Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ:...

ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

‘'ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರದಿಂದ ಅಗ್ನಿಪಥ್ ಯೋಜನೆ''

ವಾರ್ತಾಭಾರತಿವಾರ್ತಾಭಾರತಿ17 Jun 2022 5:16 PM IST
share
ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು, ಜೂ. 17: ‘ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್' ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೇ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು' ಎಂದು ಸಲಹೆ ನೀಡಿದ್ದಾರೆ.

‘ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ‘ಅಗ್ನಿಪಥ್ ಯೋಜನೆ' ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ?' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ, ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ' ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

1
ಸೇನೆಯ ಅಲ್ಪಾವಧಿ ನೇಮಕ ಯೋಜನೆ 'ಅಗ್ನಿಪಥ್' ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ.
ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ.
ಈಗ #AgnipathScheme ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ.‌
ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು.
ಆ ನಂತರ ಯುವಕರ ಭವಿಷ್ಯವೇನು? pic.twitter.com/jMB0Se3oXN

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X