Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರ ಪ್ರತಿಭಟನೆಯ ನಡುವೆಯೂ 'ಅಗ್ನಿಪಥ್’...

ತೀವ್ರ ಪ್ರತಿಭಟನೆಯ ನಡುವೆಯೂ 'ಅಗ್ನಿಪಥ್’ ಮುಂದಿನ ವಾರ ಆರಂಭವಾಗಲಿದೆ ಎಂದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ17 Jun 2022 2:07 PM IST
share
ತೀವ್ರ ಪ್ರತಿಭಟನೆಯ ನಡುವೆಯೂ ಅಗ್ನಿಪಥ್’ ಮುಂದಿನ ವಾರ ಆರಂಭವಾಗಲಿದೆ ಎಂದ ಕೇಂದ್ರ ಸರಕಾರ

 ಹೊಸದಿಲ್ಲಿ,ಜೂ.17: ಕೇಂದ್ರ ಸರಕಾರದ ಹೊಸ ಸೇನಾ ನೇಮಕಾತಿ ನೀತಿ ಅಗ್ನಿಪಥ್ ವಿರುದ್ಧದ ಸೇನಾಕಾಂಕ್ಷಿಗಳ ಪ್ರತಿಭಟನೆ ಮೂರನೆಯ ದಿನವಾದ ಶುಕ್ರವಾರ ಮುಂದುವರಿದಿದ್ದು, ಬಿಹಾರ, ಉತ್ತರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧೆಡೆ ವ್ಯಾಪಕ ಹಿಂಸಾಚಾರದ ಪ್ರಕರಣಗಳು ವರದಿಯಾಗಿವೆ. ಬಿಹಾರದಲ್ಲಿ ಉದ್ರಿಕ್ತ ಪ್ರತಿಭಟನಕಾರು ಉಪಮುಖ್ಯಮಂತ್ರಿ ರೇಣು ದೇವಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಡಾ.ಸಂಜಯ್ ಜೈವ್ವಾಲ್ ಅವರ ನಿವಾಸಗಳಿಗೆ ಬೆಂಕಿ ಹಚ್ಚಿದ್ದಾರೆ. ಬಿಹಾರ, ಉತ್ತರಪ್ರದೇಶ, ಹರ್ಯಾಣದ ಹಾಗೂ ತೆಲಂಗಾಣದ ಹಲವಾರು ರಾಜ್ಯಗಳಲ್ಲಿ ಪ್ರತಿಭಟನಕಾರರು ರೈಲ್ವೆ ಸಂಚಾರಕ್ಕೆ ತಡೆಯೊಡ್ಡಿದ್ದಾರೆ ಹಾಗೂ ರೈಲ್ವೆ ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ. ಪಶ್ಚಿಮಬಂಗಾಳ ಹಾಗೂ ಮಧ್ಯಪ್ರದೇಶ, ಒಡಿಶಾ ಮತ್ತಿತರ ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆದಿರುವುದಾಗಿ ವರದಿಯಾಗಿವೆ.

ಅಗ್ನಿಪತ್ ವಿರುದ್ಧದ ಪ್ರತಿಭಟನೆ ದಕ್ಷಿಣದ ರಾಜ್ಯವಾದ ತೆಲಂಗಾಣಕ್ಕೂ ಹರಡಿದ್ದು, ಸಿಕಂದರಾಬಾದ್ನ ರೈಲ್ವೆ ನಿಲ್ದಾಣದಲ್ಲಿ ಸೇನಾಕಾಂಕ್ಷಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ವ್ಯಾಪಕ ಹಿಂಸಾಚಾರ ಮತ್ತು ದೊಂಬಿಯಲ್ಲಿ ತೊಡಗಿದ್ದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಗುಂಡುಹಾರಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ ಹಾಗೂ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಕಂದರಾಬಾದ್ ರೈಲು ನಿಲ್ದಾಣದ ಬಳಿ ಪ್ರತಿಭಟನಕಾರರು ರೈಲ್ವೆ ಹಳಿ ಮೇಲೆ ಕುಳಿತು ಮೂರು ತಾಸುಗಳ ಕಾಲ ಪ್ರತಿಭಟನೆ ನಡೆಸಿದರು. ಸುಮಾರು 5 ಸಾವಿರದಷ್ಟಿದ್ದ ಪ್ರತಿಭಟನಕಾರರು ಮೂರು ರೈಲುಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿಯನ್ನು ಕೈಮೀರಿ ಹೋಗುತ್ತಿರುವುದನ್ನು ಮನಗಂಡ ಪೊಲೀಸರು ಗೋಲಿಬಾರ್ ನಡೆಸಬೇಕಾಯಿತೆಂದು ಮೂಲಗಳು ತಿಳಿಸಿವೆ.

