ಮಂಗಳೂರು: ಪದ್ಮಶ್ರೇಣಿಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು : ೨೦೨೨ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ,, ಪದ್ಮಶ್ರೀ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಾಂತ್ರಿಕ, ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ, ಯೋಗ, ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕೃತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಒಳಗೊಂಡಂತೆ ಅತ್ಯುತ್ತಮ ಸೇವೆ ಸಲ್ಲಿಸಿದ, ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.
ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ, ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅರ್ಹ ಅಭ್ಯರ್ಥಿಗಳು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಜೂ.೨೮ರೊಳಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.





