಯಧೀಶರು ಭಾರತವನ್ನು ತೊರೆಯುವ ನಿರೀಕ್ಷೆ; ವರದಿ

ವಾರ್ತಾಭಾರತಿವಾರ್ತಾಭಾರತಿ14 Jun 2022 5:29 PM IST
share
ಈ ವರ್ಷ 8,000ಕ್ಕೂ ಅಧಿಕ ಕೋಟ್ಯಧೀಶರು ಭಾರತವನ್ನು ತೊರೆಯುವ ನಿರೀಕ್ಷೆ; ವರದಿ

ಹೊಸದಿಲ್ಲಿ: ವಿಶ್ವಾದ್ಯಂತ ವಲಸೆ ಪ್ರವತ್ತಿಗಳ ಮೇಲೆ ನಿಗಾಯಿರಿಸುವ ಹೆನ್ಲಿ ಗ್ಲೋಬಲ್ ಸಿಟಿಜನ್ಸ್ ವರದಿಯು 2022ರಲ್ಲಿ ಸುಮಾರು 8,000 ಕೋಟ್ಯಧೀಶರು ಭಾರತವನ್ನು ತೊರೆಯುವ ನಿರೀಕ್ಷೆಯಿದೆ ಎಂದು ಹೇಳಿದೆ. 2019ರಲ್ಲಿ 7,000 ಮಿಲಿಯಾಧೀಶರನ್ನು ಕಳೆದುಕೊಂಡ ಬಳಿಕ ಈ ವರ್ಷ ಈ ಸಂಖ್ಯೆ ಶೇ.14ರಷ್ಟು ಏರಿಕೆಯಾಗಿದೆ.

ಭಾರತವಲ್ಲದೆ ರಶ್ಯಾ, ಚೀನಾ, ಹಾಂಗ್‌ಕಾಂಗ್ ಮತ್ತು ಉಕ್ರೇನ್‌ಗಳಿಂದಲೂ ಮಿಲಿಯಾಧೀಶರು ನಿರ್ಗಮಿಸಬಹುದು. ಆದಾಗ್ಯೂ ಭಾರತವು ಪ್ರತಿವರ್ಷ ವಲಸೆಯಿಂದಾಗಿ ತಾನು ಕಳೆದುಕೊಳ್ಳುವುದಕ್ಕಿಂತ ಹೆಚ್ಚಿನ ಸಂಖ್ಯೆಯ ನವ ಕೋಟ್ಯಧೀಶರನ್ನು ಸೃಷ್ಟಿಸುತ್ತಿದೆ ಎಂದು ವರದಿಯು ಬೆಟ್ಟು ಮಾಡಿದೆ ಎಂದು scroll.in ವರದಿ ಮಾಡಿದೆ.

ಬೇರೆ ದೇಶಗಳಿಗೆ ವಲಸೆ ಹೋಗಿರುವ ಶ್ರೀಮಂತರು ಜೀವನ ಮಟ್ಟ ಸುಧಾರಣೆಯಾದ ಬಳಿಕ ಭಾರತಕ್ಕೆ ಮರಳಲಿದ್ದಾರೆ ಎಂದು ಹೇಳಿರುವ ನ್ಯೂ ವರ್ಲ್ಡ್ ವೆಲ್ತ್‌ನ ಸಂಶೋಧನಾ ಮುಖ್ಯಸ್ಥ ಆ್ಯಂಡ್ರೂ ಅಮೊಲಿಸ್ ಅವರು, 2031ರ ವೇಳೆಗೆ ಭಾರತದಲ್ಲಿ ಮಿಲಿಯಾಧೀಶರ ಸಂಖ್ಯೆ ಶೇ.80ರಷ್ಟು ಹೆಚ್ಚುವ ನಿರೀಕ್ಷೆಯಿದೆ. ಇದರೊಂದಿಗೆ ಭಾರತವು ಈ ಅವಧಿಯಲ್ಲಿ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸಂಪತ್ತು ಮಾರುಕಟ್ಟೆಗಳಲ್ಲಿ ಒಂದಾಗಲಿದೆ. ವಿಶೇಷವಾಗಿ ಸ್ಥಳೀಯ ಹಣಕಾಸು ಸೇವೆಗಳು,ಆರೋಗ್ಯ ರಕ್ಷಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸದೃಢ ಬೆಳವಣಿಗೆಯು ಇದಕ್ಕೆ ಪೂರಕವಾಗಿರಲಿದೆ ಎಂದಿದ್ದಾರೆ.