ಉದ್ರಿಕ್ತ ಪ್ರತಿಭಟನಕಾರರು ಈಸ್ಟ್ ಕೋಸ್ಟ್ ಎಕ್ಸ್ ಪ್ರೆಸ್, ರಾಜ್ ಕೋಟ್ ಎಕ್ಸ್ ಪ್ರೆಸ್ ಹಾಗೂ ಅಜಂತಾ ಎಕ್ಸ್ ಪ್ರೆಸ್ ರೈಲುಗಳ ಮೇಲೆ ಹಿಂಸಾನಿರತರು ಬೆಂಕಿ ಹಚ್ಚಿದ್ದಾರೆ. ಹಿಂಸಾಚಾರ ಉಲ್ಬಣಿಸುವ ಭೀತಿಯ ಹಿನ್ನೆಲೆಯಲ್ಲಿ 71 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.
ಪಶ್ಚಿಮಬಂಗಾಳದಲ್ಲಿಯೂ ಶುಕ್ರವಾರ ಅಗ್ನಿಪಥ್ ವಿರುದ್ಧ ಪ್ರತಿಭಟನೆಗಳು ನಡೆದಿರುವುದಾಗಿ ವರದಿಯಾಗಿದೆ. ಬೊಂಗಾವೊನ್ನಲ್ಲಿ ಪ್ರತಿಟನಕಾರರು ರೈಲು ತಡೆ ನಡೆಸಿದ್ದಾರೆ. ಹೌರಾ ಸೇತುವೆಯಲ್ಲಿಯೂ ಸಂಚಾರ ನಿರ್ಬಂಧಿಸಲು ಪ್ರತಿಭಚನಕಾರರು ಯತ್ನಿಸಿದ್ದಾರೆ. ಆದರೆ ಪೊಲೀಸರು ಲಾಠಿಚಾರ್ತ್ ನಡೆಸಿದ ಪ್ರತಿಭಟನಕಾರರನ್ನು ಚದುರಿಸಿದರು.  ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) ಶುಕ್ರವಾರ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.

ನೂತನ ಅಗ್ನಿಪಥ್ ನೀತಿಯಡಿ ನೇಮಗೊಂಡವರನ್ನು ಸೇನಾಪಡೆಯಲ್ಲಿ ಅಗ್ನಿವೀರರು ಎಂದು ಕರೆಯಲಾಗುವುದು ಹಾಗೂ ಅವರಿಗೆ ನಾಲ್ಕು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಲು ಅವಕಶ ನೀಡಲಾಗುವುದು.

