Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೈವ ಸಂಕಲ್ಪ ಯೋಜನೆಯಡಿ 25 ದೇವಸ್ಥಾನಗಳ...

ದೈವ ಸಂಕಲ್ಪ ಯೋಜನೆಯಡಿ 25 ದೇವಸ್ಥಾನಗಳ ಅಭಿವೃದ್ಧಿಗೆ 1,140 ಕೋ.ರೂ. ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 Jun 2022 7:33 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೈವ ಸಂಕಲ್ಪ ಯೋಜನೆಯಡಿ 25 ದೇವಸ್ಥಾನಗಳ ಅಭಿವೃದ್ಧಿಗೆ 1,140 ಕೋ.ರೂ. ಅನುದಾನ: ಸಚಿವೆ ಶಶಿಕಲಾ ಜೊಲ್ಲೆ

ಕಾರ್ಕಳ, ಜೂ.19: ದೈವ ಸಂಕಲ್ಪ ಯೋಜನೆಯಡಿ ದೇವಸ್ಥಾನಗಳ ಅಭಿವೃದ್ಧಿಗೆ 1,140 ಕೋ.ರೂ ಅನುದಾನ ಮೀಸಲಿರಿಸಲಾಗಿದೆ. ರಾಜ್ಯದ ಎ ಶ್ರೇಣಿಯ 25 ದೇವಸ್ಥಾನಗಳನ್ನು ಈ ಯೋಜನೆಯಡಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲಾನ್ ಸಿದ್ದತೆಗೊಂಡಿದ್ದು, ಟೆಂಡರ್ ಕರೆಯಲಾಗಿದೆ ಎಂದು ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು, ಈ ಪ್ರಯುಕ್ತ ರವಿವಾರ ನಡೆದ ಸಮಾರಂಭದಲ್ಲಿ ಮುಷ್ಠಿ ಕಾಣಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ಯೋಜನೆಯಲ್ಲಿ ದೇವಳಗಳ ಅಭಿವೃದ್ಧಿ ಜತೆಗೆ ದೇವಸ್ಥಾನಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಚರಂಡಿ ನಿರ್ಮಾಣ, ಭೂಗತ ಕೇಬಲ ವ್ಯವಸ್ಥೆ, ವಿದ್ಯುತ್ ದೀಪ, ಯಾತ್ರಿ ನಿವಾಸಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ಅವರು ವಿವರಿಸಿದರು.

ಅವಿಭಜಿತ ದ.ಕ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಸೌತಡ್ಕ ಗಣಪತಿ ದೇವಸ್ಥಾನ, ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನ, ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ರಾಜ್ಯದ 25 ದೇವಸ್ಥಾನಗಳ ಅಭಿವೃದ್ಧಿ ಕುರಿತು‌ ನೀಲ ನಕಾಶೆ ಸಿದ್ಧವಾಗಿದೆ ಎಂದರು.

ಸುಮಾರು15 ಕೋ.ರೂ ವೆಚ್ಚದಲ್ಲಿ ಮಾರಿಯಮ್ಮ ದೇವಳವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಮುಜರಾಯಿ ಇಲಾಖೆಯ ವತಿಯಿಂದ 1 ಕೋ.ರೂ ಅನುದಾನ ಬಿಡುಗಡೆಗೊಳಿಸುವುದಾಗಿ ಹೇಳಿದರು.

ಕಾಶಿ ಯಾತ್ರೆಗೆ ವಿಶೇಷ ಅನುದಾನ ಘೋಷಣೆ:

