Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ...

ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನಗೊಳ್ಳಬೇಕು: ಟಿ.ಎಸ್. ನಾಗಾಭರಣ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Jun 2022 7:50 PM IST
share
ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಶೇ.100ರಷ್ಟು ಕನ್ನಡ ಅನುಷ್ಠಾನಗೊಳ್ಳಬೇಕು: ಟಿ.ಎಸ್. ನಾಗಾಭರಣ ಸೂಚನೆ

ಉಡುಪಿ, ಜೂ.೧೪: ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಶಿಫಾರಸು ಮಾಡಿ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್. ನಾಗಾಭರಣ ಹೇಳಿದ್ದಾರೆ.

ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಆಗಿರುವ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಆಡಳಿತದಲ್ಲಿ ಕನ್ನಡವನ್ನು ಅನುಷ್ಠಾನಗೊಳಿಸುವಾಗ ಇಲಾಖೆಗಳ ಮಧ್ಯೆ ನಡೆಯುವ ಪ್ರತಿಯೊಂದು ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಒಂದೊಮ್ಮೆ ಅಂಗ್ಲಭಾಷೆಯಲ್ಲಿ ಇದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ ಎಚ್ಚರಿಸುವ ಕೆಲಸವನ್ನು ಇನ್ನೊಂದು ಇಲಾಖೆ ಮಾಡುವುದರೊಂದಿಗೆ ಸಮನ್ವಯ ಸಾಧಿಸ ಬೇಕು ಎಂದರು.

ಬ್ಯಾಂಕ್‌ಗಳಲ್ಲಿ ಕನ್ನಡ: ಸಾರ್ವಜನಿಕರು ತಮ್ಮ ದೈನಂದಿನ ಆರ್ಥಿಕ ಚಟುವಟಿಕೆಗಳನ್ನು ನಡೆಸಿ, ಅಗತ್ಯ ಸೇವೆಗಳನ್ನು ಪಡೆಯಲು ಬ್ಯಾಂಕ್‌ಗಳಿಗೆ ಭೇಟಿ ನೀಡಿದಾಗ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಒಂದೊಮ್ಮೆ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಕನ್ನಡದ ಭಾಷಾ ಸಮಸ್ಯೆ ಇದ್ದಲ್ಲಿ ಅವರಿಗೆ ಆಗಿಂದಾಗ್ಗೆ ಕನ್ನಡ ಕಲಿಕೆ ತರಬೇತಿಯನ್ನು ಕೊಡುವ ಕಾರ್ಯ ಅಗ್ರಣಿ ಬ್ಯಾಂಕ್ (ಲೀಡ್ ಬ್ಯಾಂಕ್) ಗಳಿಂದ ಆಗಬೇಕು ಎಂದು ಅವರು ನಿರ್ದೇಶನ ನೀಡಿದರು.

ಪ್ರಸ್ತುತ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡ ಹಾಗೂ ಕನ್ನಡೇತರ ಸಿಬ್ಬಂದಿಗಳ ವಿವರ ಹಾಗೂ ಅವರ ಕನ್ನಡ ಓದಲು, ಬರೆಯಲು ಹಾಗೂ ಮಾತನಾಡುವ ಪ್ರಮಾಣದ ಬಗ್ಗೆ ವಿವರಗಳನ್ನು ಪ್ರಾಧಿಕಾರಕ್ಕೆ ನೀಡಬೇಕು ಎಂದ ನಾಗಾಭರಣ, ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ಕನ್ನಡಿಗರೇ ಬ್ಯಾಂಕ್ ಉದ್ಯೋಗದಲ್ಲಿ ಸೇರುವಂತೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಎಟಿಎಂ ಯಂತ್ರದ ಡಿಸ್‌ಪ್ಲೇ ಗಳಲ್ಲಿ ಕನ್ನಡದ ಬಳಕೆ ಕಡ್ಡಾಯವಾಗಿ ಇರುವಂತೆ ಎಚ್ಚರವಹಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಕೈಗಾರಿಕೆಗಳಲ್ಲಿ ಪ್ರದರ್ಶಿಸುವ ಅಪಾಯದ ಎಚ್ಚರಿಕೆ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಿದ್ದಲ್ಲಿ ಸ್ಥಳಿಯ ಜನರಿಗೆ ಅದರ ಎಚ್ಚರಿಕೆ ಗೊತ್ತಾಗಿ ಅಪಘಾತ ಸಂಭವಿಸುವುದು ತಪ್ಪುತ್ತದೆ. ಕೈಗಾರಿಕೆಗಳಲ್ಲಿ ಕೌಶಲ್ಯ ಹಾಗೂ ಅಕೌಶಲ್ಯ ಕೆಲಸಗಳಿಗೆ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದ ಅವರು, ಪ್ರತಿಯೊಂದು ಉದ್ಯೋಗ ಘಟಕಗಳಲ್ಲಿ ಕನ್ನಡ ಸೆಲ್‌ಗಳನ್ನು ತೆರೆಯ ಬೇಕು.ಅದರಲ್ಲಿ ಸಿಬ್ಬಂದಿ ವರ್ಗದವರು ಹೆಚ್ಚು ಇರುವುದು ಅಗತ್ಯ ಎಂದರು.

