Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ಮೋದಿ ಯಶಸ್ವೀ ಆಡಳಿತದ ಅಂಕ...

ಪ್ರಧಾನಿ ಮೋದಿ ಯಶಸ್ವೀ ಆಡಳಿತದ ಅಂಕ ಪಟ್ಟಿಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿದ್ದಾರೆ: ಶಾಸಕ ಭರತ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ15 Jun 2022 11:31 PM IST
share
ಪ್ರಧಾನಿ ಮೋದಿ ಯಶಸ್ವೀ ಆಡಳಿತದ ಅಂಕ ಪಟ್ಟಿಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿದ್ದಾರೆ: ಶಾಸಕ ಭರತ್ ಶೆಟ್ಟಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ 8 ವರ್ಷ ಯಶಸ್ವೀ ಆಡಳಿತದ ಅಂಕ ಪಟ್ಟಿಯನ್ನು ಪಕ್ಷದ ಕಾರ್ಯಕರ್ತರು ಕ್ಷೇತ್ರದ ಪ್ರತೀ ಮನೆ ಮನೆಗೆ ತಲುಪಿಸಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಶಾಸಕ ವೈ. ಭರತ್ ಶೆಟ್ಟಿ ಹೇಳಿದ್ದಾರೆ.

ಸುರತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆರೋಗ್ಯ ಮತ್ತು ಸಾಂಕ್ರಾಮಿಕ ವಿಪತ್ತು ನಿರ್ವಹಣೆ, ವಾಕ್ಸಿನೇಷನ್ ದಾಖಲೆಯ ಸೇವೆ, ರೈತರ ಕಲ್ಯಾಣ , ಯುವ ಸಬಲೀಕರಣ, ಆರ್ಥಿಕ ಸಲಕರಣೆಗಳು, ತಂತ್ರಜ್ಞಾನ, ಶಿಕ್ಷಣ ನೀತಿ, ಐತಿಹಾಸಿಕ ಹೆಗ್ಗುರುತಿನ ನಿರ್ಧಾರಗಳಾದ ರಾಮಮಂದಿರ ನಿರ್ಮಾಣಕ್ಕೆ ಚಾಲನೆ, ಕಾಶಿ ವಿಶ್ವನಾಥ ಕ್ಷೇತ್ರ ಮತ್ತು ಕೇದಾರನಾಥ ಕ್ಷೇತ್ರದ ಜೀರ್ಣೋದ್ಧಾರ, ತ್ರಿವಳಿ ತಲಾಕ್ ಅಂತ್ಯ ಮತ್ತಿತರ ಹತ್ತು ಹಲವು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ 8ವರ್ಷದ ಆಡಳಿತದಲ್ಲಿ  ಐತಿಹಾಸಿಕ  ಸಾಧನೆಗಳು ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಗೌರವಾರ್ಥ 5 ಸ್ಥಳಗಳನ್ನು ಪಂಚತೀರ್ಥಗಳಾಗಿ ಅಭಿವೃದ್ಧಿ, ಯೋಗ ದಿನಾಚರಣೆ, ನವೆಂಬರ್ 26ರನ್ನು ಸಂವಿಧಾನ ದಿನವನ್ನಾಗಿ ಆಚರಣೆ ಮತ್ತಿತರ ಹಲವು ಯೋಜನೆಗಳನ್ನು ಸರಕಾರ ಜಾರಿಗೆ ತಂದಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ 80 ಕೋಟಿ ಜನರಿಗೆ ಉಚಿತ ಆಹಾರ ಸಾಮಗ್ರಿಗಳ ಪೂರೈಕೆ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಗರ ಪ್ರದೇಶದಲ್ಲಿ 1.22 ಕೋಟಿ ಮನೆ ಮತ್ತು ಗ್ರಾಮೀಣ ಭಾಗಗಳಲ್ಲಿ 2.3 ಕೋಟಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ, ಹರ್ ಘರ್ ನಲ್ ಸೆ ಜಲ್ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 6.2 ಕೋಟಿ ಹೊಸ ಮನೆಗಳಿಗೆ ಕೊಳವೆ ನೀರು ಸಂಪರ್ಕ ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಯಡಿ 29.6 ಲಕ್ಷ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಯೋಜನೆ ಆಯುಷ್ಮಾನ್ ಯೋಜನೆಯಡಿ 3.2 ಕೋಟಿ ಜನರಿಗೆ r5 ಲಕ್ಷ ರೂ. ಯಷ್ಟು ಉಚಿತ ಚಿಕಿತ್ಸಾ ವಿಮೆ,  18 ಕೋಟಿಗೂ ಹೆಚ್ಚು ಆಯುಷ್ಮಾನ್ ಕಾರ್ಡ್ ಗಳ ವಿತರಣೆ, ವಿಶ್ವದ ಅತ್ಯಂತ ದೊಡ್ಡ ಲಸಿಕೆ ಅಭಿಯಾನದಲ್ಲಿ 190 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿಕೆ, 8,720 ಏಳು ಜನ ಔಷಧಿ ಕೇಂದ್ರಗಳಲ್ಲಿ ಕೈಗೆಟಕುವ ದರದಲ್ಲಿ ಔಷಧಿಗಳ ವಿತರಣೆ, ಕಳೆದ 8 ವರ್ಷಗಳಲ್ಲಿ 15 ಹೊಸ ಎಐಐಎಂ ಗಳ ಉದ್ಘಾಟನೆ ಸುಮಾರು 200 ಹೊಸ ವೈದ್ಯಕೀಯ ಕಾಲೇಜುಗಳ ಪ್ರಾರಂಭ, ದೇಶದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಯೋಜನೆ, ಪ್ರತಿ ಬ್ಲಾಕ್ಗಳನ್ನು ಆರೋಗ್ಯ ಕೇಂದ್ರಗಳ ಸ್ಥಾಪನೆ ಸೇರಿದಂತೆ ಹಲವಾರು ಜನಪ್ರಿಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿದೆ ಇದು ಮೋದಿ ಸರಕಾರದ ಎಂಟು ವರ್ಷಗಳ ಸಾಧನೆ ಎಂದರು.

