ದ.ಕ.ಜಿಲ್ಲೆ: ಸಿಇಟಿ ಪರೀಕ್ಷೆಗೆ 4,098 ವಿದ್ಯಾರ್ಥಿಗಳು ಗೈರು

ಮಂಗಳೂರು: ಇಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಗುರುವಾರ ದ.ಕ.ಜಿಲ್ಲೆಯ 24 ಕೇಂದ್ರಗಳಲ್ಲಿ ನಡೆದ ಸಿಇಟಿ ಪರೀಕ್ಷೆಗೆ ಒಟ್ಟು 4,098 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಬೆಳಗ್ಗೆ ಜೀವಶಾಸ್ತ್ರ ಮತ್ತು ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆಗಳು ನಡೆಯಿತು. ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ ಒಟ್ಟು 12,179 ವಿದ್ಯಾರ್ಥಿಗಳ ಪೈಕಿ 8882 ಜೀವಶಾಸ್ತ್ರ ಪರೀಕ್ಷೆ ಬರೆದಿದ್ದು, 3297 ಮಂದಿ ಗೈರಾಗಿದ್ದಾರೆ. 11,378 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದು, 801 ಮಂದಿ ಗೈರಾಗಿದ್ದಾರೆ.
ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನದ ಬಳಿಕ ರಸಾಯನ ಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ಜೀವಶಾಸ್ತ್ರ ಪರೀಕ್ಷೆಗೆ ಗೈರು ಅಧಿಕವಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪ.ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ‘ನೀಟ್ ಪರೀಕ್ಷೆ ಆರಂಭವಾದ ನಂತರ ಸಿಇಟಿ ಜೀವಶಾಸ್ತ್ರ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಗೈರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ ಎಂದಿದ್ದಾರೆ.
Next Story





