Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೈಜ್ನಟ್ರಾಜ್ ರ ‘ಕೇಳದೆ ನಿಮಗೀಗ’ ಕೃತಿಗೆ...

ಫೈಜ್ನಟ್ರಾಜ್ ರ ‘ಕೇಳದೆ ನಿಮಗೀಗ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ16 Jun 2022 2:09 PM IST
share
ಫೈಜ್ನಟ್ರಾಜ್ ರ ‘ಕೇಳದೆ ನಿಮಗೀಗ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು: ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2020ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ, ಕವಿ, ಅಧ್ಯಾಪಕ ಸಂತೆಬೆನ್ನೂರು ಫೈಜ್ನಟ್ರಾಜ್ ರವರ ‘ಕೇಳದೆ ನಿಮಗೀಗ’ (ಕವನ ಸಂಕಲನ) ಕೃತಿ ಆಯ್ಕೆಯಾಗಿದೆ.

‘ಎದೆಯೊಳಗಿನ ತಲ್ಲಣ’ ಮತ್ತು’ಬುದ್ಧನಾಗ ಹೊರಟು’(ಕವನ ಸಂಕಲನಗಳು), ‘ಮಂತ್ರದಂಡ’ (ಮಕ್ಕಳ ಕವನ ಸಂಕಲನ), ‘ಸ್ನೇಹದ ಕಡಲಲ್ಲಿ’ (ಮಕ್ಕಳ ಕಥಾ ಸಂಕಲನ), ‘ಹಬ್ಬಿದಾ ಮಲೆ ಮಧ್ಯದೊಳಗೆ’ (ಕಥಾ ಸಂಕಲನ) ಮತ್ತು ‘ಲೋಕದ ಡೊಂಕು’ (ಆಧುನಿಕ ವಚನಗಳು) ಇವು ಫೈಜ್ನಟ್ರಾಜ್ ರವರ ಇತರ ಪ್ರಕಟಿತ ಕೃತಿಗಳು.

ಸೈಯದ್ ಫೈಜುಲ್ಲಾ ಮೂಲ ಹೆಸರಾದರೂ ಸಾಹಿತ್ಯಿಕ ಸ್ಪೂರ್ತಿ ನೀಡಿದ ಗೆಳೆಯ ನಟರಾಜ್ ರವರ ಹೆಸರನ್ನು ಸೇರಿಸಿಕೊಂಡು ಸಂತೆಬೆನ್ನೂರು ಫೈಜ್ನಟ್ರಾಜ್ ಕಾವ್ಯನಾಮದೊಂದಿಗೆ ಬರೆಯುತ್ತಿರುವ ಇವರು ವೃತ್ತಿಯಲ್ಲಿ ಕನ್ನಡ ಅಧ್ಯಾಪಕರು. ತಮ್ಮ ಶಾಲೆಯಲ್ಲಿ ‘ಅಂಗಳದ ಹೂವುಗಳು’ ಕೈ ಬರಹದ ಗೋಡೆ ಮಾಸ ಪತ್ರಿಕೆ ಹಾಗೂ ಮಕ್ಕಳ ‘ಕನ್ನಡ ಭಾಷಾ ಬಳಗ’ ಹುಟ್ಟು ಹಾಕುವ ಮೂಲಕ ವಿದ್ಯಾರ್ಥಿಗಳನ್ನು ಕನ್ನಡದ ಕೆಲಸಗಳಿಗೆ ಹಚ್ಚುತ್ತಿದ್ದಾರೆ.

‘ಸಂಚಯ ಕಾವ್ಯ ಪುರಸ್ಕಾರ’, ‘ಹಾಮಾನಾ ಕಥಾ ಪುರಸ್ಕಾರ’, ‘ಸ್ನೇಹಶ್ರೀ ಪ್ರಶಸ್ತಿ’, ಹಾಗೂ ಇತ್ತೀಚೆಗೆ ಬಂದಿರುವ ‘ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ’ ಇವು ಸೃಜನಶೀಲ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ಫೈಜ್ನಟ್ರಾಜ್ ರಿಗೆ ಸಂದಿರುವ ಗೌರವ ಪುರಸ್ಕಾರಗಳು. ಮಹಾರಾಷ್ಟ್ರದ ಶಿಕ್ಷಣ ಇಲಾಖೆಯ ಪಠ್ಯದಲ್ಲಿ ಇವರ ಕಥೆಯೊಂದು ಪಠ್ಯವಾಗಿರುವುದು ಕನ್ನಡಿಗರು ಹೆಮ್ಮೆ ಪಡುವ ವಿಚಾರ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ಈ ಪ್ರಶಸ್ತಿಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಜುಲೈ 24ರಂದು ದಾವಣಗೆರೆಯಲ್ಲಿ ನಡೆಯಲಿರುವ ‘ಈದ್ ಕಿ ಖುಷಿ’ ಸಮಾರಂಭ ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗೆ 37 ಕೃತಿಗಳು ಬಂದಿದ್ದು, ಹಿರಿಯ ಸಾಹಿತಿ ಫಕೀರ್ ಮುಹಮ್ಮದ್ ಕಟ್ಪಾಡಿ, ಪತ್ರಕರ್ತ ಎನ್.ಎ.ಎಂ. ಇಸ್ಮಾಯಿಲ್ ಮತ್ತು ಸಾಹಿತಿ, ಕವಿ ಡಾ. ಅಮೀರುದ್ದೀನ್ ಖಾಝಿ, ಬಿಜಾಪುರ ತೀರ್ಪುಗಾರರಾಗಿ ಸಹಕರಿಸಿದ್ದಾರೆ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್.  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X