Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ''ಆ ಹೆದ್ದಾರಿಯಲ್ಲಿ ಒಂದೊಂದು...

''ಆ ಹೆದ್ದಾರಿಯಲ್ಲಿ ಒಂದೊಂದು ನೆನಪುಗಳಿವೆ'': ನಟ ಸಂಚಾರಿ ವಿಜಯ್ ಕುರಿತು ನಿರ್ದೇಶಕ ಮಂಸೋರೆ ಭಾವನಾತ್ಮಕ ಪತ್ರ

ವಾರ್ತಾಭಾರತಿವಾರ್ತಾಭಾರತಿ15 Jun 2022 6:24 PM IST
share
ಆ ಹೆದ್ದಾರಿಯಲ್ಲಿ ಒಂದೊಂದು ನೆನಪುಗಳಿವೆ: ನಟ ಸಂಚಾರಿ ವಿಜಯ್ ಕುರಿತು ನಿರ್ದೇಶಕ ಮಂಸೋರೆ ಭಾವನಾತ್ಮಕ ಪತ್ರ

ಬೆಂಗಳೂರು: 'ರಾಷ್ಟ್ರ ಪ್ರಶಸ್ತಿ' ವಿಜೇತ ನಟ ಸಂಚಾರಿ ವಿಜಯ್ ಕಳೆದ ವರ್ಷ ರಸ್ತೆ ಅಪಘಾತದಲ್ಲಿ ನಿಧನಹೊಂದಿದ್ದರು.

'ನಾನು ಅವನಲ್ಲ ಅವಳು' ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದ ನಟ ವಿಜಯ್ ನಿಧನವಾಗಿ ಇಂದಿಗೆ (ಜೂನ್ 15) ಒಂದು ವರ್ಷ ಕಳೆದಿದೆ. ಕಳೆದ ವರ್ಷ ಜೂನ್ 12ರಂದು ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಜಯ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಜೂ.15ರಂದು  ಮೃತಪಟ್ಟಿದ್ದರು.

ನಟನ ಆಪ್ತ ಸ್ನೇಹಿತ, ನಿರ್ದೇಶಕ ಮಂಸೋರೆ ತನ್ನ ಫೇಸ್ ಬುಕ್ ಖಾತೆಯಲ್ಲಿ ವಿಜಯ್ ಕುರಿತು ಭಾವನಾತ್ಮಕ ಬರಹ ಒಂದನ್ನು ಹಂಚಿಕೊಂಡಿದ್ದಾರೆ. 

ರಾಷ್ಟ್ರ ಪುರಸ್ಕೃತ ನಿರ್ದೇಶಕ ಮಂಸೋರೆ ಅವರ ಫೇಸ್ ಬುಕ್ ಪೋಸ್ಟ್ ಇಲ್ಲಿದೆ... 

ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4

ರಾಷ್ಟ್ರೀಯ ಹೆದ್ದಾರಿ 4, ನನ್ನ ಜೀವನದಲ್ಲಿ ಬಹು ಮುಖ್ಯವಾದ ಅಧ್ಯಾಯ. ಬೆಂಗಳೂರು ಚೆನ್ನೈ ನಗರವನ್ನು ಸಂಪರ್ಕಿಸುವ ಇಂದಿನ ರಾಷ್ಟ್ರೀಯ ಹೆದ್ದಾರಿ 75 ಚತುಷ್ಪಥ ರಸ್ತೆ ಆಗುವ ಮೊದಲು ರಾಷ್ಟ್ರೀಯ ಹೆದ್ದಾರಿ 4 ಎಂದಿತ್ತು.  ಅದು ನಮ್ಮೂರನ್ನು ಹಾದು ಹೋಗುವ ಹೆದ್ದಾರಿ ಆದ್ದರಿಂದ ಸಹಜವಾಗಿಯೇ ಅದರೊಂದಿಗೆ ಒಂದು ನಾಸ್ಟಾಲಜಿ ಬೆಸೆದುಕೊಂಡಿರುತ್ತದೆ. ಆದರೆ ನನಗೆ ರಾಷ್ಟ್ರೀಯ ಹೆದ್ದಾರಿ 4 ಹೆಚ್ಚು ಮುಖ್ಯವಾದದ್ದು, ಹರಿವು ಸಿನೆಮಾದ ಕಾರಣಕ್ಕೆ. ಹರಿವು-ಮೊದಲ ನಿರ್ದೇಶನದ ಸಿನೆಮಾ, ಮೊದಲ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ತಂದುಕೊಟ್ಟ ಸಿನೆಮಾ, ನಾನಾ ಕೆಲಸಗಳನ್ನು ಮಾಡಿಕೊಂಡಿದ್ದ ನನಗೆ, ನಿರ್ದೇಶಕನಾಗಿ ಒಂದು ಗಟ್ಟಿಯಾದ ನೆಲೆ ಕೊಟ್ಟ ಸಿನೆಮಾ, ಅದೆಲ್ಲದಕ್ಕಿಂತ ಹೆಚ್ಚಾಗಿ ‘ಸಂಚಾರಿ ವಿಜಯ್’ ಎಂಬ ಆಪ್ತ ಗೆಳೆಯನನ್ನು ಕೊಟ್ಟ ಸಿನೆಮಾ. ಮುಖ್ಯ ಪಾತ್ರ ನಾಯಕನಾಗಿ ವಿಜಯ್ ಸರ್ ಮೊದಲ ಸಿನೆಮಾ ಹರಿವು, ಅದರ ಮೊದಲ ಶಾಟ್ 2012ರಲ್ಲಿ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4, ನಾನು ನಿರ್ದೇಶಕನಾಗಿ ಮೊದಲ ಬಾರಿಗೆ Action-Cut ಹೇಳಿದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. ಆ ಸಿನೆಮಾ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ. ‘ಹರಿವು’ ಸಿನೆಮಾದ ಮುಖ್ಯ ಕತೆ ಅನಾವರಣಗೊಳ್ಳುವುದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. 2012ರಲ್ಲಿ ಮೊದಲ ಬಾರಿಗೆ ಚಿತ್ರೀಕರಣ ಆರಂಭಿಸಿದಾಗ ಮಾಡಿಕೊಂಡ ಅವಾಂತರಗಳು, ಕಲಿಸಿದ ಪಾಠಗಳು, ನಿರ್ದೇಶನದ ಕಡೆಗೆ ಇರಬೇಕಾದ ಬದ್ಧತೆಗಳನ್ನು ಕಲಿಸಿಕೊಟ್ಟದ್ದು ಇದೇ ರಾಷ್ಟ್ರೀಯ ಹೆದ್ದಾರಿ 4.

ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ನಾನು ‘ಸಂಚಾರಿ ವಿಜಯ್’ ಸರ್ ಸಾಕಷ್ಟು ಬಾರಿ ಜೊತೆಯಾಗಿ ಪ್ರಯಾಣ ಮಾಡಿದ್ದೇವೆ.  ಆದರೆ ಈ ರಾಷ್ಟ್ರೀಯ ಹೆದ್ದಾರಿ 4 ನನ್ನ ಪಾಲಿಗೆ ಶಾಶ್ವತವಾದ ದುಃಖದ ನೆನಪೊಂದನ್ನು ಉಳಿಸಿ ಬಿಡುತ್ತದೆ ಎಂದು ಯಾವತ್ತೂ ಯೋಚಿಸಿರಲಿಲ್ಲ.

ಎಷ್ಟೊ ಕನಸುಗಳು, ನಗು, ಜಗಳ, ನೆನಪುಗಳ ಮೂಲಕ ಸಂಚರಿಸಿದ್ದ ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ, ನನ್ನ ಗೆಳೆಯನ ಜೊತೆ ಅಂತಿಮ ಪ್ರಯಾಣ ಮಾಡುವ ದಿನ ಬಂದಿದ್ದು ನನ್ನ ಪಾಲಿನ ಬಹು ದೊಡ್ಡ ದುರಂತ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ, ಈ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಆಪ್ತ ಗೆಳೆಯನನ್ನು Ambulance ಅಲ್ಲಿ ಮಲಗಿಸಿಕೊಂಡು, ಅವರ ಆಪ್ತವಾದ ಸಾಕಷ್ಟು ಕನಸುಗಳನ್ನು ಕಂಡಿದ್ದ ಅವರ ದುಡಿಮೆಯ ಗಳಿಕೆಯಿಂದ ಕೊಂಡುಕೊಂಡಿದ್ದ ಅವರ ತೋಟಕ್ಕೆ ಕರೆದುಕೊಂಡು ಹೋಗಿ ಬಿಟ್ಟು ಬರುವಂತ ದಿನ ಬರುತ್ತದೆ ಎಂದು ಯಾವತ್ತೂ ಊಹಿಸಿರಲಿಲ್ಲಾ.. ಅಂತ ದುರಂತದ ದಿನಕ್ಕೆ ಇಂದಿಗೆ ಒಂದು ವರ್ಷ.

ವಿಜಯ್ ಸರ್ ನನಗೆ ಪರಿಚಯ ಆಗಿದ್ದು, ಮೊದಲ ಬಾರಿ ಮಾತನಾಡಿದ್ದು  13-06-2012  ಅವರು ನನ್ನೊಂದಿಗೆ ಮಾತು ನಿಲ್ಲಿಸಿ ಮೌನವಾಗಿದ್ದು 13-06-2021.

ಅಪ್ಪನ ಜೊತೆಯ ನೆನಪಿನ ಕೊನೆಯ ಪಯಣವೂ ಇದೇ ರೀತಿ ಆಂಬ್ಯುಲೆನ್ಸ್ ನಲ್ಲೇ ಸಾಗಿತ್ತು, ಅಷ್ಟೇ ಆಪ್ತನಾದ ಗೆಳೆಯನ ಜೊತೆಯ ಕೊನೆಯ ಪಯಣವೂ ಆಂಬ್ಯುಲೆನ್ಸಲ್ಲೇ ಸಾಗುವಂತಾಯಿತು. ಅದು ನಮ್ಮಿಬ್ಬರ ಪಾಲಿನ, ಜೀವನದಲ್ಲಿ ಮುಖ್ಯವಾದ ಹೆದ್ದಾರಿಯಲ್ಲಿ.

ಆ ಹೆದ್ದಾರಿಯಲ್ಲಿ ಒಂದೊಂದು ಹಂತದಲ್ಲೂ ಒಂದೊಂದು ನೆನಪುಗಳಿವೆ, ಪ್ರತೀ ಬಾರಿ ಹೋದಾಗಲೂ ಆ ನೆನಪುಗಳು ಕಾಡುತ್ತಲೇ ಇರುತ್ತವೆ, ಮಿಸ್ ಯೂ ‘ಸಂಚಾರಿ ವಿಜಯ್’ ಸರ್ ಎಂದು ನಿರ್ದೇಶಕ ಮಂಸೋರೆ ಬರೆದುಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X