Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ...

ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ತಹಶೀಲ್ದಾರರು?

ಕಂದಾಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಸುತ್ತೋಲೆ

ಜಿ.ಮಹಾಂತೇಶ್ಜಿ.ಮಹಾಂತೇಶ್17 Jun 2022 8:13 AM IST
share
ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ತಹಶೀಲ್ದಾರರು?

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವರ್ಷಗಳಿಂದಲೂ ಸಾರ್ವಜನಿಕ ಆಡಳಿತವು ಕುಸಿತವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ಗಳು ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಕಸದಬುಟ್ಟಿಗೆ ಎಸೆದು ಮರು ಆದೇಶವನ್ನು ಪಡೆಯದೆಯೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿರುವ ಹಲವು ಪ್ರಕರಣಗಳು ಬಹಿರಂಗವಾಗಿವೆ.

 ತಾಲೂಕುಗಳಿಂದ ವರ್ಗಾವಣೆಗೊಳ್ಳುವ ತಹಶೀಲ್ದಾರ್‌ಗಳು ಸರಕಾರದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಮೊರೆ ಹೊಕ್ಕು ತಡೆಯಾಜ್ಞೆ ತರುತ್ತಿದ್ದಾರೆ. ಆದರೆ, ಈ ತಡೆಯಾಜ್ಞೆಗಳನ್ನು ಸರಕಾರಕ್ಕೆ ಸಲ್ಲಿಸುತ್ತಿಲ್ಲ ಮತ್ತು ಈ ಸಂಬಂಧ ಮನವಿಯನ್ನೂ ಸಲ್ಲಿಸುತ್ತಿಲ್ಲ. ತಹಶೀಲ್ದಾರ್‌ಗಳು ಸಹ ಸರಕಾರವನ್ನು ಲೆಕ್ಕಿಸುತ್ತಿಲ್ಲ ಎಂಬುದು ಕಂದಾಯ ಇಲಾಖೆಯು ೨೦೨೨ರ ಜೂನ್ ೧೩ರಂದು ಎಲ್ಲ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಹೊರಡಿಸಿರುವ ಸುತ್ತೋಲೆಯು ಪುಷ್ಠೀಕರಿಸಿದೆ. ಈ ಸುತ್ತೋಲೆ ಪ್ರತಿಯು ''the-file.in''ಗೆ ಲಭ್ಯವಾಗಿದೆ.

‘ಕಂದಾಯ ಇಲಾಖೆಯ ತಹಶೀಲ್ದಾರ್‌ಗಳು ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಸರಕಾರದ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸುತ್ತಾರೆ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯವು ಸರಕಾರದಿಂದ ಹೊರಡಿಸಿದ ಆದೇಶಕ್ಕೆ ತಡೆಯಾಜ್ಞೆಯನ್ನು ನೀಡಿದ ನಂತರ ಬಹುತೇಕ ತಹಶೀಲ್ದಾರ್‌ಗಳು ಸರಕಾರದಲ್ಲಿ ಮನವಿ ಸಲ್ಲಿಸಿ ಮರು ಆದೇಶವನ್ನು ಪಡೆಯದೇ ನೇರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಥವಾ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲಿನ ತಹಶೀಲ್ದಾರ್ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿರುವುದು ಸರಕಾರದ ಗಮನಕ್ಕೆ ಬಂದಿರುತ್ತದೆ’ ಎಂದು ಸುತ್ತೋಲೆಯಲ್ಲಿ ಹೇಳಿದೆ.

