Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಲ್ಲವ ಸಮುದಾಯದ ಮುಖಂಡರ ಆಕ್ರೋಶ:...

ಬಿಲ್ಲವ ಸಮುದಾಯದ ಮುಖಂಡರ ಆಕ್ರೋಶ: ಹೋರಾಟದ ಎಚ್ಚರಿಕೆ

ಬ್ರಹ್ಮಶ್ರೀ ನಾರಾಯಣ ಗುರು ಪಠ್ಯ ವಿವಾದ

ವಾರ್ತಾಭಾರತಿವಾರ್ತಾಭಾರತಿ16 Jun 2022 6:41 PM IST
share
ಬಿಲ್ಲವ ಸಮುದಾಯದ ಮುಖಂಡರ ಆಕ್ರೋಶ: ಹೋರಾಟದ ಎಚ್ಚರಿಕೆ

ಮಂಗಳೂರು: ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಂದುವರಿದಿರುವಂತೆಯೇ, ೧೦ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಸಂಪೂರ್ಣವಾಗಿ ತೆಗೆದು ಹಾಕಲಾಗಿರು ವುದು ಹಾಗೂ  ಪರಿಷ್ಕೃತ ಕನ್ನಡ ಪಠ್ಯದಲ್ಲಿ ಕನ್ನಡ ಮಾಧ್ಯಮಕ್ಕೆ ಮಾತ್ರವೇ ವಿಷಯವನ್ನು ಸೀಮಿತಗೊಳಿಸಿರು ವುದು ಬಿಲ್ಲವ ಸಮುದಾಯದ ನಾಯಕರನ್ನು ಆಕ್ರೋಶಕ್ಕೀಡು ಮಾಡಿದೆ.

ಬಿಲ್ಲವ ಸಮಾಜದ ವಿವಿಧ ಸಂಘಟನೆಗಳು, ಮುಖಂಡರು ಕಂಕನಾಡಿಯ ಗರೋಡಿ ಕ್ಷೇತ್ರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾರಾಯಣ ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಮೇಲ್ವರ್ಗವನ್ನು ಖುಷಿ ಪಡಿಸುವ ಭರದಲ್ಲಿ ಹಿಂದುಳಿದ ವರ್ಗವನ್ನು ತುಳಿಯುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು.

ಯಾವ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಇಂದು ಹಿಂದೂ ಸಮಾಜ, ಹಿಂದುತ್ವ ಸಮಾಜದಲ್ಲಿ ಉಳಿಯಲು ಕಾರಣವಾಗಿದೆಯೋ ಅವರನ್ನು ಕಡೆಗಣಿಸುವ ಕಾರ್ಯ ನಡೆಯುತ್ತಿದೆ. ಒಂದು ತಿಂಗಳ ಹಿಂದೆ ನಾರಾಯಣಗುರು ಪಠ್ಯವನ್ನು ೧೦ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿರುವ ಬಗ್ಗೆ ಸಮುದಾಯದ ನಾಯಕರು ಧ್ವನಿ ಎತ್ತಿದ್ದರು. ಇದೇ ವೇಳೆ ಪೆರಿಯಾರ್, ಬಸವಣ್ಣ, ಕುವೆಂಪು, ಡಾ. ಅಂಬೇಡ್ಕರ್, ಭಗತ್ ಸಿಂಗ್ ವಿಚಾರಗಳು ಮುನ್ನೆಲೆಗೆ ಬಂತು. ಈ ಸಂದರ್ಭ ಶಿಕ್ಷಣ ಸಚಿವರಾದಿಯಾಗಿ ಜನಪ್ರತಿನಿಧಿಗಳು ರಾಜಕೀಯ ಪ್ರೇರಿತವಾಗಿ ಹೋರಾಟ, ವಿರೋಧ ವ್ಯಕ್ತವಾಗುತ್ತಿದೆ. ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಹೇಳಿಕೆ ನೀಡಿದರು. ಸರಕಾರದ ಮಾತನ್ನು ನಂಬಿದೆವು. ಆದರೆ ಇದೀಗ ಕೇವಲ ಕನ್ನಡ ಮಾಧ್ಯಮದ ಮಕ್ಕಳಿಗೆ ಮಾತ್ರ ಸೀಮಿತವಾಗುವಂತೆ ೧೦ನೆ ತರಗತಿಯ ಕನ್ನಡ ಪಠ್ಯದಲ್ಲಿ ನಾರಾಯಣ ಗುರುಗಳ ವಿಚಾರ ಸೇರಿಸಲಾಗಿದೆ. ಶೇ. ೬೦ಕ್ಕೂ ಅಧಿಕ ಸಂಖ್ಯೆಯಲ್ಲಿರುವ ಆಂಗ್ಲ ಮಾಧ್ಯಮದ ಮಕ್ಕಳಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ, ತತ್ವ ಓದುವ ಅವಕಾಶವನ್ನು ವಂಚಿಸಲಾಗಿದೆ. ಇದು ನಾರಾಯಣ ಗುರುಗಳಿಗೆ, ಸಮುದಾಯಕ್ಕೆ ಸರಕಾರ ಮಾಡುತ್ತಿರುವ ಅನ್ಯಾಯ ಎಂದವರು ಹೇಳಿದರು.