ತನ್ನ ಕ್ಷೇತ್ರದಲ್ಲಿ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಸರಕಾರಿ ಸೌಲಭ್ಯಗಳಾದ ಆಧಾರ್ ಕಾರ್ಡ್ ಸೇವೆ ಪಿಂಚಣಿ, ಇ ಶ್ರಮ, ಆಯುಷ್ಮಾನ್,  ರೇಷನ್ ಕಾರ್ಡ್  ನೀಡುವ ಕಾರ್ಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆ , ರಾಜ್ಯದಾದ್ಯಂತ ಹದಿನೈದು ದಿನಗಳ ಕಾಲ ಸಮಾಜಮುಖಿ ಕಾರ್ಯಕ್ರಮಗಳನ್ನು‌ ಜೂ.1ರಿಂದ ಜೂ.15ರ ವರೆಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್‍ರಾಜ್ ಕೃಷ್ಣಾಪುರ, ಸಂದೀಪ್ ಪಚ್ಚನಾಡಿ, ಮಹೇಶ್ ಮೂರ್ತಿ ಸುರತ್ಕಲ್ ,  ಶರತ್ ರಾಜ್ ಕೃಷ್ಣಾಪುರ , ಮನಪಾ ಸದಸ್ಯರಾದ ಶ್ವೇತಾ ಪೂಜಾರಿ, ಕಿರಣ್ ಕುಮಾರ್ ಕೋಡಿಕಲ್, ನಯನಾ ಆರ್.ಕೋಟ್ಯಾನ್, ಬಿಜೆಪಿ ಮುಖಂಡರಾದ ರಾಜೇಶ್ ಮುಕ್ಕ , ರಾಘವೇಂದ್ರ ಶೆಣೈ, ಪುಷ್ಪರಾಜ್  ಉಪಸ್ಥಿತರಿದ್ದರು.

ಟೋಲ್ ತೆರವಿಗೆ ನನ್ನ ಬೆಂಬಲವಿದೆ: ಶಾಸಕ ಭರತ್ ಶೆಟ್ಟಿ
ಟೋಲ್‍ಗೇಟ್  ವಿಚಾರಕ್ಕೆ ಸಂಬಂಧಪಟ್ಟಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಸುರತ್ಕಲ್ ಟೋಲ್ ಗೇಟ್ ತೆರವಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಸಮಿತಿಯ ಹೆಸರಿನಲ್ಲಿ ನಾಟಕವಾಡುವವರನ್ನು ಬಿಟ್ಟು ಸಾರ್ವಜನಿಕರು ಹೋರಾಟಗಳನ್ನು ಆಯೊಜಿಸಿದರೆ ನಾನೂ ಭಾಗವಹಿಸುತ್ತೇನೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X