Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರದ ವಿವಿಧ ಕಾಮಗಾರಿಗಳ ದಿಢೀರ್...

ನಗರದ ವಿವಿಧ ಕಾಮಗಾರಿಗಳ ದಿಢೀರ್ ಪರಿಶೀಲನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ14 Jun 2022 9:56 PM IST
share
ನಗರದ ವಿವಿಧ ಕಾಮಗಾರಿಗಳ ದಿಢೀರ್ ಪರಿಶೀಲನೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂ.14: ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್ ಅವರನ್ನು ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ಭಾಗದ ವಿವಿಧ ಕಾಮಗಾರಿಗಳ ಅನಿರೀಕ್ಷಿತ ತಪಾಸಣೆ ನಡೆಸಿದರು. 

ರಾಷ್ಟ್ರಪತಿಗಳನ್ನು ಬೀಳ್ಕೊಟ್ಟು, ಈ ಭಾಗದಲ್ಲಿ ವಿಶೇಷವಾಗಿ ಹೊರವರ್ತುಲ ರಸ್ತೆ ಮತ್ತು ಕೆಲವು ಪ್ರಮುಖ ರಸ್ತೆಗಳ ಸಂಚಾರ ದಟ್ಟಣೆ ನಿವಾರಣೆಗಾಗಿ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಳಗಳಿಗೆ ದಿಢೀರ್ ಭೇಟಿ ನೀಡಿದರು. ಆ ಯೋಜನೆಗಳ ಸಮಗ್ರ ವಿವರವನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಂದ ಪಡೆದರು. 

ನಂತರ ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳ ಜತೆ ಸರ್ಜಾಪುರ, ಮಾರತಹಳ್ಳಿ, ಎಚ್‍ಎಸ್‍ಆರ್ ಬಡಾವಣೆಗಳಿಗೆ ತೆರಳಿ ಕಾಮಗಾರಿಗಳ ವಸ್ತು ಸ್ಥಿತಿಯನ್ನು ಅರಿತು ಅಧಿಕಾರಿಗಳಿಗೆ ಕಾಮಗಾರಿಗಳ ನ್ನು ತ್ವರಿತವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿದರು. 

ಮೊದಲಿಗೆ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಮಾರತಹಳ್ಳಿ ಬ್ರಿಡ್ಜ್‍ಗೆ ಅವರು ಭೇಟಿ ನೀಡಿದರು. ನಂತರ ಕುಂದಲಹಳ್ಳಿಯಲ್ಲಿ  ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದರು. ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಐಟಿ ಕಂಪೆನಿಗಳು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇವೆ. ಈಗ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಎಲ್ಲರೂ ಕಚೇರಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಇದರಿಂದ ವಾಹನಗಳ ಸಂಚಾರ ಹೆಚ್ಚಾಗಿದೆ. ಹೀಗಾಗಿ, ತ್ವರಿತಗತಿಯಲ್ಲಿ ಕಾಮಗಾರಿ ಗಳನ್ನು ಪೂರ್ಣಗೊಳಿಸುವಂತೆ ಆದೇಶಿಸಿದರು. ನಂತರ ಪಣತ್ತೂರು ರೈಲ್ವೆ ಕೆಳಸೇತುವೆ ಬಳಿ ರಸ್ತೆ ಅಗಲೀಕರಣ ಕಾಮಗಾರಿ, ಜಕ್ಕಸಂದ್ರ ರಸ್ತೆ ಮೊದಲಾದವುಗಳ ತಪಾಸಣೆ ನಡೆಸಿ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಆರ್ ಟಿ ನಗರ ನಿವಾಸಕ್ಕೆ ಹಿಂದಿರುಗಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 


ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಿ

ಐಟಿ ವಲಯವಾಗಿರುವ ಈ ಭಾಗದಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಇದಕ್ಕೆ ಸಂಬಂಧಿಸಿದ ಕಾನೂನು ತೊಡಕು ಅಥವಾ ಇನ್ಯಾವುದೇ ಸವಾಲುಗಳಿದ್ದಲ್ಲಿ, ಅವುಗಳನ್ನು ಬಗೆಹರಿಸಿ ಶೀಘ್ರವೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X