ಜೂ.17: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಈ.ಡಿ. ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕಳದ ವಿರುದ್ಧ ಜೂ.೧೭ರಂದು ದ.ಕ.ಜಿಲ್ಲಾ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಪ್ರಕಟನೆ ತಿಳಿಸಿದೆ.
ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡುವುದನ್ನು ಹತ್ತಿಕ್ಕುವ ಸಲುವಾಗಿ ಕಾಂಗ್ರೆಸ್ ಸಂಸದರು ಮತ್ತು ಎಐಸಿಸಿ ನಾಯಕರನ್ನು ಎಐಸಿಸಿ ಕಚೇರಿ ಆವರಣದಲ್ಲಿಯೇ ಬಂಧಿಸಲಾಗುತ್ತದೆ. ರಾಜಕೀಯ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಮತ್ತು ಪೊಲೀಸರ ನಡೆಯನ್ನು ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂ.೧೭ರಂದು ಬೆಖಳಗ್ಗೆ ೧೦ಕ್ಕೆ ನಗರದ ಫಳ್ನೀರ್ ಎಸ್.ಎಲ್ ಮಥಾಯಿಸ್ ಪಾರ್ಕ್‌ನಿಂದ ಅತ್ತಾವರದ ಐ.ಟಿ. ಕಚೇರಿ ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story