Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಮಂತ್ರಿ ಭೇಟಿ; ಕಾರ್ಯಕ್ರಮ...

ಪ್ರಧಾನಮಂತ್ರಿ ಭೇಟಿ; ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ18 Jun 2022 2:18 PM IST
share
ಪ್ರಧಾನಮಂತ್ರಿ ಭೇಟಿ; ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ: ಸಿಎಂ  ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯಕ್ಕೆ ಜೂನ್ 20 ಮತ್ತು 21ರಂದು  ಎರಡು ದಿನಗಳ ಪ್ರವಾಸ ಕೈಗೊಳ್ಳಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.

ಅವರು ಇಂದು  ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟ ದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು  ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಜೂನ್ 20ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದ ಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ. ಅಧಿಕಾರಿಗಳ ಕೂಡ  ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್.ಪಿ.ಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. 

ಕಾರ್ಯಕ್ರಮ ವಿವರ

ಪ್ರಧಾನ ಮಂತ್ರಿಗಳು ಬೆಳಿಗ್ಗೆ 11.55 ಕ್ಕೆ ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬ್ರೈನ್ ಸೆಲ್ ಅಭಿವೃದ್ಧಿ ಕೇಂದ್ರವನ್ನು  ಕ್ರಿಸ್ ಗೋಪಾಲಕೃಷ್ಣ ಅವರು 450 ಕೋಟಿ ರೂ.ಗಳ ದೇಣಿಗೆಯಲ್ಲಿ ನಿರ್ಮಿಸಿದ್ದು ಅದರ ಉದ್ಘಾಟನೆ ನಡೆಯಲಿದೆ. ನಂತರ ಮೈಂಡ್ ಟ್ರೀ ಸಂಸ್ಥೆ 850 ಹಾಸಿಗೆಗಳ ಸಂಶೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದರು. 

ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ

ನಂತರ 15000 ಕೋಟಿ ರೂ.ಗಳ ವೆಚ್ಚದ  ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜೊತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ದೊರಕಲಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಚಾಲನೆ ದೊರಕಲಿದೆ. ಎಸ್.ಟಿ. ಆರ್.ಆರ್. ಯೋಜನೆಗೂ ಶಂಕುಸ್ಥಾಪನೆ ನೆರವೇರಲಿದೆ. ದಾಬಸಪೇಟೆಯಿಂದ ಹೊಸಕೋಟೆ ಹಳೆ ಮದ್ರಾಸು ರಸ್ತೆಯವರೆಗೂ ಸಂಪರ್ಕಿಸುವ  ರಸ್ತೆ ಇದು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೊಂದಿಗೆ 2 ಬಾರಿ ಮಾತನಾಡಿದ ಮೇಲೆ ವಿಶೇಷ ವಿನಾಯ್ತಿ ನೀಡಿ ಆದೇಶ ಮಾಡಿದ್ದಾರೆ.  ವಿಶೇಷ ವಿನಾಯ್ತಿ ನೀಡಿದ ಮೇಲೆ ಈ ಯೋಜನೆಗೆ ಚಾಲನೆ ದೊರೆಯಲಿದೆ. ಇಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದರು.

ಇದಾದ ನಂತರ ಬೆಂಗಳೂರು ವಿವಿಯಲ್ಲಿರುವ ಡಾ: ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿ ಮೂರ್ತಿ ಅನಾವರಣ ಹಾಗೂ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಲಿದ್ದಾರೆ. ಅಲ್ಲಿ ಎರಡು ದೊಡ್ಡ ಕಾರ್ಯಕ್ರಮಗಳಿವೆ. ಫಲಾನುಭವಿಗಳ ಸಮ್ಮೇಳನವಿದೆ. ಅದನ್ನು ಮುಗಿಸಿ ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಿ

ಈ ಎಲ್ಲಾ ಕಾರ್ಯಕ್ರಮಗಳ ಸಿದ್ಧತೆಗಳ ವೀಕ್ಷಣೆ ಮಾಡಿದ್ದು, ಅಚ್ಚುಕಟ್ಟಾಗಿ ಸಿದ್ಧತೆ ಆಗುತ್ತಿದೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಆಗಮಿಸುವ ಸಂದರ್ಭದಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಅಗತ್ಯ ವ್ಯವಸ್ಥೆ ಮಾಡಲು ತಿಳಿಸಲಾಗಿದೆ.  ಬೆಂಗಳೂರಿನ ಮಹಾಜನತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ ಎಂದರು.

ಕೋವಿಡ್ ಪರೀಕ್ಷೆ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಬೇಕು. ಒಳಾಂಗಣ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾತ್ರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X