Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸಮರ್ಥ ಗೃಹ ಸಚಿವರಿಂದ ರಾಜ್ಯದಲ್ಲಿ...

ಅಸಮರ್ಥ ಗೃಹ ಸಚಿವರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ16 Jun 2022 10:23 AM IST
share
ಅಸಮರ್ಥ ಗೃಹ ಸಚಿವರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಶಾಸಕ ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಅಸಮರ್ಥ ಗೃಹ ಸಚಿವರಿಂದಾಗಿ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಹಾಗಾಗಿ, ಜಿಲ್ಲೆಯಲ್ಲಿ ಮಹಿಳೆಯರ ನಾಪತ್ತೆ ಪ್ರಕರಣಗಳು‌ ಬೆಳಕಿಗೆ ಬರುತ್ತಿವೆ ಎಂದು ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಅವರು ಕಲಬುರಗಿಯ ಜಗತ್ ಸರ್ಕಲ್ ಬಳಿಯ ಬಸವೇಶ್ವರ ಪ್ರತಿಮೆಯ ಹತ್ತಿರ ನಡೆಯುತ್ತಿರುವ 24 ಗಂಟೆಗಳ ಅಹೋರಾತ್ರಿ ಧರಣಿಯ ಸ್ಥಳದಲ್ಲಿ ಮಾಧ್ಯಮದವದರೊಂದಿಗೆ ಮಾತನಾಡುತ್ತಿದ್ದರು.

ಪಠ್ಯಪುಸ್ತಕಗಳಲ್ಲಿ ಕೇಸರಿಕರಣ ಹಾಗೂ‌ ಪರಿಷ್ಕೃತ ಪಠ್ಯಪುಸ್ತಕ ದಲ್ಲಿ ಮಹನೀಯರಿಗೆ ಅವಹೇಳನ ಮಾಡಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು‌ ವಿರೋಧಿಸಿ 24 ಗಂಟೆಗಳ ಅಹೋರಾತ್ರಿ‌ ಧರಣಿ ನಡೆಸುತ್ತಿದ್ದು ಖರ್ಗೆ ಅವರು ನಿನ್ನೆ ಬೆಳಿಗ್ಗೆಯಿಂದಲೇ ಭಾಗವಹಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ‌ 40ಕ್ಕೂ ಅಧಿಕ ಚಿಕ್ಕ‌ವಯಸ್ಸಿನ ಮಕ್ಕಳೂ ಸೇರಿದಂತೆ ಮಹಿಳೆಯರು ನಾಪತ್ತೆಯಾಗಿರುವ ಕುರಿತು ಪೊಲೀಸ್ ಠಾಣೆ ಗಳಲ್ಲಿ ದೂರು ದಾಖಲಾಗಿವೆ.   ಇದು ಜಿಲ್ಲೆಯಲ್ಲಿ ಕಾನೂನು ಸುವವ್ಯಸ್ಥೆಗೆ ಹಿಡಿದ‌ ಕನ್ನಡಿಯಾಗಿದೆ. ಇದಕ್ಕೆ ಯಾರು ಉತ್ತರ ಕೊಡಬೇಕು ? ಸ್ವತಃ ಗೃಹ ಸಚಿವರಿಗೆ ತಮ್ಮ ಇಲಾಖೆಯ ಬಗ್ಗೆ ಗೌರವವಿಲ್ಲ. ತಮ್ಮ ಸಿಬ್ಬಂದಿಗಳನ್ನೇ 'ಎಂಜಲು ಕಾಸಿಗೆ ಕಾಯುವ ನಾಯಿಗಳು' ಎಂದು ಜರಿಯುತ್ತಾರೆ. ಹೀಗಿರುವಾಗ ಇಲಾಖೆಯ ಮೇಲೆ ಹಿಡಿತ ಹೇಗೆ ಸಾಧ್ಯ ? ಕಾನೂನು ಸುವವ್ಯಸ್ಥೆ ಬಿಗಿಯಾಗಿರಲು‌ ಸಾಧ್ಯ ? ಎಂದು ಪ್ರಶ್ನಿಸಿದರು.

ನಗರದ ಲಾಡ್ಜ್ ಗಳು ಪೊಲೀಸರ ಸೆಟಲ್ ಮೆಂಟ್ ಕೇಂದ್ರಗಳಾಗಿವೆ ಎಂದು ಆರೋಪಿಸಿದ ಅವರು, ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿವೆ. ಗಾಂಜಾ, ಮಟ್ಕಾ, ಬೆಟ್ಟಿಂಗ್ ದಂದೆಗಳು ಅವ್ಯಾಹತವಾಗಿ ಸಾಗಿವೆ.‌ ಇಲಾಖೆ ಬಗ್ಗೆ ಹೆದರಿಕೆ ಯಾರಿಗೂ ಇಲ್ಲದಂತಾಗಿದೆ. ಇಂತಹ ಸಂದರ್ಭಲ್ಲಿ ಮಹಿಳೆಯರ ರಕ್ಷಣೆ ಯಾರು ಮಾಡಬೇಕು? ಕೇಂದ್ರ ಸರ್ಕಾರದ "ಬೇಟಿ ಬಜಾವೋ; ಬೇಟಿ ಪಡಾವೋ" ಯೋಜನೆ ಕೇವಲ ನಾಮಕಾವಾಸ್ಥೆಯಂತಾಗಿದ್ದು, ಈ ಯೋಜನೆ ಕೇವಲ ಪ್ರಚಾರ ಮಾತ್ರ ಪಡೆದುಕೊಂಡಿದೆ ಎಂದು ಟೀಕಿಸಿದರು.

ಎರಡೂವರೆ ವರ್ಷದಲ್ಲಿ 180 ಮಿಸ್ಸಿಂಗ್ ಕೇಸ್ ನಡೆದಿವೆ, 34 ಯುವತಿಯರು, ಮಹಿಳೆಯರ ಸುಳಿವೆ ಇಲ್ಲ ಎಂದು ಕಳವಳ‌ ವ್ಯಕ್ತಪಡಿಸಿದ ಅವರು ಮಹಿಳೆಯರು ನಾಪತ್ತೆಯಾದ ಪ್ರಕರಣಗಳಲ್ಲಿ ಅವರನ್ನ ಬಲವಂತದಿಂದಲೂ ಕರೆದುಕೊಂಡು ಹೋಗಿರಬಹುದು. ಪೊಲೀಸರು ಮಹಿಳೆಯರು ನಾಪತ್ತೆ ವಿಷಯ ಬಂದಾಗ ಮೊದಲು ದೂರು ದಾಖಲಿಸಿಕೊಂಡು ತಕ್ಷಣ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಅವರು ಆಗ್ರಹಿಸಿದರು.

ಮಹಿಳೆಯ ಜೀವನ ನಿರ್ವಹಣೆಗೆ ಹಾಗೂ ಅವರು ಗೌರವಯುತವಾಗಿ ಬದುಕುವಂತಾಗಲು ಸರ್ಕಾರ ಸಮಗ್ರ ಯೋಜನೆಗಳನ್ನು ಕಟ್ಟುನಿಟ್ಟಾಗಿ‌ ಜಾರಿಗೆ ತರುವಂತೆ ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X