Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ...

ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಜೂ.18ರಂದು ವಿದ್ಯುತ್‌ ಅದಾಲತ್‌

ವಾರ್ತಾಭಾರತಿವಾರ್ತಾಭಾರತಿ17 Jun 2022 3:17 PM IST
share
ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಜೂ.18ರಂದು ವಿದ್ಯುತ್‌ ಅದಾಲತ್‌

ಬೆಂಗಳೂರು, ಜೂ.17:  ಗ್ರಾಮೀಣ ಭಾಗದ ವಿದ್ಯುತ್‌ ಸಂಬಂಧಿತ ಸಮಸ್ಯೆಗಳ ಪರಿಹಾರ ಮತ್ತು ರಾಜ್ಯ ಸರಕಾರದ ಯೋಜನೆಗಳ ಕುರಿತು ಗ್ರಾಹಕರಿಗೆ ಮಾಹಿತಿ ನೀಡಲು 'ವಿದ್ಯುತ್‌ ಅದಾಲತ್‌'  ಬೆಸ್ಕಾಂ ವ್ಯಾಪ್ತಿಯ̇ 8 ಜಿಲ್ಲೆಗಳ  104 ಹಳ್ಳಿಗಳಲ್ಲಿ ಜೂನ್‌ 18ರಂದು ನಡೆಯಲಿದೆ.

ಬೆಸ್ಕಾಂ ನ ಆಡಳಿತ ನಿರ್ದೇಶಕರಿಂದ ಹಿಡಿದು ಹಿರಿಯ ಅಧಿಕಾರಿಗಳು ವಿದ್ಯುತ್‌ ಅದಾಲತ್‌ ನಲ್ಲಿ ಖುದ್ದು ಭಾಗವಹಿಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲಿದ್ದಾರೆ. ಜತೆಗೆ ಕಾಲಮಿತಿಯಲ್ಲಿ ವಿದ್ಯುತ್‌ ಸಮಸ್ಯಗಳಿಗೆ ಪರಿಹಾರವನ್ನೂ  ಒದಗಿಸಲಿದ್ದಾರೆ.

ಗ್ರಾಮೀಣ ಭಾಗದ ಜನರ ವಿದ್ಯುತ್‌ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎನ್ನುವ ಸದುದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್‌ ಅದಾಲತ್‌ ನಡೆಸಲು ಇಂಧನ  ಸಚಿವ ವಿ. ಸುನಿಲ್‌ ಕುಮಾರ್‌ ಎಲ್ಲ ಎಸ್ಕಾಂಗಳಿಗೆ ಸೂಚಿಸಿದ್ದರು.

ವಿದ್ಯುತ್‌ ಸಂಬಂಧಿತ ಕುಂದು-ಕೊರತೆಗಳನ್ನು ಆಲಿಸಿ ಅದಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುವುದು ಅಥವ ನಿಗದಿತ ಕಾಲಮಿತಿಯೊಳಗೆ ನಿವಾರಿಸುವ ಉದ್ದೇಶದಿಂದ ಎಲ್ಲ ಎಸ್ಕಾಂಗಳಲ್ಲಿ ಅದಾಲತ್‌ ಏಕಕಾಲದಲ್ಲಿ ನಡೆಯಲಿದೆ. ಬೆಸ್ಕಾಂ ವ್ಯಾಪ್ತಿಯ 104 ಹಳ್ಳಿಗಳಲ್ಲಿ ಶನಿವಾರ ( ಜೂನ್‌ 18) ಅದಾಲತ್‌ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬೆಸ್ಕಾಂ ನ ಮುಖ್ಯ ಪ್ರಧಾನ ವ್ಯವಸ್ಥಾಪಕ (ಆಪರೇಷನ್ಸ್‌ ) ಎಂ.ಎಲ್. ನಾಗರಾಜು ತಿಳಿಸಿದ್ದಾರೆ.

ಗ್ರಾಹಕರು ದಿನನಿತ್ಯ ಎದುರಿಸುತ್ತಿರುವ ವಿದ್ಯುತ್‌ ಸಮಸ್ಯೆಗಳಾದ ವಿದ್ಯುತ್‌ ಪೂರೈಕೆಯಲ್ಲಿನ  ವ್ಯತ್ಯಯ, ಬಿಲ್ಲಿಂಗ್‌ ಇನ್ನಿತರ ಸಮಸ್ಯೆಗಳನ್ನು  ಅದಾಲತ್‌ ನಲ್ಲಿ ಆಲಿಸಿ ಪರಿಹಾರ ಸೂಚಿಲಾಗುವುದು ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ಹಳ್ಳಿಗಳ ವ್ಯಾಪ್ತಿಯ ಉಪ-ವಿಭಾಗಗಳಲ್ಲಿ ನಡೆಯುವ ವಿದ್ಯುತ್‌ ಅದಾಲತ್‌ ಗೆ ಹಾಜರಾಗುವ ಹಿರಿಯ ಅಧಿಕಾರಿಗಳು,ಆ ಹಳ್ಳಿಗೆ ಒದಗಿಸಿರುವ ವಿದ್ಯುತ್‌ ಪೂರೈಕೆ ಮೂಲಸೌಕರ್ಯಗಳು ಮತ್ತು ಆ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ಹೊಂದಿರಬೇಕು ಎಂದು ಬೆಸ್ಕಾಂ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿದ್ಯುತ್‌ ಅದಾಲತ್‌ ಸಭೆಯಲ್ಲಿ, ವಿದ್ಯುತ್‌ ಸುರಕ್ಷತೆ, ವಿದ್ಯುತ್‌ ಕಳ್ಳತನ ತಡೆ, ಜನಸ್ನೇಹಿ ವಿದ್ಯುತ್‌ ಸೇವೆಗಳು, ಸೌರ ವಿದ್ಯುತ್‌, ವಾಟ್ಸ್‌ ಆ್ಯಪ್‌ ಸಹಾಯವಾಣಿ ಮತ್ತು ಸರಕಾರದ ಇನ್ನಿತರ ಯೋಜನೆಗಳ ಕುರಿತು ಗ್ರಾಹಕರಿಗೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

ಆನ್‌ ಲೈನ್‌ ಜನಸ್ನೇಹಿ ವಿದ್ಯುತ್‌ ಸೇವೆಗಳ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಗ್ರಾಹಕರಿಗೆ ಅರಿವು ಮೂಡಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಈ ಅಭಿಯಾನವನ್ನು ಆದ್ಯತೆಯ ಮೇರೆಗೆ ತಾಲೂಕಿನ ಗಡಿ ಭಾಗದ ಹಳ್ಳಿಗಳಿಂದ ಆರಂಭಿಸಿ ಪ್ರತಿ ಹಳ್ಳಿಗಳಿಗೆ ವಿಸ್ತರಿಸಲಾಗುವುದು.  ಪ್ರತಿ ತಿಂಗಳ  ಅಭಿಯಾನದ ಮಾಹಿತಿಗಳನ್ನು ನಿಗದಿತ ನಮೂನೆಯಲ್ಲಿ ನಮೂದಿಸಿ ಮಾಹಿತಿಯನ್ನು ಸರಕಾರಕ್ಕೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಬೆಸ್ಕಾಂ  ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X