ಶಿಕ್ಷಣ ಸಚಿವರು ಸೇರಿದಂತೆ ಜನಪ್ರತಿನಿಧಿಗಳು ೭ನೆ ತರಗತಿ ಪಠ್ಯದಲ್ಲಿ ನಾರಾಯಣ ಗುರುಗಳ ವಿಚಾರ ಇದೆ ಎಂದು ಹೇಳುತ್ತಿದ್ದಾರೆ. ಅದು ಹಿಂದೆಯೂ ಇತ್ತು. ಅದರ ಬಗ್ಗೆ ನಮಗೆ ಯಾವುದೇ ಆಕ್ಷೇಪ ಇಲ್ಲ. ಆದರೆ ೧೦ನೆ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ವಿಷಯವನ್ನು ಕೈಬಿಟ್ಟು ಕೇವಲ ಕನ್ನಡ ಮಾಧ್ಯಮಕ್ಕೆ ಮಾತ್ರ ಪೂರಕವಾಗಿ ಕನ್ನಡ ಪಠ್ಯದಲ್ಲಿ ಯಾಕೆ ತರಾತುರಿಯಲ್ಲಿ ಸೇರ್ಪಡೆ ಮಾಡಿರುವುದು. ಸಮುದಾಯವನ್ನು ಬಾಯಿ ಮುಚ್ಚಿಸುವ ತಂತ್ರವೇ? ಸಮಾಜದಲ್ಲಿ ಮತೀಯ ಸಂಘರ್ಷ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಬ್ರಹ್ಮಶ್ರೀ ನಾರಾಯಣಗಳ ತತ್ವ ಆದರ್ಶಗಳ ಸಂದೇಶ ಅನಿವಾರ್ಯವಾಗಿದೆ. ಆದರೆ ಸರಕಾರ ಹಿಂದಿನ ಕಾಲದಲ್ಲಿ ಇದ್ದಂತೆ ಮೇಲ್ವರ್ಗ ದವರಿಂದ ಕೆಳವರ್ಗದವರ ದೌರ್ಜನ್ಯ ಪದ್ಧತಿ ಜೀವಂತವಾಗಿಸಲು ಪ್ರಯತ್ನ ಮಾಡುತ್ತಿರುವುದು ಏಕೆ? ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಪ್ರಶ್ನಿಸಿದರು.

ಗೋಷ್ಠಿಯಲ್ಲಿ ಗರೋಡಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಚಿತ್ತರಂಜನ್ ಗರೋಡಿ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್, ಮುಖಂಡರಾದ ಶೈಲೇಂದ್ರ, ಮಹಾಬಲ ಪೂಜಾರಿ, ದಿನೇಶ್ ಅಂಚನ್, ರಾಜೇಂದ್ರ ಚಿಲಿಂಬಿ ಮೊದಲಾದವರು ಉಪಸ್ಥಿತರಿದ್ದರು.

ರಾಜಕೀಯ ಎಂದವರು ದಾಖಲೆ ಸಹಿತ ಮಾತನಾಡಿ!

