ರಂಗ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ : ಮೈಸೂರು ರಂಗಾಯಣದಲ್ಲಿ ಪ್ರಸಕ್ತ ಸಾಲಿನಲ್ಲಿ ರಂಗಶಿಕ್ಷಣದಲ್ಲಿ ಡಿಪ್ಲೋಮಾ ಕೋರ್ಸ್‌ನಲ್ಲಿ ಖಾಲಿ ಇರುವ ರಂಗಶಿಕ್ಷಕರ ೨ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ನಾಟಕ ಶಾಲೆಯ ಪದವಿ ಅಥವಾ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೋಮಾ ಪಡೆದಿರುವ, ರಂಗಭೂಮಿಯಲ್ಲಿ ಅನುಭವ ಹಾಗೂ ರಂಗಶಿಕ್ಷಣದಲ್ಲಿ ಶಿಕ್ಷಕರಾಗಿ ಅನುಭವ ಹೊಂದಿರುವ ಅಭ್ಯರ್ಥಿಗಳು ಜುಲೈ ೮ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಜುಲೈ ೧೩ರಂದು ಬೆಳಗ್ಗೆ ೧೦:೩೦ಕ್ಕೆ ಮೈಸೂರಿನ ರಂಗಾಯಣದಲ್ಲಿ ಸಂದರ್ಶನ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರಂಗಾಯಣದ ವೆಬ್‌ಸೈಟ್-www.rangayana.org-ಅನ್ನು ಸಂಪರ್ಕಿಸಬ ಹುದು ಎಂದು ರಂಗಾಯಣದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





