Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂಪೆಲ್ಸಿಸ್- ಲಾರ್ಡಲ್ ಕಂಪೆನಿಗಳ...

ಇಂಪೆಲ್ಸಿಸ್- ಲಾರ್ಡಲ್ ಕಂಪೆನಿಗಳ ಸಂಶೋಧನೆ, ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Jun 2022 8:53 PM IST
share
ಇಂಪೆಲ್ಸಿಸ್- ಲಾರ್ಡಲ್ ಕಂಪೆನಿಗಳ ಸಂಶೋಧನೆ, ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

ಬೆಂಗಳೂರು, ಜೂ. 14: ‘ಉದ್ಯಾನನಗರಿ ಬೆಂಗಳೂರು ಭಾರತದ ಐಟಿ-ಬಿಟಿ ಮತ್ತು ಸಂಶೋಧನೆ ಹಾಗೂ ನಾವೀನ್ಯತೆಗಳ ರಾಜಧಾನಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇಂಪೆಲ್ಸಿಸ್-ಲಾರ್ಡಲ್ ಕಂಪೆನಿಗಳು ಮನುಷ್ಯನ ದೇಹಾರೋಗ್ಯದ ಅಧ್ಯಯನ ಮತ್ತು ಕಂಡುಬರುವ ಅನಾರೋಗ್ಯಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಶೋಧನೆಯ ಮೂಲಕ ಡಿಜಿಟಲ್ ಸೇವೆಗಳ ನೆರವು ನೀಡಲಿದೆ’ ಎಂದು ಐಟಿ-ಬಿಟಿ ಸಚಿವ ಡಾ.ಆಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಮಂಗಳವಾರ ಆರೋಗ್ಯ ಸೇವೆಗಳ ಕ್ಷೇತ್ರ ಸೇರಿ ಹಲವು ವಲಯಗಳಿಗೆ ಡಿಜಿಟಲ್ ಸೇವೆಗಳನ್ನು ಒದಗಿಸುವ ಜಾಗತಿಕ ಮಟ್ಟದ `ಇಂಪೆಲ್ಸಿಸ್’ ಮತ್ತು `ಲಾರ್ಡಲ್ ಮೆಡಿಕಲ್’ ಕಂಪೆನಿಗಳು ನಗರದಲ್ಲಿ ಸ್ಥಾಪಿಸಿರುವ ವಿಶ್ವದರ್ಜೆಯ ಅತ್ಯಾಧುನಿಕ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, `ಆರೋಗ್ಯ ಸೇವೆಗಳಿಗೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಮಹತ್ತ್ವವಿದೆ' ಎಂದರು.

`ಹೃದಯಾಘಾತ, ರಕ್ತದೊತ್ತಡ, ಪಾಶ್ರ್ವವಾಯು ಮುಂತಾದ ಅನಾರೋಗ್ಯಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ, ಕ್ಷಿಪ್ರಗತಿಯಲ್ಲಿ ಸೂಕ್ತ ಚಿಕಿತ್ಸೆಯ ಮಾರ್ಗದರ್ಶನ ನೀಡುವುದು ಜರೂರಾಗಿ ನಡೆಯಬೇಕಾಗಿದೆ. ಇಂಪೆಲ್ಸಿಸ್ ಮತ್ತು ಲಾರ್ಡಲ್ ಕಂಪೆನಿಗಳು ಇವುಗಳನ್ನು ಸಾಧ್ಯವಾಗಿಸಲು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಸಾಫ್ಟ್‍ವೇರ್ ಅಭಿವೃದ್ಧಿಪಡಿಸುವುದು ರೋಗಿಗಳಿಗೆ ವರದಾನವಾಗಲಿದೆ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

`ಅಮೆರಿಕ ಮೂಲದ ಇಂಪೆಲ್ಸಿಸ್ ಕಂಪೆನಿಯು ಬೆಂಗಳೂರು ಮತ್ತು ಮಂಗಳೂರು ನಗರದಲ್ಲಿ ಕಚೇರಿ ಹೊಂದಿರುವುದು ಸ್ವಾಗತಾರ್ಹವಾಗಿದೆ. ಈ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಮೂಲಕ ಆರೋಗ್ಯ ಸೇವೆಗಳ ಜತೆಗೆ ಇ-ಕಲಿಕೆ, ಕಂಟೆಂಟ್ ಎಂಜಿನಿಯರಿಂಗ್, ಡಿಜಿಟಲ್ ಮಾರ್ಕೆಟಿಂಗ್ ಮುಂತಾದ ಕ್ಷೇತ್ರಗಳಿಗೂ ನೆರವು ಸಿಗಲಿದೆ' ಎಂದು ಅವರು ನುಡಿದರು.

`ಮಾಹಿತಿ ತಂತ್ರಜ್ಞಾನ ಮೂಲಸೌಲಭ್ಯ, ಸುರಕ್ಷತೆ ಮತ್ತು ಅಭಿವೃದ್ಧಿಯ ಸುಸ್ಥಿರ ಮಾದರಿಗಳನ್ನು ಈ ಕೇಂದ್ರಗಳು ಅಳವಡಿಸಿಕೊಂಡಿವೆ. 20 ವರ್ಷಗಳ ಅನುಭವ ಹೊಂದಿರುವ ಇಂಪೆಲ್ಸಿಸ್ ಕಂಪೆನಿಯಲ್ಲಿ ಸಾವಿರಕ್ಕೂ ಹೆಚ್ಚು ಪರಿಣತ ತಂತ್ರಜ್ಞರಿರುವುದು ಒಳ್ಳೆಯದು. ಕರ್ನಾಟಕವು ಇದರ ಲಾಭವನ್ನು ಪಡೆದುಕೊಳ್ಳಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಲಾರ್ಡಲ್ ಮೆಡಿಕಲ್ ಸಂಸ್ಥೆಯ ಸಿಇಒ ಆಲ್ಫ್ ಕ್ರಿಶ್ಚಿಯನ್ ಡೈಡಲ್ ಮತ್ತು ಇಂಪೆಲ್ಸಿಸ್ ಸ್ಥಾಪಕ ಹಾಗೂ ಸಿಇಒ ಸಮೀರ್ ಷರೀಫ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X