ಕ್ಲಿನಿಕ್‌ಗೆಂದು ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ: ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್ ಪೈ (67) ಎಂಬವರು ಜೂನ್ ೧೩ರಂದು ಬೆಳಗ್ಗೆ ೧೧:೩೦ರ ಸುಮಾರಿಗೆ ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಿನಿಕ್‌ಗೆ ಚಿಕಿತ್ಸೆಗೆಂದು ತೆರಳಿದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
೫ ಅಡಿ ೧೦ ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿ ಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





