ನಾಳೆ (ಜೂ.18) ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ

ಬೆಂಗಳೂರು, ಜೂ.17: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ಶನಿವಾರ (ಜೂನ್ 18) ಪ್ರಕಟವಾಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 'ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು' ಎಂದಿದ್ದಾರೆ.
2021-22 ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು ಎಪ್ರಿಲ್ 22ರಿಂದ ಮೇ 18 ರವರೆಗೆ ನಡೆದಿದ್ದು, ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು.
ಫಲಿತಾಂಶವನ್ನು https://karresults.nic.in/ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ದಿನಾಂಕ ಹಾಗೂ ಪೂರಕ ಪರೀಕ್ಷೆ ದಿನಾಂಕವನ್ನು ಜೂ.18ರಂದು ತಿಳಿಸುವ ಸಾಧ್ಯತೆ ಇದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students.