 ಪ್ರತೀವರ್ಷ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ತಲಾ 30 ಸಾವಿರ ಯಾತ್ರಾರ್ಥಿಗಳಿಗೆ ಮುಜರಾಯಿ ಇಲಾಖೆಯಿಂದ ತಲಾ 5 ಸಾವಿರ ರೂ. ಸಹಾಯಧನವನ್ನು ನೀಡಲಾಗುವುದು. ಆಗಸ್ಟ್ ತಿಂಗಳಿನಿಂದ ಬೆಂಗಳೂರು,‌ ಕಾಶಿ, ಅಯೋಧ್ಯೆ, ಪ್ರಯಾಗರಾಜ್ ನಡುವೆ ಯಾತ್ರಾರ್ಥಿಗಳಿಗೆ ವಿಶೇಷ ರೈಲುಗಳನ್ನು ಓಡಿಸಲಾಗುವುದು. ಏಳು ದಿನಗಳ ಈ ಪ್ರವಾಸದಲ್ಲಿ ರೈಲುಗಳನ್ನು ಸುಸಜ್ಜಿತವಾಗಿ ಮಾರ್ಪಾಟುಗೊಳಿಸಲಾಗಿದ್ದು, ಮೊದಲ ಬೋಗಿಯಲ್ಲಿ ದೇವಸ್ಥಾನದ ಸ್ವರೂಪವನ್ನು ನಿರ್ಮಿಸಿ ಯಾತ್ರಾರ್ಥಿಗಳಿಗೆ ಭಜನೆ ಕೀರ್ತನೆಗಳನ್ನು ಮಾಡಿಕೊಂಡು ಯಾತ್ರೆ ಕೈಗೊಳ್ಳುವ ಅವಕಾಶ ಕಲ್ಪಿಸಲಾಗಿದೆ. 14 ಬೋಗಿಗಳ ರೈಲಿನ ಒಂದು ಪಾರ್ಶ್ವದಲ್ಲಿ ರಾಜ್ಯದ ಎ ಶ್ರೇಣಿಯ ದೇವಸ್ಥಾನಗಳ ಮಾಹಿತಿ ಹಾಗೂ ಭಿತ್ತಿಚಿತ್ರಗಳು, ಇನ್ನೊಂದು ಪಾರ್ಶ್ವದಲ್ಲಿ ಕಾಶಿ ಮತ್ತು  ಅಯೋಧ್ಯೆಯ ಮಾಹಿತಿ ಹಾಗೂ ಭಿತ್ತಿಚಿತ್ರಗಳನ್ನು ವಿನ್ಯಾಸಗೊಳಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ರಾಜ್ಯದ ಮುಜರಾಯಿ ದೇವಸ್ಥಾನಗಳ ಅರ್ಚಕರ ಶ್ರೇಯೋಭಿವೃದ್ದಿಗಾಗಿ ಅರ್ಚಕರಿಗೆ ವಾರ್ಷಿಕ ನೀಡಲಾಗುತ್ತಿದ್ದ ತಸ್ತೀಕ್ 60 ಸಾವಿರ ಕ್ಕೆ ಏರಿಸಲಾಗಿದೆ ಅರ್ಚಕರ ಕುಟುಂಬಗಳಿಗೆ ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದರು. 

ಟೆಂಪಲ್ ಟೂರಿಸಂ ಕನಸು ಸಾಕಾರಗೊಳ್ಳುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದ್ದು, ಕೊರೋನ ಭೀತಿಯ ನಡುವೆಯೂ ಲೋಕ ಕಲ್ಯಾಣಾರ್ಥವಾಗಿ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಜಯದಶಮಿಯ ಸಂದರ್ಭದಲ್ಲಿ ಧನ್ವಂತರಿ ಜಪ,ದೀಪಾವಳಿ ಬಲಿ ಪಾಡ್ಯಮಿಯ ಗೋಧೂಳಿ ಮುಹೂರ್ತದಲ್ಲಿ 35 ಸಾವಿರ ದೇವಸ್ಥಾನಗಳಲ್ಲಿ ಗೋಪೂಜೆಯ ಮೂಲಕ ಐತಿಹಾಸಿಕ ಕಾರ್ಯಕ್ರಮ ನಡೆಸಿ ದೇಸೀ ಗೋವುಗಳ ಮಹತ್ವ, ದೇಸೀ ಗೋವುಗಳ ಕೊರತೆಯ ಮಾಹಿತಿ, ರೈತರ ಮನೆಯಲ್ಲಿ ದೇಸೀ ಗೋವುಗಳನ್ನು ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುವುದು. 