 ಅಧಿಕಾರ ವಹಿಸಿಕೊಂಡ ಅತ್ಯಲ್ಪ ದಿನಗಳು ಮತ್ತು  ಹಲವು ವರ್ಷಗಳಿಂದಲೂ ಒಂದೇ ಕಡೆ ಬೇರು ಬಿಟ್ಟಿರುವ ತಹಶೀಲ್ದಾರ್‌ಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡುತ್ತಿದೆ.  ಈ ಆದೇಶಗಳನ್ನು  ಪ್ರಶ್ನಿಸಿ ಹಲವು ತಹಶೀಲ್ದಾರ್‌ಗಳು ಕೆಎಟಿ ಮೊರೆ ಹೋಗುತ್ತಿದ್ದಾರೆ. ಈ ಜಾಗಕ್ಕೆ ಬೇರೆ ಯಾರೂ ಕರ್ತವ್ಯ ವಹಿಸಿಕೊಳ್ಳದಂತೆ ಪ್ರಭಾವಿ ತಹಶೀಲ್ದಾರ್‌ಗಳು ಖಾಲಿ ಇರುವಂತೆಯೇ ನೋಡಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಹೀಗಾಗಿ ತಾಲೂಕುಗಳ ಆಡಳಿತವು ಕುಸಿದು ಬಿದ್ದಿದೆ.

 ಕೆಎಟಿಯಲ್ಲಿ ತಡೆಯಾಜ್ಞೆ ಪಡೆದುಕೊಳ್ಳುವ ತಹಶೀಲ್ದಾರ್‌ಗಳು ನಿಯಮಗಳ ಪ್ರಕಾರ ಸರಕಾರಕ್ಕೆ ನ್ಯಾಯಾಲಯದ ದೃಢೀಕೃತ ಆದೇಶದ ಪ್ರತಿಯೊಂದಿಗೆ ಕೋರಿಕೆ ಸಲ್ಲಿಸಬೇಕು. ಅಲ್ಲದೆ ಈ ಸಂಬಂಧ ಸರಕಾರದಿಂದ ಮರು ಆದೇಶ ಪಡೆಯಬೇಕು. ಇದಾದ ನಂತರ ಮರು ಆದೇಶವನ್ನು ಪಡೆದ ನಂತರವಷ್ಟೇ ಕರ್ತವ್ಯ ವಹಿಸಿಕೊಳ್ಳಬೇಕು. ಆದರೆ ರಾಜ್ಯದ ಹಲವು ತಾಲೂಕುಗಳಲ್ಲಿನ ತಹಶೀಲ್ದಾರ್‌ಗಳು ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪಗಳಿವೆ.

‘ಕಂದಾಯ ಇಲಾಖೆಯ ತಹಶೀಲ್ದಾರ್‌ಗಳು ವರ್ಗಾವಣೆಗಳಿಗೆ ಸಂಬಂಧಿಸಿದಂತೆ  ಸರಕಾರದಿಂದ ಹೊರಡಿಸಲಾದ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದ ನಂತರ ಹಾಗೂ ನ್ಯಾಯಾಲಯವು ಸರಕಾರದಿಂದ ಹೊರಡಿಸಿದ ಆದೇಶವನ್ನು ಪ್ರಶ್ನಿಸಿದ ತಹಶೀಲ್ದಾರ್‌ಗಳು ಇನ್ನು ಮುಂದೆ ನ್ಯಾಯಾಲಯದ ಆದೇಶದ ದೃಢೀಕೃತ ಪ್ರತಿಯೊಂದಿಗೆ ಮನವಿಯನ್ನು ಕಡ್ಡಾಯವಾಗಿ ಸರಕಾರಕ್ಕೆ ಸಲ್ಲಿಸಬೇಕು,’ ಎಂದು ಹೊರಡಿಸಿರುವ ಸುತ್ತೋಲೆಯು ತಹಶೀಲ್ದಾರ್‌ಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪಗಳನ್ನು ಬಲಪಡಿಸಿವೆ.