"೧೦ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯ ಕೈಬಿಡಲಾಗಿದೆ ಎಂದು ಆರಂಭದಲ್ಲಿ ಧ್ವನಿ ಎತ್ತಿದಾಗ ರಾಜಕೀಯ ಮಾಡಲಾಗುತ್ತಿದೆ. ಪಠ್ಯವನ್ನು ಕೈಬಿಟ್ಟಿಲ್ಲ. ಪಠ್ಯ ಬಂದಮೇಲೆ ನೋಡಿ, ನೋಡದೆಯೇ ಏಕೆ ಮಾತನಾಡುತ್ತೀರಿ ಎಂದು ಜವಾಬ್ದಾರಿಯುತ  ಸ್ಥಾನದಲ್ಲಿರುವ ಇಲ್ಲಿನ ಬಿಲ್ಲವ ಜನಪ್ರತಿನಿಧಿಗಳಿಂದ ಆದಿಯಾಗಿ ಶಿಕ್ಷಣ ಸಚಿವರೂ ಹೇಳಿಕೆ ನೀಡಿದ್ದರು. ಈಗ ಸಮಾಜ ವಿಜ್ಞಾನ ಪಠ್ಯದಲ್ಲಿ ನಾರಾಯಣಗುರುಗಳ ವಿಚಾರ ಎಲ್ಲಿದೆ ತೋರಿಸಿ, ದಾಖಲೆಯೊಂದಿಗೆ ಮಾತನಾಡಿ. ಶೇ. ೨೫ರಷ್ಟಿರುವ ಕನ್ನಡ ಮಾಧ್ಯಮ ಮಕ್ಕಳಿಗೆ ಮಾತ್ರ ಲಭ್ಯವಾಗುವಂತೆ ಕನ್ನಡ ಪಠ್ಯದಲ್ಲಿ ಸೇರಿಸಿ ಗೊಂದಲ ಸೃಷ್ಟಿಸುವ ಪ್ರಯತ್ನವನ್ನು ಸರಕಾರ ಮಾಡುತ್ತಿದೆ.  ಬಿಲ್ಲವ ಸಮುದಾಯವನ್ನು ರಾಜಕೀಯವಾಗಿ ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದೆ".
- ಪದ್ಮರಾಜ್, ಕೋಶಾಧಿಕಾರಿ,ಕುದ್ರೋಳಿ ಗೋಕರ್ಣನಾಥ ಕ್ಷೇತ್ರ.

"ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ ನಾಮಕರಣ ಮಾಡುವುದು, ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರ ಕೈಬಿಡುವುದು, ಸೇರಿದಂತೆ ನಾನಾ ರೀತಿಯಲ್ಲಿ ಸಮುದಾಯಕ್ಕೆ ಅನ್ಯಾಯ ಆದಾಗ ಧ್ವನಿ ಎತ್ತಿದರೆ ಅದನ್ನು ರಾಜಕೀಯ ಪಿತೂರಿ ಎಂದು ಹೇಳಿ ಸಮುದಾಯವನ್ನು ಬಾಯಿ ಮುಚ್ಚಿಸುವ ಪ್ರಯತ್ನ ನಡೆದಿದೆ. ಆದರೆ ಈ ವಿಚಾರವನ್ನು ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ನೈಜ  ಅಂಶವನ್ನು ಸಮಾಜದ ಎದುರು ಇಡಲಾಗುತ್ತಿದೆ. ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮಾಜ ವಿಜ್ಞಾನ ಪಠ್ಯದಲ್ಲಿಯೇ ನಾರಾಯಣಗುರುಗಳ ವಿಚಾರವನ್ನು ಅಳವಡಿಸಬೇಕು. ಕೇವಲ ಕನ್ನಡ ಪಠ್ಯಕ್ಕೆ ಸೀಮಿತಗೊಳಿ ಸುವುದು ಬೇಡ ಎಂದು ಈಗಾಗಲೇ ವಿರೋಧ ವ್ಯಕ್ತಪಡಿಸಲಾಗಿದೆ.  ಪಠ್ಯ ಪುಸ್ತಕ ಮುದ್ರಣವಾಗಿದ್ದರೆ, ಮರು ಮುದ್ರಣ ಮಾಡಿ ಸೇರಿಸಬೇಕು. ಇಲ್ಲವಾದಲ್ಲಿ ಮೂಲ ಪುಸ್ತಕದ ಜತೆ ಪೂರಕ ಪಠ್ಯವಾಗಿ ಕೆಲವು ಪುಟಗಳನ್ನು ಮುದ್ರಿಸಿ ಮಕ್ಕಳಿಗೆ ಒದಗಿಸಲು ಅವಕಾಶ ಇದೆ. ಅದನ್ನು ಮಾಡಬೇಕು. ಇಲ್ಲದಿದ್ದರೆ ಗುರುಗಳ ಸಮಾಜದ 26 ಪಂಗಡಗಳನ್ನು ಸೇರಿಸಿಕೊಂಡು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು".
-ಸತ್ಯಜಿತ್ ಸುರತ್ಕಲ್, ರಾಜ್ಯ ಅಧ್ಯಕ್ಷರು, ನಾರಾಯಣ ಗುರು ವಿಚಾರ ವೇದಿಕೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X