Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು; ಭಯೋತ್ಪಾದನಾ ನಿಗ್ರಹ ತಂಡದಿಂದ...

ಮಂಗಳೂರು; ಭಯೋತ್ಪಾದನಾ ನಿಗ್ರಹ ತಂಡದಿಂದ ಅಣುಕು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ16 Jun 2022 4:02 PM IST
share
ಮಂಗಳೂರು; ಭಯೋತ್ಪಾದನಾ ನಿಗ್ರಹ ತಂಡದಿಂದ ಅಣುಕು ಪ್ರದರ್ಶನ

ಮಂಗಳೂರು: ನಗರ ಸೇರಿದಂತೆ  ಪೊಲೀಸ್ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಆಂತರಿಕ ಭದ್ರತಾ ವಿಭಾಗದಡಿ (ಐಎಸ್‌ಡಿ) ನಗರ ಭಯೋತ್ಪಾದನಾ ನಿಗ್ರಹ ತಂಡ ರಚನೆಯ ನಿರ್ದೇಶನದಂತೆ ತರಬೇತಿ ಮುಗಿಸಿ ಆಗಮಿಸಿರುವ ಮಂಗಳೂರಿನ ತಂಡದಿಂದ ಕಾರ್ಯಾಚರಣೆಯ ಕುರಿತ ಅಣುಕು ಪ್ರದರ್ಶನ ಇಂದು ನಡೆಯಿತು.

ನಗರದ ಪೊಲೀಸ್ ಮೈದಾನದಲ್ಲಿ ನಡೆದ ಅಣುಕು ಪ್ರದರ್ಶನದಲ್ಲಿ ಭಯೋತ್ಪಾದಕ ದಾಳಿ ಸಂದರ್ಭ ಈ ಕಮಾಂಡೊ ಪಡೆ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂಬ ಬಗ್ಗೆ ತಿಳಿಸಲಾಯಿತು.

ಪೊಲೀಸಿಂಗ್ ಎಂದರೆ ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳನ್ನು ಪತ್ತೆ ಹಚ್ಚುವುದು ಮಾತ್ರವಲ್ಲ, ಆತಂಕವಾದ, ಕರಾವಳಿ ತೀರದಲ್ಲಿ ಯಾವುದೇ ರೀತಿಯಲ್ಲಿ ರಾಷ್ಟ್ರೀಯ ಭದ್ರತೆಗೆ ಅಪಾಯ, ಒತ್ತೆಯಾಳಾಗಿಸುವುದು ಮೊದಲಾದ ಕ್ಲಿಷ್ಟಕರ ಸಂದರ್ಭದಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ  ನಗರ ಸ್ವಾಟ್ (ನಗರ ಸ್ಪೆಷಲ್ ವೆಪನ್ ಆ್ಯಂಡ್ ಟ್ಯಾಕ್ಟಿಕ್ಟ್) ತಂಡ ತರಬೇತಿ ಪಡೆದು ಕಾರ್ಯಾಚರಣೆಗೆ ಸಿದ್ಧಗೊಂಡಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಆಗದಂತೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳಿಗೆ ಪೊಲೀಸ್ ಇಲಾಖೆ ಈಗಾಗಲೇ ಸಕಲ ರೀತಿಯಲ್ಲೂ ಸಮರ್ಥವಾಗಿದೆ. ಇದಕ್ಕೆ ಪೂರಕವಾಗಿ ಸಂಭಾವ್ಯ ಯಾವುದೇ ರೀತಿಯ ದುಷ್ಕೃತ್ಯಗಳನ್ನು  ಎದುರಿಸಲು ಪೊಲೀಸ್ ಇಲಾಖೆಗೆ ಈ ತಂಡ ಬಲ ತುಂಬಿದೆ ಎಂದು ಅವರು ಹೇಳಿದರು.

ಮಂಗಳೂರು ನಗರ ಪೊಲೀಸ್ ಸಶಸ್ತ್ರ ಮೀಸಲು ಪಡೆ (ಸಿಎಆರ್) ವರುಣ್ ಎಂಬ ನೀರಿನ ವಾಹನ ಸೇರ್ಪಡೆ ಯಾಗಿದೆ. ಇದು ಭಾರೀ ಪ್ರಮಾಣದ ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಕಾನೂನು ಸುವ್ಯವಸ್ಥೆಯ ಸಂದರ್ಭದಲ್ಲಿ ಉದ್ರಿಕ್ತ ಜನಸಮೂಹಕ್ಕೆ ನೀರನ್ನು ಚಿಮುಕಿಸಿ ಸಮೂಹವನ್ನು ಚದುರಿಸುವಲ್ಲಿ ಈ ವಾಹನ ಕಾರ್ಯ ನಿರ್ವಹಿಸಲಿದೆ.

ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್, ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಚೆನ್ನವೀರಪ್ಪ ಹಡಪದ್  ಮೊದಲಾದವರು ಉಪಸ್ಥಿತರಿದ್ದರು.

‘‘ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ದಡಿ ಮಂಗಳೂರು ಈ ನಗರ ಭಯೋತ್ಪಾದನಾ ನಿಗ್ರಹ ತಂಡ ಕಾರ್ಯ ನಿರ್ವಹಿಸಲಿದೆ. ಅಧಿಕಾರಿ ಸಿಬ್ಬಂದಿ ಸೇರಿ 30 ಮಂದಿಯ ತಂಡ ಇದಾಗಿದ್ದು, ಎರಡು ತಿಂಗಳ ಕಾಲ ಸಶಸ್ತ್ರ ತರಬೇತಿ, ದೈಹಿಕ ಹಾಗೂ ಮಾನಸಿಕ ತರಬೇತಿಯನ್ನು ಬೆಂಗಳೂರಿನಲ್ಲಿ ಈ ತಂಡಕ್ಕೆ ಒದಗಿಸಲಾಗಿದೆ. ಮಾತ್ರವಲ್ಲದೆ ಕಾಡು, ನಗರ ಪ್ರದೇಶಗಳಲ್ಲಿ ಕಾರ್ಯಾಚರಣೆ ಸೇರಿದಂತೆ ತುರ್ತು ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತರಬೇತಿಯನ್ನು ಈ ತಂಡಕ್ಕೆ ನೀಡಲಾಗಿದೆ. ಎಲ್ಲಾ ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ತಂಡವನ್ನು ನಿಯೋಜಿಸಲಾಗಿದೆ’’
-ಎನ್. ಶಶಿಕುಮಾರ್, ಪೊಲೀಸ್ ಆಯುಕ್ತರು, ಮಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X