ಶಿಯೋಮಿ ಬ್ಯಾಂಕ್ ಖಾತೆ ನಿರ್ಬಂಧಿಸಿ ಆದೇಶ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಜೂ.16: ವಿದೇಶಿ ವಿನಿಮಯ ಕಾನೂನುಗಳ ಉಲ್ಲಂಘನೆ ಆರೋಪದ ಮೇಲೆ ಚೀನಾದ ಶಿಯೋಮಿ ಕಾರ್ಪೋರೇಷನ್‍ನ ಸ್ಥಳೀಯ ಬ್ಯಾಂಕ್ ಖಾತೆಗಳಿಂದ ಬರೋಬ್ಬರಿ 5,551 ಕೋಟಿ ರೂ. ಹಣ ವಶಕ್ಕೆ ಪಡೆಯಲು ಜಾರಿ ನಿರ್ದೇಶನಾಲಯ(ಈಡಿ) ಮಾಡಿದ್ದ ಆದೇಶವನ್ನು ಕಂಪೆನಿಯು ಪ್ರಶ್ನಿಸಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಈ.ಡಿ ಆದೇಶ ಪ್ರಶ್ನಿಸಿ ಶಿಯೋಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ತೀರ್ಪು ಕಾಯ್ದಿರಿಸಿದೆ.
ಶಿಯೋಮಿ ಕಂಪೆನಿಯು ರಾಯಧನದ ಸೋಗಿನಲ್ಲಿ ಒಂದು ಶಿಯೋಮಿ ಗ್ರೂಪ್ ಘಟಕ ಸೇರಿದಂತೆ ಮೂರು ವಿದೇಶಿ ಮೂಲದ ಸಂಸ್ಥೆಗಳಿಗೆ ಹಣವನ್ನು ಅಕ್ರಮವಾಗಿ ರವಾನೆ ಮಾಡಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಶಿಯೋಮಿ ಬ್ಯಾಂಕ್ ಖಾತೆಗಳಿಂದ ಹಣ ವಶಕ್ಕೆ ಪಡೆಯಲು ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಶಓಮಿ ಕಂಪೆನಿ ಹೈಕೋರ್ಟ್ ಮೆಟ್ಟಿಲೇರಿತ್ತು.
Next Story





