ಎಸಿಬಿ ದಾಳಿ | ಉಡುಪಿಯ ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಮನೆಯಲ್ಲಿ ಅಪಾರ ಚಿನ್ನಾಭರಣ ಪತ್ತೆ!

ಉಡುಪಿ, ಜೂ.17: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು, ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರೀ ಪ್ರಮಾಣದ ಚಿನ್ನಾಭರಣಗಳ ಜೊತೆಗೆ ನಗದು ಕೂಡ ಪತ್ತೆಯಾಗಿದೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ತಂಡಕ್ಕೆ ಪರಿಶೀಲನೆಯ ವೇಳೆ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಸಿಕ್ಕಿವೆ. ಇಂದು ಇಡೀ ದಿನ ತಪಾಸಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Next Story