ಮಂಗಳೂರು: ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು, ಜೂ.14: ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಮಂಗಳವಾರ ಪತ್ತೆ ಹಚ್ಚಿದ್ದಾರೆ.
ಪ್ರಯಾಣಿಕನಿಂದ 24 ಕ್ಯಾರೆಟ್‌ನ ಸುಮಾರು 964 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 49,74,240 ರೂ. ಎಂದು ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story