ರಾಜ್ಯದ ಪ್ರತಿ ಜಿಲ್ಲೆಗೂ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ: ಸಲೀಂ ಅಹ್ಮದ್

ಮಂಗಳೂರು: ರಾಜ್ಯದ ಪ್ರತಿ ಜಿಲ್ಲೆಗೂ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಮುಂದಿನ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಡ್ಯಾರ್ ಗಾರ್ಡನ್ ನ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ನವ ಸಂಕಲ್ಪ ಶಿಬಿರದ ಕಾರ್ಯಕ್ರಮದ ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಅವರು ಸುದ್ದಿಗೋಷ್ಠಿ ಯನ್ನು ದ್ದೇಶಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಕಳೆದ ಎರಡು ದಿನಗಳಿಂದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಯವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಕಿರುಕುಳ ನೀಡುವ ಕಾರ್ಯಾಚರಣೆ ರಾಜಕೀಯ ಷಡ್ಯಂತ್ರದ ಭಾಗವಾಗಿ ನಡೆಯುತ್ತಿದೆ. 2015ರಲ್ಲಿ ಮುಕ್ತಾಯ ಗೊಂಡ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯ ಪ್ರಕರಣವನ್ನು ಮತ್ತೆ ಇ.ಡಿ ಮೂಲಕ ವಿಚಾರಣೆ ನೆಪದಲ್ಲಿ ಪಕ್ಷದ ಮುಖಂಡ ರ ಮೇಲೆ ಕಿರುಕುಳ ನಡೆಸಲಾಗುತ್ತಿದೆ. ಕಾಂಗ್ರೆಸ್ ಇಂತಹ ತಂತ್ರಗಳಿಗೆ ಹೆದರುವುದಿಲ್ಲ. ಈ ಖಂಡಿಸುತ್ತದೆ ಮತ್ತು ಇದರ ವಿರುದ್ಧ ನಿರಂತರ ಹೋರಾಟಕ್ಕೆ ಸಿದ್ಧವಿದೆ ಎಂದು ಸಲೀಂ ಅಹ್ಮದ್ ತಿಳಿಸಿದ್ದಾರೆ.
ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶೇ. 40 ಕಮೀಷನ್ ದಂಧೆಯ ಕುಖ್ಯಾತಿಯನ್ನು ಪಡೆದಿದೆ. ಅಭಿವೃದ್ಧಿಯ ಬಗ್ಗೆ ಯಾವುದೇ ಚಿಂತನೆ ನಡೆಯುತ್ತಿಲ್ಲ. ರಾಜ್ಯದ ವಿವಿಧ ಕಡೆಗಳಲ್ಲಿ ದಲಿತರು ಅಲ್ಪಸಂಖ್ಯಾತ ರ ವಿರುದ್ಧ ಸುಳ್ಳು ಪ್ರಕರಣ ಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿರುವುದು ರಾಜ್ಯ ದಲ್ಲಿ ಹೆಚ್ಚು ತ್ತಿದೆ ಎಂದು ಸಲೀಂ ಅಹ್ಮದ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಶಾಸಕ ಮತ್ತು ವಿಧಾನಸ ಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಶಾಸಕ ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಾಸಕರಾದ ಡಾ. ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಐವನ್ ಡಿ ಸೋಜ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಯುವ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಮೊದಲಾದವರು ಉಪಸ್ಥಿತ ರಿದ್ದರು.