ಕುಳಾಯಿ ಫೌಂಡೇಶನ್‌ನಿಂದ ಬಡ ವಿದ್ಯಾರ್ಥಿಗಳ ದತ್ತು ಸ್ವೀಕರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಪಡೆಯಲಾಗದೆ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕುಳಾಯಿ ಫೌಂಡೇಶನ್ ಸ್ಥಾಪಿಸಿ ಆ ಮೂಲಕ ಈ ವರ್ಷ 250 ಮಂದಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ನಿರ್ಧರಿಸಲಾಗಿದೆ ಎಂದು ಫೌಂಡೇಶನ್ ಮುಖ್ಯಸ್ಥೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದತ್ತು ಸ್ವೀಕಾರ ಪಡೆಯಲು ವಿದ್ಯಾರ್ಥಿಗಳ ಅಂಕ ಯಾವುದೇ ರೀತಿಯಲ್ಲಿ ಮಾನದಂಡವಾಗಿರುವುದಿಲ್ಲ. ಮಕ್ಕಳ ಮನೆಯ ಆರ್ಥಿಕ ಪರಿಸ್ಥಿತಿ ಯನ್ನು ಪರಿಶೀಲಿಸಿ ಆಯ್ಕೆ ನಡೆಯಲಿದೆ. ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಯಾವುದೇ ಜಾತಿ, ಮತ ಬೇಧವಿಲ್ಲದೆ ವಿದ್ಯಾರ್ಥಿಗಳಿಗೆ ನೆರವಾಗಲಿ ದ್ದೇವೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶುಲ್ಕ ಭರಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಕ್ಷಣ ಶುಲ್ಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ದತ್ತು ಸ್ವೀಕಾರದ ಸದುಪಯೋಗ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಜೂ.೩೦ರ ಒಳಗೆ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ನಮ್ಮ ವಿಳಾಸಕ್ಕೆ ಕಳುಹಿಸಿಕೊಡಬೇಕು. ಬಂದ ಅರ್ಜಿಗಳಲ್ಲಿ ಆಯ್ಕೆ ಮಾಡಿ ಬಡ ಮಕ್ಕಳಿಗೆ ನೆರವು ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಅರ್ಜಿ ಕಳುಹಿಸಬೇಕಾದ ವಿಳಾಸ: ಪ್ರತಿಭಾ ಕುಳಾಯಿ, ಕುಳಾಯಿ ಫೌಂಡೇಶನ್, ವಿ.ಟಿ.ರೋಡ್, ಕುಳಾಯಿ- ೫೭೫೦೧೯