ಗೊಬ್ಬರ, ಕೀಟನಾಶಕ ಮತ್ತು ಔಷಧಿಗಳ ಮೇಲೆ ಅವುಗಳ ಬಳಕೆ ಹಾಗೂ ಅದರಲ್ಲಿನ ಅಂಶಗಳ ಕುರಿತು ಕನ್ನಡದಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಒಂದೊಮ್ಮೆ ನಮೂದಿಸದೇ ಇರುವುದು ಕಂಡು ಬಂದಲ್ಲಿ ಅಂತಹ ಕಂಪೆನಿಗಳಿಗೆ ಪತ್ರ ಬರೆದು ನಮೂದಿಸುವಂತೆ ಎಚ್ಚರಿಸಬೇಕು. ವೈದ್ಯರುಗಳು ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಪರೀಕ್ಷಾ ವರದಿ ಅಥವಾ ರೋಗದ ಬಗ್ಗೆ ರೋಗಿಗಳಿಗೆ ಅಥವಾ ಅವರ ಸಂಬಂಧಿಕರಿಗೆ ಕನ್ನಡದಲ್ಲಿಯೇ ಸ್ಪಷ್ಟವಾಗಿ ಅರ್ಥವಾಗುವಂತೆ ತಿಳಿಸಬೇಕು. ಆರೋಗ್ಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ವರದಿಗಳನ್ನು ಕಳುಹಿಸುವಾಗ ಅವು ಕನ್ನಡದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು.

ಸಾಮಾನ್ಯವಾಗಿ ಎಲ್ಲಾ ಆಂಗ್ಲಪದಗಳಿಗೆ ಪರ್ಯಾಯವಾಗಿ ಕನ್ನಡ ಬಳಕೆಗೆ ಅನುಕೂಲವಾಗುವಂತೆ  ವಿವಿಧ ವಿಷಯಗಳಿಗೆ ಸಂಬಂಧಪಟ್ಟಂತೆ ೮೬ ವಿವಿಧ ಶಬ್ಧಕೋಶಗಳು ಲಭ್ಯವಿದ್ದು, ಇವುಗಳ ಸದ್ಬಳಕೆ ಮಾಡಿಕೊಳ್ಳ ಬಹುದು ಎಂದ ಡಾ.ನಾಗಾಭರಣ, ಆಡಳಿತದಲ್ಲಿ ಮಿಂಚಂಚೆಗಳನ್ನು ಕಳುಹಿಸುವಾಗ ವಿಳಾಸದಲ್ಲಿ ಕನ್ನಡದ ಪದ ಬಳಕೆ ಪ್ರಾರಂಭವಾಗಿದ್ದು, ಇದರ ಬಳಕೆಯಾಗಬೇಕು ಎಂದರು.  