ಸಮಷ್ಟಿಪುರದಲ್ಲಿ ರೈಲು ಬೋಗಿಗಳಿಗೆ ಬೆಂಕಿ

ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿಯೂ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಅಲ್ಲಿ ಜಮ್ಮುತಾವಿ ಎಕ್ಸ್‌ಪ್ರೆಸ್‌ ನ ಎರಡು ಬೋಗಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೆ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವೆಂದು ತಿಳಿದುಬಂದಿದೆ. ಲಾಖಿಸರಾಯ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಾಲಯದ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದಾರೆ. ನಳಂದಾ ಜಿಲ್ಲೆಯ ಇಸ್ಲಾಮ್ ಪುರ ನಿಲ್ದಾಣದಲ್ಲಿ ಇಸ್ಲಾಮ್ಪುರ-ಹಾತಿಯಾ ಎಕ್ಸ್ ಪ್ರೆಸ್ ರೈಲುಗಳ ಮೇಲೆ ಉದ್ರಿಕ್ತ ಗುಂಪೊಂದು ಬೆಂಕಿ ಹಚ್ಚಿದೆ. ಮೂರು ಎಸಿ ರೈಲು ಬೋಗಿಗಳು ಸಂಪೂರ್ಣವಾಗಿ ಸುಟ್ಟುಕರಲಾಗಿದ್ದು, ಹಲವಾರು ಇತರ ಕೋಚ್ ಗಳಿಗೆ ಹಾನಿಯಾಗಿದೆ.

ಉತ್ತರಪ್ರದೇಶದ ಬಾಲಿಯಾ ಜಿಲ್ಲೆಯಲ್ಲಿ ಗುಂಪೊಂದು ರೈಲು ನಿಲ್ದಾಣಕ್ಕೆ ನುಗ್ಗಿ, ರೈಲು ಬೋಗಿಗೆ ಬೆಂಕಿ ಹಚ್ಚಿದೆ ಹಾಗೂ ನಿಲ್ದಾಣದಲ್ಲಿ ಹಲವಾರು ಸೊತ್ತುಗಳಿಗೆ ಹಾನಿಯುಂಟು ಮಾಡಿದೆ. ಶುಕ್ರವಾರದಿಂದ ಭುಗಿಲೆದ್ದಿರುವ ಅಗ್ನಿಪಥ್ ವಿರೋಧಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ 200ಕ್ಕೂ ಅಧಿಕ ರೈಲುಗಳ ಸಂಚಾರ ಪ್ರಯಾಣ ಬಾಧಿತವಾಗಿದ್ದು, 35ಕ್ಕೂ ಅಧಿಕ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆಯೆಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.

ಹರ್ಯಾಣದಲ್ಲಿ ಇಂಟರ್ನೆಟ್,ಎಸ್ಎಂಎಸ್ ಸೇವೆ ರದ್ದು

ನೂತನ ಸೇನ ನೇಮಕಾತಿ ನೀತಿ ಅಗ್ನಿಪಥ್ ವಿರುದ್ಧ ಸೇನಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ಹಿನ್ನೆಲೆಯಲ್ಲಿ ಹರ್ಯಾಣದ ಗುರ್ಗಾಂವ್ ನಗರದಲ್ಲಿ ಬೃಹತ್ ಸಭೆಗಳನ್ನು ಸ್ಥಳೀಯಾಡಳಿತವು ನಿಷೇಧಿಸಿದೆ.ಗುರುವಾರ ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾದ ಪಲ್ವಾಲ್ನಲ್ಲಿ ಮೊಬೈಲ್ ಇಂಟರ್ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು 24 ತಾಸುಗಳ ಕಾಲ ಕಡಿತಗೊಳಿಸಲಾಗಿದೆ. ಫರಿದಾಬಾದ್ನ ಭಲ್ಲಬ್ಘರ್ನಲ್ಲೂ ಸುಮಾರು 24 ತಾಸುಗಳ ಕಾಲ ಸಂಪರ್ಕಶೀಲತೆಯನ್ನು ರದ್ದುಪಡಿಸಲಾಗಿದೆ.

