ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ನೇಮಕ

ಬೆಂಗಳೂರು, ಜೂ. 14: ರಾಜ್ಯದ ನೂತನ ಲೋಕಾಯುಕ್ತರಾಗಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವಂತೆ ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಮಂಡಲ ಉಭಯ ಸದನಗಳ ವಿಪಕ್ಷ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಟೀಲ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದರು.
ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನಾಳೆ (ಜೂ.15) ಬೆಳಗ್ಗೆ 9:45ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕದ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನವನ್ನು ಬೋಧಿಸಲಿದ್ದಾರೆ.
Next Story