ಸಮಗ್ರ ದೇವಸ್ಥಾನ ನಿರ್ವಹಣಾ ವ್ಯವಸ್ಥೆ: 

ರಾಜ್ಯದಲ್ಲಿನ ಎಲ್ಲಾ ದೇವಸ್ಥಾನಗಳ ಮಾಹಿತಿ, ಪೂಜೆ ಹಾಗೂ ಸೇವೆಗಳ ಮಾಹಿತಿಯನ್ನು ಆನ್ ಲೈನ್ ಮೂಲಕ ಭಕ್ತರಿಗೆ ತಲುಪಿಸಲು ಅಂತರ್ಜಾಲ ಮೂಲಕ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ರಾಜ್ಯದ205 ಎ ಶ್ರೇಣಿ ದೇವಸ್ಥಾನಗಳ ಮಾಹಿತಿಯನ್ನು ಈ ವ್ಯವಸ್ಥೆಯಲ್ಲಿ ಅಳವಡಿಸಲಾಗಿದೆ. ಇ- ಹುಂಡಿ ವ್ಯವಸ್ಥೆಯನ್ನು ಮಾಡುವ ಮೂಲಕ ಭಕ್ತರ ದೇಣಿಗೆಗಳು ನೇರವಾಗಿ ಮುಜರಾಯಿ ದೇವಸ್ಥಾನಗಳಿಗೆ ಜಮೆಯಾಗುವ ಮೂಲಕ ಹಣ ದುರ್ಬಳಕೆಗೆ ಕಡಿವಾಣ ಹಾಕಲಾಗುತ್ತದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

 ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಎಲ್ಲಾ ಭಕ್ತಾದಿಗಳಿಂದ ಉತ್ತಮ ಸಹಕಾರ ಸಿಗುತ್ತಿದೆ, ಭಕ್ತಾದಿಗಳು ಈ. ಪುಣ್ಯ ಕಾರ್ಯದಲ್ಲಿ ಸೇವಾ ಮನೋಭಾವದಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಜತೆಗೆ ಈ ದೇವಸ್ಥಾನಕ್ಕೆ ಹೊಂದಿಕೊಂಡ ಎಲ್ಲಾ  ಗಡಿಗಳ ಜೀರ್ಣೋದ್ಧಾರ ನಡೆಯಲಿದೆ ಎಂದರು‌.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಆಡಳಿತ ಮೊಕ್ತೇಸರರಾದ ಕೆ.ಬಿ.ಗೋಪಾಲಕೃಷ್ಣ ಭಟ್ , ಕೆ.ಬಿ.ರಾಜೇಂದ್ರ, ದೇವಸ್ಥಾನದ ಅರ್ಚಕರಾದ ಪ್ರಸಾದ ತಂತ್ರಿ, ರಘುನಾಥ ಆಚಾರ್ಯ, ಪುರುಷೋತ್ತಮ ಕಲ್ಕೂರ, ಪರಿಚಾರಕ ಹರೀಶ್ ರಾಣೆ, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಉದ್ಯಮಿಗಳಾದ ಸುಜಯ ಕುಮಾರ್ ಶೆಟ್ಟಿ, ಜಗದೀಶ್ ಮಲ್ಯ, ಗಣೇಶ್ ಕಾಮತ್, ಪಾಲಡ್ಕ ನರಸಿಂಹ ಪೈ ಉಪಸ್ಥಿತರಿದ್ದರು.

ಉದ್ಯಮಿ ನವೀನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಶೆಟ್ಟಿ  ಸ್ವಾಗತಿಸಿದರು. ಪುರಸಭೆ ಮಾಜಿ ಸದಸ್ಯ ನವೀನ ದೇವಾಡಿಗ ಪ್ರಸ್ತಾವನೆಗೈದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X