ಐರ್ಲ್ಯಾಂಡ್ ವಿರುದ್ಧ ಟ್ವೆಂಟಿ-20 ಸರಣಿ: ಭಾರತಕ್ಕೆ ಹಾರ್ದಿಕ್ ಪಾಂಡ್ಯ ನಾಯಕ

Photo:PTI
ಹೊಸದಿಲ್ಲಿ, ಜೂ.15: ಐರ್ಲ್ಯಾಂಡ್ ವಿರುದ್ಧದ 2 ಪಂದ್ಯಗಳ ಟ್ವೆಂಟಿ-20 ಅಂತರ್ರಾಷ್ಟ್ರೀಯ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ.
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿಯೂ, ವೇಗದ ಬೌಲರ್ ಭುವನೇಶ್ವರ ಕುಮಾರ್ ಅವರನ್ನು ಉಪ ನಾಯಕನನ್ನಾಗಿಯೂ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಈಗ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20ಸರಣಿಯಲ್ಲಿ ಭಾರತದ ನಾಯಕತ್ವವಹಿಸಿದ ರಿಷಭ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಐರ್ಲ್ಯಾಂಡ್ನ ಡಲ್ಟಿನ್ ದಿ ವಿಲೇಜ್ನಲ್ಲಿ ಜೂನ್ 26 ಹಾಗೂ 28ರಂದು ಪಂದ್ಯಗಳು ನಡೆಯಲಿವೆ.
ಭಾರತ ಟ್ವೆಂಟಿ-20 ತಂಡ: ಹಾರ್ದಿಕ್ ಪಾಂಡ್ಯ(ನಾಯಕ), ಭುವನೇಶ್ವರ ಕುಮಾರ್(ಉಪ ನಾಯಕ),ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್(ವಿಕೆಟ್ಕೀಪರ್), ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಹರ್ಷಲ್ ಪಟೇಲ್, ಅವೇಶ್ ಖಾನ್,ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.