ಯುವಜನತೆಗೆ ಸುವರ್ಣಾವಕಾಶ: ಅಗ್ನಿಪಥ್ ಸಮರ್ಥಿಸಿದ ರಾಜ್ ನಾಥ್ ಸಿಂಗ್

ನೂತನ ಸೇನಾ ನೇಮಕಾತಿ ನೀತಿ ‘ಅಗ್ನಿಪಥ್’ ಅನ್ನು ರಕ್ಷಣಾ ಸಚಿವ ರಾಜ್ನಾಥ್ ಶುಕ್ರವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ರಕ್ಷಣಾ ಪಡೆಗಳಿಗೆ ಸೇರ್ಪಡೆಗೊಳ್ಳಲು ಹಾಗೂ ದೇಶಸೇವೆ ಸಲ್ಲಿಸಲು ಯುವಜನತೆಗೆ ದೊರೆತಿರುವ ‘ಸುವರ್ಣಾವಕಾಶ’ ಇದಾಗಿದೆಯೆಂದವರು ಹೇಳಿದ್ದಾರೆ.  ಅಗ್ನಿವೀರರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು 21ರಿಂದ 23 ವರ್ಷಗಳಿಗೆ ಹೆಚ್ಚಿಸಲಾಗಿದೆಯೆಂದೂ ಅವರು ತಿಳಿಸಿದ್ದಾರೆ.

ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ ಕಳೆದ ಎರಡು ವರ್ಷಗಳ ಕಾಲ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಕೆಲವು ತೊಂದರೆಗಳಿಂದಾಗಿ ಹಲವಾರು ಯುವಜನರಿಗೆ ಸೇನೆಗೆ ಸೇರುವ ಅವಕಾಶ ದೊರೆತಿರಲಿಲ್ಲ. ಇದು ವಾಸ್ತವ. ದೇಶದ ಯುವಜನರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು, ಪ್ರಧಾನಿಯವರ ಅನುಮೋದನೆಯೊಂದಿಗೆ ಅಗ್ನಿವೀರರ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು 21ರಿಂದ 23 ವರ್ಷಗಳಿಗೆ ಹೆಚ್ಚಿಸಲಾಗಿದೆ’’ ಎಂದವರು ತಿಳಿಸಿದ್ದಾರೆ. ವಯೋಮಿತಿಯ ಏರಿಕೆಯಿಂದಾಗಿ ಹಲವಾರು ಯುವಜನರು ‘ಅಗ್ನಿವೀರ’ರಾಗುವ ಅರ್ಹತೆಯನ್ನು ಹೆಚ್ಚಾಗಲಿದೆ. ಕೆಲವೇ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಎಲ್ಲಾ ಯುವಜನರು ಸೇನೆಗೆ ಸೇರ್ಪಡೆಗೊಳ್ಳುವಂತೆ ಹಾಗೂ ಅದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನಾವು ಮನವಿ ಮಾಡುತ್ತೇವೆ’’ ಎಂದವರು ಹೇಳಿದ್ದಾರೆ.ರಾಜ್ ನಾಥ್ ಸಿಂಗ್ ಅವರು ಎರಡು ದಿನಗಳ ಜಮ್ಮುಕಾಶ್ಮೀರ ಭೇಟಿಗಾಗಿ ಶ್ರೀನಗರಕ್ಕೆ ಆಗಮಿಸಿದ್ದಾರೆ.

पिछले दो वर्ष कोरोना महामारी के कारण सेना में भर्ती प्रक्रिया प्रभावित हुई थी, इसलिए प्रधानमंत्री श्री @narendramodi जी ने ‘अग्निपथ योजना’ में उन युवाओं की चिंता करते हुए पहले वर्ष उम्र सीमा में दो वर्ष की रियायत देकर उसे 21 साल से 23 साल करने का संवेदनशील निर्णय लिया है।

— Amit Shah (@AmitShah) June 17, 2022

मैं प्रधानमंत्री श्री @narendramodi को युवाओं के भविष्य की चिंता करने और उनके प्रति संवेदनशीलता के लिए हृदय से धन्यवाद करता हूँ।

मैं युवाओं से अपील करता हूँ कि सेना में भर्ती की प्रक्रिया कुछ ही दिनों में प्रारम्भ होने जा रही है। वे इसके लिए अपनी तैयारी शुरू करें। 3/3

— Rajnath Singh (@rajnathsingh) June 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X