‘ಸರಕಾರದಿಂದ ಮರು ಆದೇಶವನ್ನು ಪಡೆದ ನಂತರವಷ್ಟೇ ಹಿಂದೆ ಕರ್ತವ್ಯ ನಿರ್ವಹಿಸಿದ ತಾಲೂಕು ಕಚೇರಿಯಲ್ಲಿನ ತಹಶೀಲ್ದಾರ್ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು.  ಅಲ್ಲದೇ ಸರಕಾರದಿಂದ ಮರು ಆದೇಶವನ್ನು ಪಡೆಯದೇ ಕರ್ತವ್ಯ ವರದಿ ಮಾಡಿಕೊಳ್ಳಲು ಬರುವ ತಹಶೀಲ್ದಾರ್‌ಗಳನ್ನು ಜಿಲ್ಲಾಧಿಕಾರಿಗಳು ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳತಕ್ಕದ್ದಲ್ಲ. ಒಂದು ವೇಳೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಲ್ಲಿ ಅಂತಹ ತಹಶೀಲ್ದಾರ್‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿಯಮಾನುಸಾರ ಪರಿಶೀಲಿಸಲಾಗುವುದು,’  ಎಂದು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು  ನಿರ್ದೇಶಿಸಿರುವುದು ಸುತ್ತೋಲೆಯಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಈಗಾಗಲೇ ಮುಂಗಾರು ಪೂರ್ವ ಅವಧಿಯಲ್ಲಿ ಬೆಳೆ ನಾಶವಾಗಿದೆ. ತಾಲೂಕುಗಳ ರೈತಾಪಿ ಸಮುದಾಯ ಸೇರಿದಂತೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತೆಯ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗುತ್ತಿಲ್ಲ. ಇದರಿಂದ ತಾಲೂಕಿನಾದ್ಯಂತ ಇರುವ ಫಲಾನುಭವಿಗಳಿಗೆ ಸರಕಾರದ ಯೋಜನೆಗಳ ಅನುಕೂಲವಾಗುತ್ತಿಲ್ಲ.

‘ಆಡಳಿತವನ್ನು ಸರಿದಾರಿಗೆ ತರಲು ಕಠಿಣ ಕ್ರಮ ಕೈಗೊಂಡಿಲ್ಲ’

‘ವರ್ಗಾವಣೆ ಪ್ರಕ್ರಿಯೆಯಲ್ಲಿನ ದೋಷಗಳು ಮತ್ತು ನ್ಯಾಯಾಲಯಗಳು ಹೊರಡಿಸುತ್ತಿರುವ ತಡೆಯಾಜ್ಞೆ ಆದೇಶಗಳು, ಪ್ರಭಾವಿ ತಹಶೀಲ್ದಾರ್‌ಗಳು ವರ್ಗಾವಣೆಗೊಂಡು ಬರುವ ತಹಶೀಲ್ದಾರ್‌ಗಳಿಗೆ ಕರ್ತವ್ಯ ವಹಿಸಿಕೊಡದೇ ಇರುವುದು, ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದರೂ ಅದನ್ನು ನಿಯಮಾನುಸಾರವಾಗಿ ಸರಕಾರಕ್ಕೆ ಸಲ್ಲಿಸದಿರುವುದು,  ಮರು ಆದೇಶವನ್ನು ಪಡೆಯದೇ ನೇರವಾಗಿ ಕರ್ತವ್ಯ ವಹಿಸಿಕೊಳ್ಳುತ್ತಿರುವ ಪ್ರಕರಣಗಳು ಸಾಲು ಸಾಲಾಗಿ ಹೊರಬೀಳುತ್ತಲೇ ಇದೆ. ಆದರೆ ಕಂದಾಯ ಸಚಿವ ಆರ್.ಅಶೋಕ್ ಅವರು ಇದುವರೆಗೂ ಕುಸಿದು ಬಿದ್ದಿರುವ ಆಡಳಿತವನ್ನು ಸರಿದಾರಿಗೆ ತರಲು ಯಾವುದೇ ಕಠಿಣ ಕ್ರಮಕೈಗೊಂಡಿಲ್ಲ,’  ಎನ್ನುತ್ತಾರೆ ಅಧಿಕಾರಿಯೊಬ್ಬರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X