ಜಾಹೀರಾತು ಫಲಕಗಳಲ್ಲಿ ಕನ್ನಡದ ಬಳಕೆ ಅಲ್ಪ ಪ್ರಮಾಣದಲ್ಲಿ ಇರುವಂತಹ  ಪ್ರಕಟಣೆಗಳಿಗೆ ಕಡಿವಾಣ ಹಾಕಬೇಕು. ಅಂಗಡಿ ನಾಮಫಲಕಗಳು ಸಹ ಕನ್ನಡದಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು.

ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಟೆಂಡರ್‌ಗಳನ್ನು ಕರೆಯುವಾಗ ಪ್ರತಿಯೊಂದು ಅರ್ಜಿ ನಮೂನೆಗಳು ಕನ್ನಡದಲ್ಲಿಯೇ ಇರಬೇಕು. ಉದ್ಯಾನವನಗಳು, ಸರಕಾರಿ ಕಟ್ಟಡಗಳಲ್ಲಿ ಕನ್ನಡದ ಕವಿಗಳು ಸಮಾಜಕ್ಕೆ ನೀಡಿರುವ ಹಿತ ಸಂದೇಶಗಳನ್ನು ಪ್ರಚಾರಪಡಿಸಬೇಕು. ಕನ್ನಡ ಎಲ್ಲೆಡೆ ಕಾಣುವಂತಾಗಬೇಕು, ಕನ್ನಡ ಎಲ್ಲೆಡೆ ಕೇಳಬೇಕು ಎಂದ ಅವರು ಉಡುಪಿ ಜಿಲ್ಲೆಯು ಕನ್ನಡ ಅನುಷ್ಠಾನಗೊಳಿಸುವಲ್ಲಿ ಮಾದರಿ ಜಿಲ್ಲೆಯಾಗಬೇಕು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯನ್ನು ಎಲ್ಲರ ಸಹಭಾಗಿತ್ವದೊಂದಿಗೆ ಕನ್ನಡಮಯವಾಗಿ ಸಬಹುದು. ಇದಕ್ಕೆ ಪ್ರತಿಯೊಬ್ಬರು  ಸಹಕಾರ ನೀಡಬೇಕು. ಇಂದಿನ ಸಭೆಯಲ್ಲಿ ನೀಡಿರುವ ಸಲಹೆ ಹಾಗೂ ಮಾರ್ಗದರ್ಶನಗಳು ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಹೆಚ್ಚಿನ ಸಹಕಾರಿ ಯಾಗಲಿವೆ ಎಂದರು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ.ರಮೇಶ್ ಗುಬ್ಬಿಗೂಡು, ಕಾರ್ಯದರ್ಶಿಗಳಾದ ಡಾ.ಸಂತೋಷ್ ಹಾನಗಲ್, ಮಹೇಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,  ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ವಿವಿಧ ಸಾಹಿತಿಗಳು,  ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಕಲಿಕಾ ಅಧಿನಿಯಮ-೨೦೦೭

ಕನ್ನಡ ಕಲಿಕಾ ಅಧಿನಿಯಮ ೨೦೧೭ರ ಅನ್ವಯ ರಾಜ್ಯದ ಎಲ್ಲಾ ಶಾಲೆಗಳು, ಮದರಸಗಳೂ ಸೇರಿದಂತೆ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷೆ  ಕಡ್ಡಾಯವಾಗಿ ಒಂದು ಭಾಷೆಯಾಗಿ ಇರಬೇಕು. ಸಿಬಿಎಸ್‌ಸಿ ಹಾಗೂ ಕೇಂದ್ರೀಯ ವಿದ್ಯಾಲಯಗಳಲ್ಲಿ ೧ರಿಂದ ೯ನೇ ತರಗತಿವರೆಗೆ ಸ್ಥಳೀಯ ಭಾಷೆಯನ್ನು ಒಂದು ವಿಷಯವಾಗಿ ಕಲಿಸಿದರೂ ೧೦ನೇ ತರಗತಿಯಲ್ಲಿ ಅದರ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಅಂಕಗಳನ್ನು ಗಣನೆಗೆ ತೆಗದು ಕೊಳ್ಳಬೇಕೆಂದು ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಸೂಚನೆ ನೀಡಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X