ಸಂಯುಕ್ತ ಅರಬ್ ಗಣರಾಜ್ಯ (ಯುಎಎಇ)ವು ಅತ್ಯಂತ ಹೆಚ್ಚಿನ ಮಿಲಿಯಾಧೀಶರನ್ನು ಆಕರ್ಷಿಸಲಿದೆ ಎಂದು ವರದಿಯು ಬಿಂಬಿಸಿದೆ. ಪಟ್ಟಿಯಲ್ಲಿ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದ್ದು, 2022ರಲ್ಲಿ 2,800 ಮಿಲಿಯಾಧೀಶರ ಆಗಮನವನ್ನು ನಿರೀಕ್ಷಿಸಿರುವ ಸಿಂಗಾಪುರ ಮೂರನೇ ಸ್ಥಾನದಲ್ಲಿದೆ.

ಕಠಿಣ ತೆರಿಗೆ ನಿಯಮಗಳು ಮತ್ತು ಶಕ್ತಿಶಾಲಿ ಪಾಸ್‌ಪೋರ್ಟ್‌ಗಳನ್ನು ಹೊಂದುವ ಬಯಕೆಯು ಭಾರತದಿಂದ ಮಿಲಿಯಾಧೀಶರ ವಲಸೆಯನ್ನು ಪ್ರೇರೇಪಿಸುತ್ತಿದೆ ಎಂದು ಖೇತಾನ್ ಆ್ಯಂಡ್ ಕಂಪನಿಯ ಪಾಲುದಾರ ಬಿಜಲ್ ಅಜಿಂಕ್ಯ ಹೇಳಿದರು.

ಸೆ.30ರವರೆಗೆ ಕಳೆದ ಏಳು ವರ್ಷಗಳಲ್ಲಿ 8,81,254 ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕಳೆದ ಡಿಸೆಂಬರ್‌ನಲ್ಲಿ ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು ಸಂಸತ್ತಿನಲ್ಲಿ ತಿಳಿಸಿದ್ದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯ ದತ್ತಾಂಶಗಳಂತೆ 1,33,83,718 ಭಾರತೀಯರು ಈಗ ವಿದೇಶಗಳಲ್ಲಿ ವಾಸವಾಗಿದ್ದಾರೆ ಎಂದು ಅವರು ನವಂಬರ್‌ನಲ್ಲಿ ಸಂಸತ್ತಿನಲ್ಲಿ ಹೇಳಿದ್ದರು.

2020ರಲ್ಲಿ ಸುಮಾರು 5,000 ಅಥವಾ ಒಟ್ಟು ಮಿಲಿಯಾಧೀಶರ ಪೈಕಿ ಶೇ.2ರಷ್ಟು ಶ್ರೀಮಂತರು ಭಾರತವನ್ನು ತೊರೆದಿದ್ದರು ಎಂದು ಗ್ಲೋಬಲ್ ವೆಲ್ತ್ ಮೈಗ್ರೇಷನ್ ರಿವ್ಯೆ ವರದಿಯು ಹೇಳಿದೆ.

2014ರಿಂದ 23,000 ಭಾರತೀಯ ಮಿಲಿಯಾಧೀಶರು ದೇಶವನ್ನು ತೊರೆದಿದ್ದಾರೆ ಎಂದು ಹೂಡಿಕೆ ಬ್ಯಾಂಕ್ ಮಾರ್ಗನ್ ಸ್ಟಾನ್ಲಿ ತನ್ನ 2018ರ ವರದಿಯಲ್ಲಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X